ಬೆಂಗಳೂರು: ರಾಷ್ಟ್ರಧ್ವಜ ನಮ್ಮ ದೇಶದ ಹೆಮ್ಮೆ. ಪ್ರತಿಯೊಬ್ಬ ನಾಗರೀಕನೂ ರಾಷ್ಟ್ರ ಧ್ವಜಕ್ಕೆ ಗೌರವಿಸುವ ಕೆಲಸವಾಗಬೇಕು. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಆ.13 ರಿಂದ ಆ.15 ರ ಹಮ್ಮಿಕೊಳ್ಳಲಾಗಿದೆ.ಪ್ರತಿಯೊಬ್ಬರಲ್ಲೂ ದೇಶಭಕ್ತಿ, ದೇಶಾಭಿಮಾನವನ್ನು ಮೂಡಿಸುವ ಈ ಅಭಿಯಾನವನ್ನು ಎಲ್ಲರೂ ಸಮರ್ಥವಾಗಿ ನಿರ್ವಹಿಸಬೇಕು. ಇದರನ್ವಯ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ತಮ್ಮ ಮನೆಗಳ ಮೇಲೆ ರಾಷ್ಟçಧ್ವಜವನ್ನು ಸಂಜೆ ಸೂರ್ಯಾಸ್ತದವರೆಗೆ ನಿರಂತರವಾಗಿ ಧ್ವಜ ಹಾರಿಸಬೇಕು
ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಜಿಲ್ಲಾ ಕೇಂದ್ರದಲ್ಲಿ ವೈವಿಧ್ಯಮ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಮೂಲಕ ರಾಷ್ಟ್ರಧ್ವಜದ ಗೌರವ ಮತ್ತು ಅದರ ಮೌಲ್ಯಗಳನ್ನು ಗಟ್ಟಿಗೊಳಿಸಿ ದೇಶಭಕ್ತಿಯ ಭಾವವನ್ನು ಮೂಡಿಸಲು ಪ್ರೇರೆಪಿಸುತ್ತದೆ.
ಹರ್ ಘರ್ ತಿರಂಗ ಅಭಿಯಾನದ ಉದ್ದೇಶ:
ನಾಗರಿಕರು ತಮ್ಮ ಮನೆಗಳ ಮೇಲೆ ರಾಷ್ಟçಧ್ವಜವನ್ನು ಹಾರಿಸುವಂತೆ ಉತ್ತೇಜಿಸಲು ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ, ಹರ್ ಘರ್ ತಿರಂಗ ಅಭಿಯಾನವನ್ನು ಆರಂಭಿಸಲಾಗಿದ್ದು, ಇದರ ಉದ್ದೇಶವು ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆಯನ್ನು ತುಂಬುವುದು ಮತ್ತು ರಾಷ್ಟç ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರ ಕೊಡುಗೆಯನ್ನು ಸ್ಮರಿಸುವುದಾಗಿದೆ. ಹಾಗಾಗಿ ಆಗಸ್ಟ್ 13 ರಿಂದ 15 ರವರೆಗೆ ಪ್ರತಿಯೊಬ್ಬರ ಮನೆಗಳಲ್ಲಿ ತಿರಂಗವನ್ನು ಹಾರಿಸುವಂತೆ ಕೋರಲಾಗಿದೆ.
ಇದನ್ನೂ ಓದಿ: ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್ಆರ್ ಹಣ ವಿನಿಯೋಗಿಸಲಿ : ಸಚಿವ ದಿನೇಶ್ ಗುಂಡೂರಾವ್
ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ಸೆಲ್ಫಿಗಳನ್ನು https://hargartiranga.com ನಲ್ಲಿ ಹಂಚಿಕೊಳ್ಳಬಹುದು.
ಧ್ವಜಾರೋಹಣ ಮಾಡಲು ಪಾಲಿಸಬೇಕಾದ ನಿಯಮಗಳು:
ಭಾರತದ ಧ್ವಜ ಸಂಹಿತೆಯು ರಾಷ್ಟ್ರೀಯ ಧ್ವಜವು ಆಯತಾಕಾರವಾಗಿರಬೇಕು, ಉದ್ದ ಮತ್ತು ಎತ್ತರದ ನಿಗದಿತ ಅನುಪಾತದಲ್ಲಿರಬೇಕು.
ಧ್ವಜವನ್ನು ಯಾವುದೇ ರೀತಿಯ ಅಲಂಕಾರ ಉದ್ದೇಶಗಳಿಗಾಗಿ ಬಳಸಬಾರದು.
ತ್ರಿವರ್ಣ ಧ್ವಜಕ್ಕೆ ತನ್ನದೇ ಆದ ಗೌರವ, ಘನತೆ ಇರುತ್ತದೆ. ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಾಗ ಮನೆಯ ಮೇಲಿನ ಅತೀ ಎತ್ತರದ ಜಾಗದಲ್ಲಿ ಮಾಡಬೇಕು.
ಧ್ವಜ ಸ್ಥಂಭ ಮತ್ತು ಧ್ವಜ ನೆರವಾಗಿರಬೇಕು. ಅದು ಎಡಕ್ಕೆ, ಬಲಕ್ಕೆ, ಹಿಂದಕ್ಕೆ, ಮುಂದಕ್ಕೆ ವಾಲಿರಬಾರದು.
ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ, ಸಮಾನವಾಗಿ ಹಾಗೂ ಧ್ವಜದ ಬಲಗಡೆ ಯಾವುದೇ ಧ್ವಜ ಇರಬಾರದು.
ಗಲಿಜಾದ ಮತ್ತು ಹರಿದ ಧ್ವಜವನ್ನು ಬಳಸಬಾರದು.
ಕೇಸರಿ ಬಣ್ಣ ಮೇಲೆ ಇರುವಂತೆ ಧ್ವಜಾರೋಹಣ ಮಾಡಬೇಕು.
ಸಂವಿಧಾನವನ್ನು ಪಾಲಿಸುವುದು ಮತ್ತು ಅದರ ಆದರ್ಶಗಳು ಮತ್ತು ಸಂಸ್ಥೆಗಳು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಭಾರತದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ