ಸಹಜ ಸಾವಲ್ಲ.. ಆತ್ಮಹತ್ಯೆ ಮಾಡಿಕೊಂಡ ಮಾಜಿ ಕ್ರಿಕೆಟಿಗ..!ಅಭಿಮಾನಿಗಳಿಗೆ ಬಿಗ್‌ ಶಾಕ್‌

Graham Thorpe: ಇಂಗ್ಲೆಂಡ್‌ನ ದಿಗ್ಗಜ ಕ್ರಿಕೆಟಿಗ ಗ್ರಹಾಂ ಥೋರ್ಪ್ ಇತ್ತೀಚಗಷ್ಟೆ ಸಾವನ್ನಪ್ಪಿದರು. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ)ಮಾಜಿ ಕ್ರಿಕೆಟಿಗ ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿತ್ತು. ಆದರೆ ಇದೀಗ ಇವರ ಸಾವಿನ ಸುದ್ದಿಗೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಗ್ರಹಾಂ ಪತ್ನಿ ತನ್ನ ಪತಿಯದ್ದು ಸಹಜ ಸಾವಲ್ಲ ಹೊರತಾಗಿ ಆತ್ಮಹತ್ಯೆ ಎಂದು ಬಹಿರಂಗ ಪಡಿಸಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ಆದರೆ ತಂಡಕ್ಕೆ ಸೇರುವ ಮುನ್ನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊನೆಗೂ ಪ್ರಾಣ ಕಳೆದುಕೊಂಡರು.  

2 /8

ಆದಾಗ್ಯೂ, ಫೆಬ್ರವರಿ 2022 ರಲ್ಲಿ, ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ತಂಡವು 4-0 ಅಂತರದಲ್ಲಿ ಸೋತ ನಂತರ ಅವರು ಕೋಚ್ ಹುದ್ದೆಯಿಂದ ಕೆಳಗಿಳಿದರು. ಎಪಿಕ್ ಮಾರ್ಚ್ 2022 ರಲ್ಲಿ ಅಫ್ಘಾನಿಸ್ತಾನದ ಮುಖ್ಯ ಕೋಚ್ ಆದರು.   

3 /8

ಕ್ರಿಕೆಟ್ ಗೆ ವಿದಾಯ ಹೇಳಿದ ನಂತರ ಕೋಚ್ ಆಗಿಯೂ ಕೆಲಸ ಮಾಡಿದ್ದರು . ಅದಷಟೆ ಅಲ್ಲದೆ ಗ್ಹಾಂ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಸಹಾಯಕ ಕೋಚ್ ಆಗಿಯೂ ಕೂಡ ಸೇವೆ ಸಲ್ಲಿಸಿದ್ದಾರೆ.   

4 /8

ಎಷ್ಟೇ ಆಸ್ಪತ್ರೆ ಸುತ್ತಿದರು ಎಷ್ಟು ಖರ್ಚು ಮಾಡಿದರೂ ಆರೋಗ್ಯ ಸಮಸ್ಯೆಗಳಿಂದ ಚೇತರಿಸಿಕೊಲ್ಳದ ಕಾರಣ ಮಾಜಿ ಕ್ರಿಕೆಟಿಗೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಗ್ರಹಾಂ ಪತ್ನಿ ಮಾಹಿತಿ ಹಂಚಿಕೊಂಡಿದ್ದಾರೆ.  

5 /8

ಕಳೆದ ಎರಡು ವರ್ಷಗಳಿಂದ ಗ್ರಹಾಂ ತೀವ್ರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ತಿಳಿದು ಬಂದಿದೆ.  

6 /8

'ಅತ್ಯಂತ ಪ್ರೀತಿಸುವ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳಿದ್ದರೂ ಗ್ರಹಾಂ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ತಾನು ಸತ್ತರೆ ಹೆಂಡತಿ ಮಕ್ಕಳು ಸುಖವಾಗಿರುತ್ತಾರೆ ಎಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಮಂಡಾ ಹೇಳಿದ್ದಾರೆ.  

7 /8

ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಗ್ರಹಾಂ ಥೋರ್ಪ್, ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು. ತನಗಿದ್ದ ಆರೋಗ್ಯ ಸಮಸ್ಯೆಗಳಿಂದ ಕುಟುಂಬಕ್ಕೆ ಹೊರೆಯಾಗುತ್ತಿದ್ದೇನೆ ಎಂದು ಕೊರಗಿದ್ದ ಮಾಜಿ ಕ್ರಿಕೆಟಿಗೆ,  ಇದೇ ಕಾರಣದಿಂದಾಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಹಾಂ ಪತ್ನಿ ಇತ್ತೀಚಿನ ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದಾರೆ.  

8 /8

ಇಂಗ್ಲೆಂಡ್‌ನ ದಿಗ್ಗಜ ಕ್ರಿಕೆಟಿಗ ಗ್ರಹಾಂ ಥೋರ್ಪ್ ಇತ್ತೀಚಗಷ್ಟೆ ಸಾವನ್ನಪ್ಪಿದರು. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ)ಮಾಜಿ ಕ್ರಿಕೆಟಿಗ ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿತ್ತು. ಆದರೆ ಇದೀಗ ಇವರ ಸಾವಿನ ಸುದ್ದಿಗೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಗ್ರಹಾಂ ಪತ್ನಿ ತನ್ನ ಪತಿಯದ್ದು ಸಹಜ ಸಾವಲ್ಲ ಹೊರತಾಗಿ ಆತ್ಮಹತ್ಯೆ ಎಂದು ಬಹಿರಂಗ ಪಡಿಸಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.