Viral News: ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಏತನ್ಮಧ್ಯೆ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವಿಡಿಯೋವೊಂದು ಸಾಕಷ್ಟು ವೈರಲ್ ವೈರಲ್ ಆಗುತ್ತಿದೆ.
ಚಿರತೆ ಹಾವಳಿಯ ನಕಲಿ ವಿಡಿಯೋವನ್ನು (Leopard Fake Video) ಕಿಡಿಗೇಡಿಗಳು ಹರಿಬಿಟ್ಟಿದ್ದು ಸ್ಥಳೀಯರು ಭಯದ ವಾತಾವರಣದಲ್ಲಿರುವ ಘಟನೆ ಹುಬ್ಬಳ್ಳಿ ಸಮೀಪದ ಮಲಕನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ- Shocking Video: ಲಿಫ್ಟ್ನಲ್ಲಿ ಲಿಥಿಯಂ ಬ್ಯಾಟರಿ ತೆಗೆದುಕೊಂಡು ಹೋಗುವಾಗ ಬ್ಲಾಸ್ಟ್..!
ಮಲಕನಕೊಪ್ಪ ತೋಟದ ಮನೆಯೊಂದರಲ್ಲಿ ಕಟ್ಟಿಹಾಕಿದ್ದ ನಾಯಿಯನ್ನು ಚಿರತೆ (Leopard) ತಿಂದು ಹೋಗಿತ್ತು. ಚಿರತೆ ಸೆರೆಗೆ ಅರಣ್ಯ ಇಲಾಖೆಯು ಬೋನು ಕೂಡ ಇಡಲಾಗಿದೆ. ಜನತೆ ಚಿರತೆ ಭಯದಲ್ಲಿ ಇರುವಾಗ ಯಾರೋ ಕಿಡಿಗೇಡಿಗಳು ಹರಿಬಿಟ್ಟ ಹಳೆಯ ವಿಡಿಯೋವೊಂದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಚಿರತೆ ಕುರಿತು ವೈರಲ್ ಆಗಿರುವ ವಿಡಿಯೋ (Viral Video) ಗಮನಿಸಿದ ವಲಯ ಅರಣ್ಯ ಅಧಿಕಾರಿ ಅರುಣಕುಮಾರ ಅಷ್ಟಗಿ ಹಾಗೂ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಡಿಯೋದಲ್ಲಿರುವ ಸ್ಥಳ ಹಾಗೂ ಚಿರತೆ ಪ್ರತ್ಯಕ್ಷವಾಗಿದೆ ಎನ್ನಲಾದ ಸ್ಥಳಕ್ಕೂ ಯಾವುದೇ ಹೊಂದಾಣಿಕೆ ಆಗಿಲ್ಲ. ವಿಡಿಯೋ ಪರಿಶೀಲಿಸಿದಾಗ ಅದು ಹಳೆಯ ವಿಡಿಯೋ ಎಂದು ಗೊತ್ತಾಗಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ- ಜಿಮ್ನಲ್ಲಿ ಕಾರ್ಡಿಯೋ ಸೆಷನ್ ಮಾಡುವಾಗಲೇ ಹೃದಯಾಘಾತ: 54 ವರ್ಷದ ಉದ್ಯಮಿ ನಿಧನ: ದೃಶ್ಯ ಕ್ಯಾಮರಾದಲ್ಲಿ ಸೆರೆ
ಮಲಕನಕೊಪ್ಪ, ತಬಕದಹೊನ್ನಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸತ್ಯ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಶ್ರಮಿಸುತ್ತಿದೆ. ಏತನ್ಮಧ್ಯೆ, ಸುಳ್ಳು ವಿಡಿಯೋ ಹರಿ ಬಿಡುವುದರಿಂದ ಕಾರ್ಯಾಚರಣೆಗೆ ಅಡ್ಡಿ ಆಗುತ್ತದೆ. ಮುಂದೆ ಇಂತಹ ಘಟನೆ ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಅರುಣಕುಮಾರ ಅಷ್ಟಗಿ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.