ಬೆಂಗಳೂರು: ಕೇಂದ್ರ ಸಚಿವ ಎಚ್ಡಿಕೆ ಕುಮಾರಸ್ವಾಮಿ ಮಾಡಿರುವ ವೈಟ್ನರ್ ಆರೋಪಕ್ಕೆ ಈಗ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಷ್ ಖಾತೆಯಲ್ಲಿ ವಿಡಿಯೋ ಮೂಲಕ ಸಾಕ್ಷಿ ಸಮೇತವಾಗಿ ತಿರುಗೇಟು ನೀಡಿದ್ದಾರೆ.
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಕಿಡಿ ಕಾರಿದ್ದಾರೆ.
ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Daily GK Quiz: ಭಾರತದಲ್ಲಿ "ಸಿಟಿ ಆಫ್ ಜಾಯ್" ಎಂದು ಯಾವ ನಗರವನ್ನು ಕರೆಯಲಾಗುತ್ತದೆ?
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ,… pic.twitter.com/NMQfgViKNp
— Siddaramaiah (@siddaramaiah) August 26, 2024
“ವೈಟ್ನರ್ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ.ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಅವರು ತಿರುಗೇಟು ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.