NHAI Recruitment 2024: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI) ಉದ್ಯೋಗ ಪಡೆಯಲು ಉತ್ತಮ ಅವಕಾಶವಿದೆ.NHAI ಕೆಲವು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಈ ಮೂಲಕ ಜನರಲ್ ಮ್ಯಾನೇಜರ್,ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NHAI ವೆಬ್ಸೈಟ್ nhai.gov.in ಗೆ ಭೇಟಿ ನೀಡುವ ಮೂಲಕ ತಮ್ಮ ಫಾರ್ಮ್ಗಳನ್ನು ಭರ್ತಿ ಮಾಡಬಹುದು.ಇನ್ನೊಂದು ಪ್ರಮುಖ ವಿಚಾರ ಎಂದರೆ ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ.ಒಂದು ವೇಳೆ ಈ ಹುದ್ದೆಗೆ ಆಯ್ಕೆಯಾದರೆ ಕೈ ಸೇರುವ ವೇತನವೂ ಭರ್ಜರಿಯಾಗಿಯೇ ಇರುತ್ತದೆ.
ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ:
NHAI ಯ ಈ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 22, ಕೊನೆಯ ದಿನಾಂಕವಾಗಿದೆ.
ಹುದ್ದೆಯ ವಿವರಗಳು :
: NHAI ಯ ಈ ನೇಮಕಾತಿಯ ಮೂಲಕ, ಒಟ್ಟು 60 ಹುದ್ದೆಗಳಲ್ಲಿ ನೇಮಕಾತಿ ನಡೆಯಲಿದೆ. ಇದರಲ್ಲಿ 20 ಜನರಲ್ ಮ್ಯಾನೇಜರ್ (ತಾಂತ್ರಿಕ), 20 ಡೆಪ್ಯುಟಿ ಜನರಲ್ ಮ್ಯಾನೇಜರ್ (ತಾಂತ್ರಿಕ) ಮತ್ತು 20 ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.
ವಯಸ್ಸಿನ ಮಿತಿ :
NHAI ಯ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿಯು 56 ವರ್ಷಗಳಿಗಿಂತ ಹೆಚ್ಚಿರಬಾರದು.
ಅರ್ಜಿಗೆ ಅಗತ್ಯವಿರುವ ಅರ್ಹತೆ:
NHAI ನೇಮಕಾತಿ 2024ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅರ್ಹತೆ ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು. ಅಭ್ಯರ್ಥಿಗಳು ಅಧಿಕೃತ ನೇಮಕಾತಿ ಅಧಿಸೂಚನೆಯಲ್ಲಿ ಅಗತ್ಯ ವಿದ್ಯಾರ್ಹತೆಗಳಿಗೆ ಸಂಬಂಧಿಸಿದ ವಿವರಗಳನ್ನು ಪರಿಶೀಲಿಸಬಹುದು.
ಇದನ್ನೂ ಓದಿ : Job Alert: ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿ
ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ :
NHAI ನೇಮಕಾತಿ 2024 ಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಬಳಸಿ:
ಅರ್ಜಿ ಸಲ್ಲಿಸುವುದು ಹೇಗೆ ?:
NHAI ನೇಮಕಾತಿ 2024 ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು NHAI ನ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಆನ್ಲೈನ್ನಲ್ಲಿ ಸಲ್ಲಿಸಬೇಕು. ನಂತರ, ಭರ್ತಿ ಮಾಡಿದ ಅರ್ಜಿ ನಮೂನೆಯ ಹಾರ್ಡ್ ಕಾಪಿಯನ್ನು NHAI ನ ಈ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ : DGM (HR/Admin.) – III, ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ, ಪ್ಲಾಟ್ ನಂ. G5 & 6, ಸೆಕ್ಟರ್-10, ದ್ವಾರಕಾ, ನವದೆಹಲಿ – 110075.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ