Hidden Camera in Washroom : ಬಾಲಕಿಯರ ಹಾಸ್ಟೆಲ್ನ ವಾಶ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ವಿದ್ಯಾರ್ಥಿನಿಯರಲ್ಲಿ ಸಂಚಲನ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ವಿದ್ಯಾರ್ಥಿನಿಯರ ಖಾಸಗಿತನಕ್ಕೆ ಸಂಬಂಧಿಸಿದ ಈ ಇತ್ತೀಚಿನ ಪ್ರಕರಣ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.ಇಲ್ಲಿನ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಬಾಲಕಿಯರ ಹಾಸ್ಟೆಲ್ನ ವಾಶ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿರುವುದು ಆತಂಕದ ವಾತಾವರಣ ಸೃಷ್ಟಿಸಿದೆ.
ಮಾಧ್ಯಮಗಳ ವರದಿ ಪ್ರಕಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಈ ಕಾಲೇಜಿನದ್ದೇ ವಿದ್ಯಾರ್ಥಿ ಎಂದು ಹೇಳಲಾಗುತ್ತಿದೆ.ಆರೋಪಿಯ ಲ್ಯಾಪ್ಟಾಪ್ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಲ್ಯಾಪ್ಟಾಪ್ ನಲ್ಲಿ ಪೊಲೀಸರಿಗೆ 300 ಅಶ್ಲೀಲ ವಿಡಿಯೋಗಳು ಸಿಕ್ಕಿವೆ ಎನ್ನಲಾಗಿದೆ. ಆರೋಪಿಯು ಈ 300 ಅಶ್ಲೀಲ ವೀಡಿಯೊಗಳನ್ನು ಇತರ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಈ ಬಗ್ಗೆ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ದರ್ಶನ್ ನನ್ನ ಗಾಡ್ ಫಾದರ್, ಅವರೇ ನನ್ನ ಬೆಳಸುತ್ತಿರೋದು.. ಅದಕ್ಕೆ ಜೈಲಿಗೆ ನೋಡಲು ಹೋಗಿದ್ದೆ : ಪೊಲೀಸರ ಮುಂದೆ ಚಿಕ್ಕಣ್ಣ ಹೇಳಿಕೆ
ಹಾಸ್ಟೆಲ್ನ ವಾಶ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಇರುವ ಬಗ್ಗೆ ವಿದ್ಯಾರ್ಥಿಯೊಬ್ಬರು ಕಾಲೇಜು ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ.ಆ ವಿದ್ಯಾರ್ಥಿನಿ ವಾಶ್ರೂಮ್ಗೆ ಹೋದಾಗ,ಯಾಕೋ ವಿಚಿತ್ರ ಎಂದು ಆ ವಿದ್ಯಾರ್ಥಿನಿಗೆ ಅನ್ನಿಸಿದೆ. ಈ ಸಂದರ್ಭದಲ್ಲಿ ವಾಶ್ ರೂಂ ನಲ್ಲಿ ಇಟ್ಟಿರುವ ಕ್ಯಾಮೆರಾ ಆಕೆಯ ಕಣ್ಣಿಗೆ ಬಿದ್ದಿದೆ. ಇನ್ನು ಈ ಹಿಡನ್ ಕ್ಯಾಮೆರಾ ಕ್ಯಾಂಪಸ್ನಲ್ಲಿರುವ ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಗೌಪ್ಯತೆಯ ಬಗ್ಗೆ ಕಳವಳ ಹೆಚ್ಚಿಸಿದೆ.
ಇದು ಖಾಸಗಿತನದ ಉಲ್ಲಂಘನೆ ಈ ರೀತಿಯ ಕೆಲಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಮತ್ತು ನಂತರದ ವಿಡಿಯೋ ಪ್ರಸಾರಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಅಯ್ಯೋ ವಿಧಿಯೇ..!! ವೃದ್ಧೆಯನ್ನು ಕಚ್ಚಿಕಚ್ಚಿ ಕೊಂದ ಬೀದಿ ನಾಯಿಗಳು
ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಂಪೂರ್ಣ ತನಿಖೆ ನಡೆಸಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.