Flax seeds to control Blood Sugar: ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ನಂತಹ ಸಮಸ್ಯೆಗಳಿಂದ ಮುಕ್ತಿ ಹೊಂದಲು ಬಯಸಿದರೆ ಅಗಸೆಬೀಜವು ಪ್ರಯೋಜನಕಾರಿಯಾಗಿದೆ.
ಚಿಕ್ಕದಾಗಿ ಕಾಣುವ ಅಗಸೆ ಬೀಜಗಳು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರಲ್ಲಿ ಹೇರಳವಾದ ನಾರಿನಂಶವಿದ್ದು, ನಿಯಮಿತವಾಗಿ ಸೇವಿಸುವ ಮೂಲಕ ಅಪಧಮನಿಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕಡಿಮೆ ಮಾಡಬಹುದು.
ಅಗಸೆ ಬೀಜಗಳು ರಕ್ತದೊತ್ತಡದ ಸಮಸ್ಯೆಯನ್ನು ಕಡಿಮೆ ಮಾಡಲು ಸಹ ಪ್ರಯೋಜನಕಾರಿ. ಫೈಬರ್, ಪ್ರೋಟೀನ್, ಮೆಗ್ನೀಸಿಯಮ್ ಮತ್ತು ರಂಜಕ ಸೇರಿದಂತೆ ಅನೇಕ ಪೋಷಕಾಂಶಗಳು ಅಗಸೆ ಬೀಜಗಳಲ್ಲಿ ಕಂಡುಬರುತ್ತವೆ. ಇದೀಗ ಇದರ ಆಶ್ಚರ್ಯಕರ ಪ್ರಯೋಜನಗಳನ್ನು ತಿಳಿಯೋಣ.
ಇತ್ತೀಚಿನ ದಿನಗಳಲ್ಲಿ, ಕೊಲೆಸ್ಟ್ರಾಲ್ ಸಮಸ್ಯೆಯು ಚಿಕ್ಕ ವಯಸ್ಸಿನಲ್ಲಿ ಕಂಡುಬರುತ್ತಿದೆ. ಅಲ್ಲದೇ ಹೃದಯಾಘಾತಕ್ಕೆ, ಅಧಿಕ ಕೊಲೆಸ್ಟ್ರಾಲ್ ಮಟ್ಟವು ಒಂದು ಕಾರಣವೆಂದು ಕಂಡುಬಂದಿದೆ.
ಅಗಸೆ ಬೀಜಗಳನ್ನು ಪ್ರತಿದಿನ ಸೇವಿಸಿದರೆ, ಅಪಧಮನಿಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಇದರಲ್ಲಿರುವ ಹೆಚ್ಚಿನ ಫೈಬರ್ ಅಂಶವು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ರಕ್ತದೊತ್ತಡವು ಹಲವಾರು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ.. ಇದು ಹೃದಯದ ಮೇಲೆ ನೇರ ಪರಿಣಾಮ ಬೀರಿ.. ಹೃದಯಾಘಾತಕ್ಕೂ ಕಾರಣವಾಗಬಹುದು. ಹೀಗಾಗಿ ಅಗಸೆ ಬೀಜಗಳನ್ನು ಪ್ರತಿದಿನ ಸೇವಿಸಿದರೆ ಬಿಪಿಯನ್ನು ನಿಯಂತ್ರಿಸಬಹುದು.
ಇತ್ತೀಚಿನ ದಿನಗಳಲ್ಲಿ ಮಧುಮೇಹದ ಸಮಸ್ಯೆ ಚಿಕ್ಕ ವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತಿದೆ. ಮಧುಮೇಹಿಗಳು ಅಗಸೆ ಬೀಜಗಳಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಬಹುದು. ಈ ಬೀಜಗಳು ಸಕ್ಕರೆಯ ಮಟ್ಟವನ್ನು ಹೆಚ್ಚಿಸಲು ಬಿಡದೇ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
(ಸೂಚನೆ: ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. Zee Kannada News ಇದನ್ನು ಖಚಿತಪಡಿಸುವುದಿಲ್ಲ.)