10 lakh illegal BPL cards found: ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರ ಪತ್ತೆಗೆ ಆಹಾರ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಇದುವೆರಗೆ ಬರೋಬ್ಬರಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ಗಳು ಪತ್ತೆಯಾಗಿವೆ.
ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಅಲ್ಲದೆ 4,036 ಸರ್ಕಾರಿ ನೌಕರರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಗೊತ್ತಾಗಿದೆ. ರಾಜ್ಯ ಸರ್ಕಾರ ಅಕ್ರಮ ಬಿಪಿಎಲ್ ಕಾರ್ಡ್ಗಳ ಪತ್ತೆಗೆ ನಿರ್ದೇಶನ ನೀಡಿದ ಹಿನ್ನೆಲೆ ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಕಾರ್ಯ ಕೈಗೊಂಡಿದ್ದಾರೆ.
ಇದನ್ನೂ ಓದಿ: LIC Jeevan Tarun: ಹೆಣ್ಣು ಮಕ್ಕಳಿಗೆ ಬೇಕಾದ ಅತ್ಯುತ್ತಮ LIC ಯೋಜನೆ
ನಿಯಮಗಳ ಪ್ರಕಾರ ಸರ್ಕಾರಿ-ಅರೆ ಸರ್ಕಾರಿ ನೌಕರರು ತೆರಿಗೆ ಪಾವತಿದಾರರು, 4 ಚಕ್ರದ ಬಿಳಿ ಬೋರ್ಡ್ ವಾಹನ ಹೊಂದಿದವರು, ಆದಾಯ ತೆರಿಗೆ ಪಾವತಿಸುವ ಕುಟುಂಬದವರು, ಒಂದೇ ಮನೆಯಲ್ಲಿ ವಾಸವಾಗಿದ್ದು, ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದವರು, 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿದವರು, ವಾರ್ಷಿಕ 1.20 ಲಕ್ಷ ರೂ. ಗಿಂತ ಹೆಚ್ಚು ಆದಾಯ ಹೊಂದಿದವರು, ನಗರ ಪ್ರದೇಶದಲ್ಲಿ 1 ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕ ಮನೆ ಹೊಂದಿದವರು ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅವಕಾಶ ಇರುವುದಿಲ್ಲ.
ಆದರೆ ಈ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲಾಗಿದೆ. ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ಉದ್ಯೋಗಿಗಳು ಸೇರಿದಂತೆ ನಿಯಮ ಮೀರಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಸರ್ಕಾರ ತೀರ್ಮಾನಿಸಿದೆ. ಅವರು ರೇಷನ್ ಕಾರ್ಡ್ ಪಡೆದುಕೊಂಡ ದಿನದಿಂದ ನಿರಂತರ ಪಡಿತರ ಪಡೆದಿದ್ದಾರೆಂದು ಲೆಕ್ಕಾಚಾರ ಮಾಡಿ ಕೆಜಿಗೆ 34 ರೂ. ದರದಲ್ಲಿ ದಂಡ ವಸೂಲಿ ಮಾಡಲಾಗುವುದು ಎನ್ನಲಾಗಿದೆ.
ಇದನ್ನೂ ಓದಿ: Gruha Lakshmi: ಗೃಹಲಕ್ಷ್ಮಿ ಹಣದ ಜೊತೆಗೆ ಸಿಗಲಿದೆ ಬಂಪರ್ ಗಿಫ್ಟ್! ಜಸ್ಟ್ ಹೀಗೆ ಮಾಡಿ ಸಾಕು ಎಂದ ಲಕ್ಷ್ಮಿ ಹೆಬ್ಬಾಳ್ಕರ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.