Karnataka Weather Report: ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಗುಜರಾತ್, ರಾಜಸ್ಥಾನ, ಆಂಧ್ರಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯಿಂದ ದೊಡ್ಡ ಅವಾಂತರವೇ ಸೃಷ್ಟಿಯಾಗಿದೆ. ಕರ್ನಾಟಕದಲ್ಲಿ ಆಗಸ್ಟ್ನಲ್ಲಿ ಭಾರೀ ಮಳೆ ಸುರಿದಿದ್ದು, ಕೊನೆಯ ವಾರದಲ್ಲಿ ವರುಣ ಆರ್ಭಟ ಕಡಿಮೆಯಾಗಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಸೆ.8ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ನಿಮಜ್ಜನೆಯ ವಿವರ
ಯಾವ ಜಿಲ್ಲೆಗೆ ಯೆಲ್ಲೋ & ಆರೆಂಜ್ ಅಲರ್ಟ್ ಘೋಷಣೆ?
ಕರಾವಳಿ ಜಿಲ್ಲೆ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
Rainfall Warning : 10th September 2024
वर्षा की चेतावनी : 10th सितंबर 2024#rainfallwarning #IMDWeatherUpdate #vidarbha #odisha #MadhyaPradesh #Telangana #UttarPradsh pic.twitter.com/ZaJI8LKlA6— India Meteorological Department (@Indiametdept) September 9, 2024
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ & ರಾಯಚೂರು ಜಿಲ್ಲೆಗಳಲ್ಲಿ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಹಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ & ಕೋಲಾರ ಜಿಲ್ಲೆಗಳಲ್ಲಿ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಇದನ್ನೂ ಓದಿ: ಸಿ.ಟಿ.ರವಿ ಅವರದ್ದು ಬುರುಡೆ ಮಾತು: ಶಾಸಕ ಸಿ.ಪುಟ್ಟರಂಗಶೆಟ್ಟಿ ಕಿಡಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.