147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲು; ಕಾನ್ಪುರದಲ್ಲಿ ವಿರಾಟ್ ಕೊಹ್ಲಿ ಒಂದಲ್ಲ ಹಲವು ದಾಖಲೆ ನಿರ್ಮಿಸಲಿದ್ದಾರೆ!

India vs Bangladesh, 2nd Test: ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ದೊಡ್ಡ ಯಶಸ್ಸನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ. 2ನೇ ಟೆಸ್ಟ್‌ನಲ್ಲಿ 129 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 9,000 ರನ್ ಪೂರ್ಣಗೊಳಿಸುತ್ತಾರೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಆಗಲಿದ್ದಾರೆ. 

Written by - Puttaraj K Alur | Last Updated : Sep 24, 2024, 10:36 AM IST
  • ಕಾನ್ಪುರದಲ್ಲಿ ಹಲವು ದಾಖಲೆ ನಿರ್ಮಿಸಲಿರುವ ವಿರಾಟ್‌ ಕೊಹ್ಲಿ
  • ಇದು 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲು
  • ಒಂದೇ ಪಂದ್ಯದಲ್ಲಿ ಹಲವು ದಾಖಲೆ ನಿರ್ಮಿಸುತ್ತಾರಾ ರನ್‌ ಮಷಿನ್?
147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲು; ಕಾನ್ಪುರದಲ್ಲಿ ವಿರಾಟ್ ಕೊಹ್ಲಿ ಒಂದಲ್ಲ ಹಲವು ದಾಖಲೆ ನಿರ್ಮಿಸಲಿದ್ದಾರೆ! title=
ʼವಿರಾಟ್‌ʼ ದಾಖಲೆ..!

India vs Bangladesh, 2nd Test: ಸದ್ಯ ವಿಶ್ವದ ಶ್ರೇಷ್ಠ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಲವು ದಾಖಲೆಗಳ ಸರದಾರ ಎನಿಸಿಕೊಂಡಿದ್ದಾರೆ. ಕೊಹ್ಲಿ ಮೈದಾನಕ್ಕೆ ಬಂದಾಗಲೆಲ್ಲಾ ಒಂದಲ್ಲ ಒಂದು ದಾಖಲೆ ನಿರ್ಮಾಣವಾಗುತ್ತದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಅವರ ಬ್ಯಾಟ್ ಕೆಲಸ ಮಾಡದಿದ್ದರೂ, ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 23 ರನ್ ಗಳಿಸಿ ಇತಿಹಾಸವನ್ನು ಸೃಷ್ಟಿಸಿದರು. ವಾಸ್ತವವಾಗಿ 2ನೇ ಇನ್ನಿಂಗ್ಸ್‌ನಲ್ಲಿ ಕೊಹ್ಲಿ 17 ರನ್ ಗಳಿಸಿದರು, ಇದರಿಂದ ಅವರು ತವರು ನೆಲದಲ್ಲಿ 12,000 ರನ್‌ಗಳನ್ನು ಪೂರೈಸಿದರು. ಸಚಿನ್ ತೆಂಡೂಲ್ಕರ್ ನಂತರ ಈ ಮೈಲಿಗಲ್ಲು ಸಾಧಿಸಿದ ಭಾರತದ 2ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅವರು ತಮ್ಮ 219ನೇ ಪಂದ್ಯದಲ್ಲಿ ಈ ದಾಖಲೆ ಮಾಡಿದ್ದಾರೆ.

ಮೊದಲ ಟೆಸ್ಟ್‌ನಲ್ಲಿ ಕೊಹ್ಲಿಗೆ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗದಿದ್ದರೂ, ಕಾನ್ಪುರದಲ್ಲಿ ನಡೆಯಲಿರುವ 2ನೇ ಟೆಸ್ಟ್‌ನಲ್ಲಿ ಅವರು ದೊಡ್ಡ ಸ್ಕೋರ್‌ನತ್ತ ಕಣ್ಣಿಟ್ಟಿರುವುದು ಮಾತ್ರವಲ್ಲದೆ ಅನೇಕ ದೊಡ್ಡ ದಾಖಲೆಗಳನ್ನು ಮುರಿಯುವ ತವಕದಲ್ಲಿದ್ದಾರೆ. ವಾಸ್ತವವಾಗಿ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ದೊಡ್ಡ ಯಶಸ್ಸನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ. 2ನೇ ಟೆಸ್ಟ್‌ನಲ್ಲಿ 129 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 9,000 ರನ್ ಪೂರ್ಣಗೊಳಿಸುತ್ತಾರೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಈ ಮೊದಲು ಸುನಿಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಮಾತ್ರ ಈ ಅಂಕಿ ಅಂಶವನ್ನು ಮುಟ್ಟುವಲ್ಲಿ ಯಶಸ್ವಿಯಾಗಿದ್ದರು. 

ಇದನ್ನೂ ಓದಿ: ತೆರೆಗೆ ಬರಲು ಸಜ್ಜಾಗುತ್ತಿದೆ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರ ಜೀವನ ಚರಿತ್ರೆ? ಬಯೋಪಿಕ್‌ನಲ್ಲಿ ನಟಿಸುತ್ತಿರುವ ಸ್ಟಾರ್‌ ಹೀರೋ ಯಾರು ಗೊತ್ತಾ?

ಸಚಿನ್ ದಾಖಲೆ ಮುರಿಯುತ್ತಾರಾ ಕೊಹ್ಲಿ?

ಅಷ್ಟೇ ಅಲ್ಲ, ಎರಡನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಗಳನ್ನು ಮುರಿಯುವ ತವಕದಲ್ಲಿದ್ದಾರೆ. ಅವರು ಈ ದಾಖಲೆ ನಿರ್ಮಿಸಲು ಕೇವಲ 35 ರನ್‌ಗಳ ಅಂತರದಲ್ಲಿದ್ದಾರೆ. ಈ ಸಾಧನೆ ಮಾಡುವಲ್ಲಿ ಯಶಸ್ವಿಯಾದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600ಕ್ಕಿಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 27 ಸಾವಿರ ರನ್ ಗಳಿಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಪ್ರಸ್ತುತ 623 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಅತಿ ವೇಗವಾಗಿ 27 ಸಾವಿರ ರನ್ ಗಳಿಸಿದ ದಾಖಲೆ ಇದೆ. ಕೊಹ್ಲಿ 593 ಇನ್ನಿಂಗ್ಸ್‌ಗಳಲ್ಲಿ 26,965 ರನ್ ಗಳಿಸಿದ್ದಾರೆ. ಇದುವರೆಗೆ ವಿಶ್ವದಾದ್ಯಂತ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು ಮಾತ್ರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27 ಸಾವಿರ ರನ್ ಗಳಿಸಿದ್ದಾರೆ. ಇದರಲ್ಲಿ ಸಚಿನ್ ತೆಂಡೂಲ್ಕರ್, ಶ್ರೀಲಂಕಾದ ಕುಮಾರ ಸಂಗಕ್ಕಾರ ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಸೇರಿದ್ದಾರೆ. 

ಡಾನ್ ಬ್ರಾಡ್ಮನ್ ದಾಖಲೆ ಬ್ರೇಕ್‌!?

ಕಾನ್ಪುರ ಟೆಸ್ಟ್‌ನಲ್ಲಿ ಡಾನ್ ಬ್ರಾಡ್‌ಮನ್‌ರನ್ನು ಹಿಂದಿಕ್ಕುವ ಅವಕಾಶವೂ ಕೊಹ್ಲಿಗೂ ಇದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸುವಲ್ಲಿ ಕೊಹ್ಲಿ ಯಶಸ್ವಿಯಾದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಬಾರಿಸುವ ವಿಷಯದಲ್ಲಿ ಬ್ರಾಡ್‌ಮನ್‌ರ ದಾಖಲೆಯನ್ನು ಬ್ರೇಕ್‌ ಮಾಡುತ್ತಾರೆ. ಬ್ರಾಡ್‌ಮನ್ ಟೆಸ್ಟ್‌ನಲ್ಲಿ 29 ಶತಕಗಳನ್ನು ಹೊಂದಿದ್ದಾರೆ. ಒಮ್ಮೆ ಶತಕ ಸಿಡಿಸಿದರೆ ಕೊಹ್ಲಿ ಟೆಸ್ಟ್‌ನಲ್ಲಿ 30 ಶತಕ ಸಿಡಿಸಲಿದ್ದಾರೆ. ಎರಡನೇ ಟೆಸ್ಟ್‌ನಲ್ಲಿ 3 ಕ್ಯಾಚ್ ಪಡೆಯುವ ಮೂಲಕ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನೂ ಮುರಿಯಲಿದ್ದಾರೆ. ಟೆಸ್ಟ್‌ನಲ್ಲಿ ಸಚಿನ್ ತೆಂಡೂಲ್ಕರ್ 115 ಕ್ಯಾಚ್‌ಗಳನ್ನು ಪಡೆದಿದ್ದರೆ, ವಿರಾಟ್ 113 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಇದಲ್ಲದೇ ಕೊಹ್ಲಿ 7 ಬೌಂಡರಿ ಬಾರಿಸಿದ ಕೂಡಲೇ ಟೆಸ್ಟ್‌ನಲ್ಲಿ 1000 ಬೌಂಡರಿಗಳನ್ನು ಪೂರೈಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಒಂದೇ ಪಂದ್ಯದಲ್ಲಿ ಕೊಹ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಲಿದ್ದಾರೆ. 

ಇದನ್ನೂ ಓದಿ: ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಕಪಿಲ್ ದೇವ್ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News