ಬೆಂಗಳೂರು : ಈ ಬಾರಿಯ ದೀಪಾವಳಿ ಹಬ್ಬ ಅಕ್ಟೋಬರ್ ಕೊನೆಯ ವಾರದಲ್ಲಿ ಬರಲಿದೆ. ಬಹುತೇಕ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ತುಟ್ಟಿಭತ್ಯೆ ಹೆಚ್ಚಳವನ್ನು ಅಕ್ಟೋಬರ್ ತಿಂಗಳಿನಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ.ಉತ್ತರ ಪ್ರದೇಶದ ಯೋಗಿ ಸರ್ಕಾರವು ದೀಪಾವಳಿಯ ಮೊದಲು 15 ಲಕ್ಷ ಉದ್ಯೋಗಿಗಳು ಮತ್ತು ಎಂಟು ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ದೊಡ್ಡ ಉಡುಗೊರೆಯನ್ನು ಘೋಷಿಸಬಹುದು.
ಬೋನಸ್ ಕೂಡಾ ಘೋಷಣೆಯಾಗುವ ನಿರೀಕ್ಷೆ :
ಯೋಗಿ ಸರ್ಕಾರವು ನೌಕರರ ತುಟ್ಟಿಭತ್ಯೆಯನ್ನು (ಡಿಎ) 4 ಪ್ರತಿಶತದಷ್ಟು ಹೆಚ್ಚಿಸಬಹುದು. ವರದಿಯ ಪ್ರಕಾರ,ರಾಜ್ಯ ಸರ್ಕಾರವು ನಾನ್ ಗೆಜೆಟೆಡ್ ನೌಕರರಿಗೆ ಬೋನಸ್ ಘೋಷಿಸುವ ನಿರೀಕ್ಷೆಯಿದೆ.ಕೇಂದ್ರದ ಡಿಎ ಹೆಚ್ಚಳದ ಘೋಷಣೆಯ ನಂತರ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರವು ರಾಜ್ಯ ನೌಕರರ ಡಿಎ ಹೆಚ್ಚಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ.ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಡಿಎ ಕುರಿತು ಕೇಂದ್ರ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಇದನ್ನೂ ಓದಿ : PMJJBY: ಕೇವಲ ₹436 ಪಾವತಿಸಿದರೆ ಸಾಕು ನಿಮಗೆ ಸಿಗಲಿದೆ ಬರೋಬ್ಬರಿ ₹2,00,000!!
ಬೋನಸ್ ನಲ್ಲಿಯೂ ಹೆಚ್ಚಳ :
ಯುಪಿ ಸರ್ಕಾರ ತೆಗೆದುಕೊಂಡ ನಿರ್ಧಾರದಿಂದಾಗಿ 23 ಲಕ್ಷ ಉದ್ಯೋಗಿಗಳು ಮತ್ತು ಪಿಂಚಣಿದಾರರು ಪ್ರಯೋಜನ ಪಡೆಯುತ್ತಾರೆ. ಈ ಕ್ರಮದಿಂದ ರಾಜ್ಯದ ಬೊಕ್ಕಸಕ್ಕೆ 3000 ಕೋಟಿ ರೂಪಾಯಿ ಹೊರೆ ಬೀಳಲಿದೆ.ಇದಲ್ಲದೇ ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೂ ಬೋನಸ್ ಸಿಗುವ ನಿರೀಕ್ಷೆ ಇದೆ.ಮೂಲ ವೇತನ ಮತ್ತು ಡಿಎ ಆಧಾರದ ಮೇಲೆ ಬೋನಸ್ ನಿರ್ಧರಿಸಲಾಗುತ್ತದೆ. ಕಳೆದ ವರ್ಷ ನೌಕರರು ಸುಮಾರು 7,000 ರೂ.ಗಳ ಬೋನಸ್ ಪಡೆದಿದ್ದರು. ಈ ವರ್ಷ ಬೋನಸ್ ಮೊತ್ತದಲ್ಲಿ ಸ್ವಲ್ಪ ಹೆಚ್ಚಾಗುವ ನಿರೀಕ್ಷೆಯಿದೆ.
ಎಂಟನೇ ವೇತನ ಆಯೋಗ ಯಾವಾಗ ರಚನೆಯಾಗುತ್ತದೆ?
ಎಂಟನೇ ವೇತನ ಆಯೋಗದ ಕುರಿತು ವಿವಿಧ ಸರ್ಕಾರಿ ನೌಕರರ ಸಂಘಗಳು ಬೇಡಿಕೆಗಳನ್ನು ಸಲ್ಲಿಸಿವೆ. ಆದರೆ, ಇದುವರೆಗೆ ಎಂಟನೇ ವೇತನ ಆಯೋಗ ರಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎನ್ನಲಾಗಿದೆ. ಜುಲೈ 30 ರಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಎಂಟನೇ ಕೇಂದ್ರ ವೇತನ ಆಯೋಗದ ರಚನೆಗೆ ಎರಡು ಪ್ರಾತಿನಿಧ್ಯಗಳನ್ನು ಸ್ವೀಕರಿಸಲಾಗಿದೆ. ಸದ್ಯ ಅಂತಹ ಯಾವುದೇ ಪ್ರಸ್ತಾವನೆ ಸರಕಾರದ ಪರಿಶೀಲನೆಯಲ್ಲಿಲ್ಲ ಎಂದು ಹೇಳಿದ್ದಾರೆ.ಏಳನೇ ವೇತನ ಆಯೋಗವನ್ನು ಫೆಬ್ರವರಿ 2014 ರಲ್ಲಿ ರಚಿಸಲಾಯಿತು. ಅದರ ಶಿಫಾರಸುಗಳನ್ನು ಜನವರಿ 1, 2016 ರಿಂದ ಜಾರಿಗೆ ತರಲಾಯಿತು.ಸಾಮಾನ್ಯವಾಗಿ, ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚಿಸುತ್ತದೆ.
ಇದನ್ನೂ ಓದಿ : Arecanut Price Today: ಚಿತ್ರದುರ್ಗ, ಸಿದ್ದಾಪುರ ಮತ್ತು ಶಿವಮೊಗ್ಗದಲ್ಲಿ ಇಂದಿನ ಅಡಿಕೆ ಧಾರಣೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.