ತನಿಖೆ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಡಿಕೆಶಿ ಅಲ್ಲ... ಇವರೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ..!?

Who is next Karnataka CM if Siddaramaiah goes: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆ ನಡೆಸುವಂತೆ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ? ಎಂಬ ಮಾತು ಭಾರೀ ಕೇಳಿಬರುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆ ನಡೆಸುವಂತೆ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ? ಎಂಬ ಮಾತು ಭಾರೀ ಕೇಳಿಬರುತ್ತಿದೆ.  

2 /7

ಮತ್ತೊಂದೆಡೆ ಪ್ರತಿಪಕ್ಷ ನಾಯಕರು ಸಹ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.  

3 /7

ಅಂದಹಾಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿಯಿಲ್ಲ. ಆದರೆ ಒಂದು ವೇಳೆ ತನಿಖೆ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಬೇಕಾದ ಪರಿಸ್ಥಿತಿ ಬಂದರೆ ಈ ಸುದ್ದಿ ಖಚಿತವಾಗುತ್ತದೆ.  

4 /7

ಇನ್ನೊಂದೆಡೆ ಸಿಎಂ ಸ್ಥಾನ ಖಾಲಿಯಾದರೆ ಆ ಸ್ಥಾನಕ್ಕೆ ಯಾರು ಬರಬಹುದು ಎಂಬ ಚರ್ಚೆಯೂ ಜೋರಾಗಿದೆ. ಈಗಾಗಲೇ ಡಿಕೆ ಶಿವಕುಮಾರ್‌ ಹೆಸರು ಕೇಳಿಬರುತ್ತಿದ್ದರೂ, ಇನ್ನೂ ಕೆಲ ನಾಯಕರ ಹೆಸರು ಮುಂಚೂಣಿಯಲ್ಲಿದೆ. ಅವರಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ ಪರಮೇಶ್ವರ್‌ ಸೇರಿದಂತೆ ಕೆಲವರ ಹೆಸರು ಇವೆ.  

5 /7

ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬ ಪ್ರಶ್ನೆಗೆ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ''ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ಬಿಜೆಪಿಯ ರಾಜಕೀಯ ಷಡ್ಯಂತ್ರ. ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ, ಬೆಂಬಲಿಸುತ್ತೇವೆ" ಎಂದಿದ್ದರು.  

6 /7

"ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮತ್ತೊಮ್ಮೆ ಹೇಳುತ್ತಿದ್ದೇನೆ, ಸಿಎಂಗೆ ಹಿನ್ನಡೆ ಇಲ್ಲ. ನಾನು ಸೇರಿದಂತೆ ನಮ್ಮ ಎಲ್ಲಾ ನಾಯಕರ ಮೇಲೆ ಮೊದಲು ಇಂತಹ ಪಿತೂರಿ ನಡೆಸಲಾಗಿದೆ. ನಾನು ಮುಕ್ತನಾಗಿ ಹೊರಬಂದಿಲ್ಲವೇ?...ಹಾಗಾಗಿ, ನಾವು ಅದರ ವಿರುದ್ಧ ಹೋರಾಡುತ್ತೇವೆ. ನಾವು ಈ ದೇಶದ ಕಾನೂನು ವ್ಯವಸ್ಥೆಯನ್ನು ಗೌರವಿಸುತ್ತೇವೆ" ಎಂದಿದ್ದಾರೆ.  

7 /7

ಆದರೆ ಈ ಎಲ್ಲದರ ಜೊತೆಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈ ಮೀರಿದರೆ ಕಾಂಗ್ರೆಸ್‌ ಪಾಳಯದಲ್ಲಿ ಸಿಎಂ ಬದಲಾವಣೆಯಾಗುವ ಸಾಧ್ಯತೆ ಹೆಚ್ಚೇ ಇರುತ್ತದೆ.