ಮಾನ‌ ಮರ್ಯಾದೆ ಇದ್ದಿದ್ದೇ ಆದಲ್ಲಿ ಸಿಎಂ ರಾಜೀನಾಮೆ ನೀಡಲಿ- ಶಾಸಕ ಮಹೇಶ್ ಟೆಂಗಿನಕಾಯಿ

ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಂದಿದ್ದು, ಸಿದ್ದರಾಮಯ್ಯನವರ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ಎಫ್‌ಐ‌ಆರ್ ದಾಖಲಿಸುವಂತೆ ಸೂಚಿಸಿದ್ದರೂ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವುದು ಸರಿಯಲ್ಲ- ಶಾಸಕ ಮಹೇಶ ಟೆಂಗಿನಕಾಯಿ 

Written by - Yashaswini V | Last Updated : Sep 27, 2024, 01:19 PM IST
  • ರಾಜ್ಯಪಾಲರು ಕೇಳಿರುವ ಮಾಹಿತಿ, ದಾಖಲೆ ನೀಡಲು ಈ ಸರ್ಕಾರಕ್ಕೆ ಸಮಸ್ಯೆ ಏನಿದೆ?
  • ಈ ಸರ್ಕಾರದಲ್ಲಿ ಸಾಕಷ್ಟು ಲೋಪದೋಷಗಳು ಆಗಿವೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ.
  • ದಾಖಲೆಗಳು ಹೊರಗೆ ಬಂದಿದ್ದರಿಂದಲೇ ಮುಡಾ ಹಗರಣ, ವಾಲ್ಮೀಕಿ ನಿಗಮದ ಅಕ್ರಮ ಹೊರಗೆ ಬಂದಿದ್ದು.
ಮಾನ‌ ಮರ್ಯಾದೆ ಇದ್ದಿದ್ದೇ ಆದಲ್ಲಿ ಸಿಎಂ ರಾಜೀನಾಮೆ ನೀಡಲಿ- ಶಾಸಕ ಮಹೇಶ್ ಟೆಂಗಿನಕಾಯಿ title=

ಹುಬ್ಬಳ್ಳಿ : ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ಪೋಲಿಸ್ ರಿಗೆ ಎಫ್‌ಐ‌ಆರ್ ದಾಖಲಿಸುವಂತೆ ಹೇಳಿದ್ದರೂ ಸಹ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದಾರೆ. ಅವರಿಗೆ ಮಾನ‌ ಮರ್ಯಾದೆ ಇದ್ದಿದ್ದೇ ಆದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ಈ ಹಿಂದೆ ಬಹಳಷ್ಟು ಸಂದರ್ಭದಲ್ಲಿ ಸಿದ್ದರಾಮಯ್ಯ ಅವರೇ ನಿಮಗೆ ಮಾನ‌ ಮರ್ಯಾದೆ ಇದೇಯಾ ಎಂದು ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಅದನ್ನೇ ನಾವು ಈಗ ಹೇಳುತ್ತಿದ್ದೇವೆ. ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದಲ್ಲಿ ನ್ಯಾಯಾಲಯದ ತೀರ್ಪಿಗೆ ತಲೆ ಬಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಮುಂದೆ ಅವರು ಸತ್ಯ ಹರಿಶ್ಚಂದ್ರ ಎಂದು ಸಾಬೀತಾದ ಮೇಲೆ ಪುನಃ ಸಿಎಂ ಆಗಲಿ.‌ ನಮ್ಮದೇನೂ ಅಭ್ಯಂತರವಿಲ್ಲ ಎಂದರು.

ಇದನ್ನೂ ಓದಿ- ಹೆಚ್ಚಾದ ಮುಖ್ಯಮಂತ್ರಿ ರಾಜೀನಾಮೆ ಕೂಗು, ಯಾರಾಗ್ತಾರೆ ಮುಂದಿನ ಸಿಎಂ? 

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ರಾಜ್ಯ ಸರ್ಕಾರದ ಸಚಿವ ಸಂಪುಟದ ನಿರ್ಧಾರ. ರಾಜ್ಯಪಾಲರು ಕೇಳಿರುವ ಮಾಹಿತಿ, ದಾಖಲೆ  ನೀಡಲು ಈ ಸರ್ಕಾರಕ್ಕೆ ಸಮಸ್ಯೆ ಏನಿದೆ? ಈ ಸರ್ಕಾರದಲ್ಲಿ ಸಾಕಷ್ಟು ಲೋಪದೋಷಗಳು ಆಗಿವೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ. ದಾಖಲೆಗಳು ಹೊರಗೆ ಬಂದಿದ್ದರಿಂದಲೇ ಮುಡಾ ಹಗರಣ, ವಾಲ್ಮೀಕಿ ನಿಗಮದ ಅಕ್ರಮ ಹೊರಗೆ ಬಂದಿದ್ದು. ಇಂಥವುದನ್ಸಂಸ್ಥೆಗಳ ಮುಚ್ಚಿಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಬಾಗಿಲ‌ ಮೂಲಕ ಪ್ರಯತ್ನ‌ ಮಾಡುತ್ತಿದೆ ಎಂದು ಅವರು ಇದೇ ವೇಳೆ ಆರೋಪಿಸಿದರು.

ಇದನ್ನೂ ಓದಿ- ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕೆಬಿ ಕೋಳಿವಾಡ

ರಾಜ್ಯದಲ್ಲಿ ಹೊಸ ಪ್ರಕರಣಗಳಲ್ಲಿ ಸಿಬಿಐ ತನಿಖೆ‌‌‌ ಕೈಗೊಳ್ಳಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕೆಂಬ ಷರತ್ತು ವಿಧಿಸಿರುವುದು ಸರಿಯಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸದನದಲ್ಲಿ ಕ್ಲೀನ್ ಚಿಟ್ ನೀಡಿದ್ದರು. ಇಡಿ, ಸಿಬಿಐ ತನಿಖೆ‌ ನಾಗೇಂದ್ರ ಅವರು ತಪ್ಪಿತಸ್ಥರು ಎಂಬುದು ಬಹಿರಂಗಗೊಂಡಿದೆ. ಇದರಿಂದ ನಾಗೇಂದ್ರ ಬಳಿಕ ತಮ್ಮದೇ ಪಾಳಿ ಎಂದು ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಹಾಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನಿರ್ಣಯ ಕೈಗೊಂಡಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News