Shocking news: ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತ ಸುಟ್ಟುಹಾಕಿದ ಪಾಪಿ ಮಕ್ಕಳು!

Shocking news: ತಾಯಿಯನ್ನು ಮರಕ್ಕೆ ಕಟ್ಟಿಹಾಕಿದ ಮಕ್ಕಳು ಬೆಂಕಿ ಹಚ್ಚಿರುವ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು. ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

Written by - Puttaraj K Alur | Last Updated : Sep 30, 2024, 11:38 PM IST
  • ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿ ಹಾಕಿದ ಮಕ್ಕಳು ಬೆಂಕಿ ಹಚ್ಚಿ ಜೀವಂತ ಸುಟ್ಟುಹಾಕಿದ್ದಾರೆ
  • ಪಶ್ಚಿಮ ತ್ರಿಪುರದ ಕಮರ್ ಬಾರಿ ಜಿಲ್ಲೆಯ ಚಂಪಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
  • ಆಸ್ತಿ ಹಂಚಿಕೆ ಸಂಬಂಧ ನಡೆದ ಕೌಟುಂಬಿಕ ಕಲಹದಿಂದ ಹತ್ಯೆ ಮಾಡಿರುವ ಶಂಕೆ
Shocking news: ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತ ಸುಟ್ಟುಹಾಕಿದ ಪಾಪಿ ಮಕ್ಕಳು! title=
ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಮಕ್ಕಳು!

Shocking news: ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿ ಹಾಕಿದ ಪಾಪಿ ಮಕ್ಕಳು ಬೆಂಕಿ ಹಚ್ಚಿ ಜೀವಂತ ಸುಟ್ಟುಹಾಕಿರುವ ಆಘಾತಕಾರಿ ಘಟನೆ ತ್ರಿಪುರದಲ್ಲಿ ನಡೆದಿದೆ. ಪಶ್ಚಿಮ ತ್ರಿಪುರದ ಕಮರ್ ಬಾರಿ ಜಿಲ್ಲೆಯ ಚಂಪಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಪೊಲೀಸರು ಇಬ್ಬರು ಮಕ್ಕಳನ್ನು ಬಂಧಿಸಿದ್ದಾರೆ.

62 ವರ್ಷದ ಮಹಿಳೆ ಒಂದೂವರೆ ವರ್ಷದ ಹಿಂದಷ್ಟೇ ಪತಿಯನ್ನು ಕಳೆದುಕೊಂಡಿದ್ದಳು. ಆಕೆ ಮಗನ ಮನೆಯಲ್ಲಿ ವಾಸವಾಗಿದ್ದಳು. ಮತ್ತೊಬ್ಬ ಮಗ ಅಗರ್ತಾಲದಲ್ಲಿ ವಾಸವಿದ್ದ. ಮಕ್ಕಳು ಮತ್ತು ತಾಯಿಯ ನಡುವೆ ಆಸ್ತಿ ಹಂಚಿಕೆ ಸಂಬಂಧ ನಡೆದ ಕೌಟುಂಬಿಕ ಕಲಹದಿಂದ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು

ತಾಯಿಯನ್ನು ಮರಕ್ಕೆ ಕಟ್ಟಿಹಾಕಿದ ಮಕ್ಕಳು ಬೆಂಕಿ ಹಚ್ಚಿರುವ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು. ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

ಘಟನೆ ಸಂಬಂಧ ಆಕೆಯ ಇಬ್ಬರು ಮಕ್ಕಳನ್ನು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುವ ಮೂಲಕ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಜನಾರ್ಧನ್‌ ರೆಡ್ಡಿಗೆ ಸುಫ್ರೀಂ ಕೋರ್ಟ್‌ ಬಿಗ್‌ ರಿಲೀಪ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News