ಪತ್ನಿ ಸೈಟ್‌ ವಾಪಾಸ್‌ ನಿರ್ಧಾರದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿಯ ನಿರ್ಧಾರ ಪ್ರಕಟ! ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ?

Chief Minister Siddaramaiah: ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ  ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು" ಎಂದಿದ್ದಾರೆ.  

Written by - Bhavishya Shetty | Last Updated : Oct 1, 2024, 05:41 PM IST
    • ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ. ರಾಜಿನಾಮೆ ನೀಡುವ ಅಗತ್ಯವಿಲ್ಲ
    • ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು
    • ನನಗೆ ಯಾವುದೇ ಮಾಹಿತಿಯಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಪತ್ನಿ ಸೈಟ್‌ ವಾಪಾಸ್‌ ನಿರ್ಧಾರದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿಯ ನಿರ್ಧಾರ ಪ್ರಕಟ! ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ? title=
Chief Minister Siddaramaiah

ಬೆಂಗಳೂರು: ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ. ರಾಜಿನಾಮೆ ನೀಡುವ ಅಗತ್ಯವಿಲ್ಲ. ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

ಇದನ್ನೂ ಓದಿ: Chaitra Kundapura: ಬಿಗ್‌ ಬಾಸ್‌ ಮನೆ ಸೇರಿರುವ ಚೈತ್ರಾ ಕುಂದಾಪುರ ಸಂಭಾವನೆ ಎಷ್ಟು ಗೊತ್ತಾ? ಪ್ರತಿ ಎಪಿಸೋಡ್‌ಗೆ ಸಿಗುತ್ತೆ ಇಷ್ಟು ದುಡ್ಡು...!!

ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ  ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು" ಎಂದಿದ್ದಾರೆ.

"ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು ನಿವೇಶನಗಳನ್ನು ರಚಿಸಿ ಮಾರಿಕೊಂಡಿದ್ದರು. ಅದಕ್ಕೆ ಬದಲಿ ನಿವೇಶನ ಕೋರಿದ್ದು, ವಿಜಯನಗರದ 3 ಮತ್ತು 4 ನೇ ಹಂತದಲ್ಲಿ ನಿವೇಶನ ಮಂಜೂರು ಮಾಡಿತ್ತು. ನನ್ನ ಪತ್ನಿ ವಿಜಯನಗರದಲ್ಲೇ ನೀಡುವಂತೆ ಕೇಳಿರಲಿಲ್ಲ. ಈಗ ಅದು  ದೊಡ್ಡ ವಿವಾದವಾಗಿದೆ. ಇದರಿಂದ ನನ್ನ ಪತ್ನಿಯ ತೇಜೋವಧೆಯಾಗುತ್ತಿರುವುದು ಹಾಗೂ ರಾಜಕೀಯ ದ್ವೇಷ ಮತ್ತು ಸೇಡನ್ನು ತೀರಿಸಿಕೊಳ್ಳುತ್ತಿರುವ ಕೆಲಸವನ್ನು ವಿರೋಧಿಗಳು ಮತ್ತು ವಿರೋಧ ಪಕ್ಷಗಳು ಮಾಡುತ್ತಿರುವುದರಿಂದ ಮನನೊಂದು ನಿವೇಶನಗಳನ್ನು ಮರಳಿ ನೀಡಲು ತೀರ್ಮಾನಿಸಿದ್ದಾರೆ" ಎಂದು ತಿಳಿಸಿದರು.

ನಿನ್ನೆ ಇಡಿಯವರು ಇಸಿಐಆರ್ ಫೈಲ್ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿಯವರು ಕಾನೂನು ರೀತಿ ಯಾವೆಲ್ಲಾ ಕ್ರಮವಿದೆ ತೆಗೆದುಕೊಳ್ಳಲಿ ಎಂದರು.

ಜಮೀನಿನ ಬದಲಿಗೆ ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನ್ನ ಪ್ರಕಾರ  Money Laundering ಆಗುವುದಿಲ್ಲ. ಈ ಪ್ರಕರಣದಲ್ಲಿ ನನ್ನ ಪಾತ್ರವೇನು? ವಿರೋಧ ಪಕ್ಷದವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ರಾಜಿನಾಮೆ ನೀಡುವುದರಿಂದ ಎಲ್ಲವೂ ಮುಗಿಯುತ್ತದೆಯೇ? ಅನಗತ್ಯವಾಗಿ ರಾಜೀನಾಮೆ ಕೇಳುತ್ತಿದ್ದಾರೆ. ನನ್ನ ತಪ್ಪಿಲ್ಲ ಎಂದ ಮೇಲೆ ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ತವರಿನಲ್ಲಿ ಸತತ 18 ನೇ ಸರಣಿ ಗೆದ್ದ ಭಾರತ: ಟೀಂ ಇಂಡಿಯಾ ಮುಂದೆ ತಲೆಬಾಗೇಬಿಡ್ತು ಬಾಂಗ್ಲಾ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ  ಪ್ರಕರಣಕ್ಕೂ ಹಾಗೂ ನನ್ನ ಪ್ರಕರಣಕ್ಕೂ ವ್ಯತ್ಯಾಸವಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಯಡಿಯೂರಪ್ಪ ಡಿನೊಟಿಫೈ ಮಾಡಿದ್ದರು. ನಾನು ಡಿನೋಟಿಫೈ ಮಾಡಿಲ್ಲ. Money Laundering ಮಾಡಿಲ್ಲ. ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News