ಕೊರೊನಾವೈರಸ್ ವಿರುದ್ಧದ ಹೋರಾಟಕ್ಕೆ ಕುಮಾರಣ್ಣನ ಆರು ಸೂತ್ರಗಳು

ಜಾಗತಿಕವಾಗಿ ವ್ಯಾಪಕವಾಗಿ ಹರಡುತ್ತಿರುವ  ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹಲವು ಸಲಹೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ.

Last Updated : Mar 21, 2020, 05:08 PM IST
ಕೊರೊನಾವೈರಸ್ ವಿರುದ್ಧದ ಹೋರಾಟಕ್ಕೆ ಕುಮಾರಣ್ಣನ ಆರು ಸೂತ್ರಗಳು  title=
file photo

ಬೆಂಗಳೂರು: ಜಾಗತಿಕವಾಗಿ ವ್ಯಾಪಕವಾಗಿ ಹರಡುತ್ತಿರುವ  ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹಲವು ಸಲಹೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಸಲಹೆಗಳ ಪಟ್ಟಿ ಇಲ್ಲಿದೆ.

  • ಕೊರೋನಾ ವೈರಸ್ ವಿರುದ್ಧ ಸೆಣಸುತ್ತಿರುವ ವೈದ್ಯಕೀಯ ವೃಂದ, ಪೊಲೀಸರು, ಪೌರಕಾರ್ಮಿಕರನ್ನು ಚಪ್ಪಾಳೆ ಮೂಲಕ ಗೌರವಿಸಬೇಕೆಂಬ ಮೋದಿ ಕರೆಗೆ ಬೆಂಬಲಿಸುತ್ತಾ ನನ್ನದೊಂದು ಕೋರಿಕೆ. ವಿಪತ್ತಿನ ವಿರುದ್ಧ ಹೋರಾಡುತ್ತಿರುವ ಈ ವರ್ಗಕ್ಕೆ ಸರ್ಕಾರ Incentive (ಪ್ರೋತ್ಸಾಹ ಧನ) ಘೋಷಿಸಿ ಅವರನ್ನು ಮತ್ತಷ್ಟು ಪ್ರೋತ್ಸಾಹಿಸಬೇಕು.
  • ಸಮಯ, ಕುಟುಂಬ, ಆರೋಗ್ಯ ಲೆಕ್ಕಿಸದೇ ಧೈರ್ಯದಿಂದ ಹೋರಾಡುತ್ತಿರುವ ವೈದ್ಯಕೀಯ ವೃಂದ, ಪೊಲೀಸರು, ಪೌರಕಾರ್ಮಿಕರ -ಪರಿಶ್ರಮವನ್ನು ಗೌರವಿಸಬೇಕು. ಪ್ರೋತ್ಸಾಹ ಧನದ ಮೂಲಕ ನೈತಿಕ, ಆರ್ಥಿಕ ಬೆಂಬಲ‌ ನೀಡಬೇಕು.‌ ಇಷ್ಟೇ ಅಲ್ಲ, ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಎಲ್ಲರಿಗೂ 'ಗೌರವ ಪತ್ರ' ನೀಡಿ ಅವರ ಹೋರಾಟವನ್ನು ಅಜರಾಮರಗೊಳಿಸಬೇಕು.
  • ಕಳೆದ ಫೆಬ್ರವರಿಯಿಂದಲೇ ವೈದ್ಯಕೀಯ ವೃಂದದವರು, ಪೊಲೀಸರು, ಪೌರಕಾರ್ಮಿಕರು ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. -ಫೆಬ್ರವರಿಯಿಂದ ಆರಂಭಿಸಿ, ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಯುವವರೆಗೆ ಪ್ರತಿ ತಿಂಗಳು ಇವರೆಲ್ಲರಿಗೂ ಪ್ರೋತ್ಸಾಹ ಧನ ನೀಡಬೇಕು. ಅವರ ಧೈರ್ಯ, ತ್ಯಾಗಕ್ಕೆ ಸರ್ಕಾರ ಮನ್ನಣೆ ನೀಡಬೇಕು.
  • ಕರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ತಕ್ಷಣವೇ -ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು.
  • ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ತಾಕೀತು ಮಾಡುವ ಸರ್ಕಾರ ನೂರಾರು ಜನ ಪ್ರತಿನಿಧಿಗಳು, ಅಧಿಕಾರಿಗಳು, -ಪತ್ರಕರ್ತರು ಹಾಗೂ ಜನರು ಜಮಾಯಿಸುವ ಅಧಿವೇಶನ ನಡೆಸುವುದು ವಾಸ್ತವ ಪರಿಸ್ಥಿತಿಯಲ್ಲಿ ಸರಿಯಲ್ಲ.
  • ತಕ್ಷಣವೇ ಸರ್ಕಾರ ಎಚ್ಚೆತ್ತು ಅಧಿವೇಶನವನ್ನು ತಾತ್ಕಾಲಿಕವಾಗಿ ಮುಂದೂಡಬೇಕು ಎಂದು ಆಗ್ರಹಿಸುತ್ತೇನೆ. "ಸರ್ಕಾರ ಹೇಳುವುದು ಒಂದು ಮಾಡುವುದೊಂದು" ಎಂಬ ಸಾರ್ವಜನಿಕ ಜಿಜ್ಞಾಸೆಗೆ ಒಳಗಾಗಬಾರದು.

Trending News