ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ಎಳೆದು ತರಬೇಡಿ.ನಾನು ರಾಜಕೀಯದಲ್ಲಿ ಇಲ್ಲ - ಟಬು ರಾವ್

ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗು ಸಂಬಂಧವಿಲ್ಲ. ನಾನು ಮುಸ್ಲಿಂ ಕುಟುಂಬದಿಂದ ಬಂದು ಹಿಂದು ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನ ತಳುಕು ಹಾಕುವುದು ಸರಿಯಲ್ಲ ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

Written by - Manjunath N | Last Updated : Oct 4, 2024, 08:24 PM IST
  • ರಾಜಕೀಯವಾಗಿ ಟೀಕೆ ಟಿಪ್ಪಣಿ ಮಾಡುವಾಗ ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ.
  • ಬಿಜೆಪಿಯ ಶಾಸಕ ಯತ್ನಾಳ್ ಅವರು ಇದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿದಾಗ ಟಬು ರಾವ್ ಅವರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.
  • ಪ್ರಕರಣಕ್ಕೆ ಸ್ಟೇ ಕೋರಿದ್ದ ಯತ್ನಾಳ್ ಅವರಿಗೆ ಹೈ ಕೋರ್ಟ್ ನ ಜಸ್ಟಿಸ್ ನಾಗಪ್ರಸನ್ನ ಅವರ ಪೀಠ ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ತಡೆಯಾಜ್ಞೆ ನೀಡಲು ನಿರಾಕರಿಸಿದ್ದರು.
ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ಎಳೆದು ತರಬೇಡಿ.ನಾನು ರಾಜಕೀಯದಲ್ಲಿ ಇಲ್ಲ - ಟಬು ರಾವ್ title=
file photo

ಬೆಂಗಳೂರು: ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗು ಸಂಬಂಧವಿಲ್ಲ. ನಾನು ಮುಸ್ಲಿಂ ಕುಟುಂಬದಿಂದ ಬಂದು ಹಿಂದು ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನ ತಳುಕು ಹಾಕುವುದು ಸರಿಯಲ್ಲ ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಮೊನ್ನೆಯಷ್ಟೇ ಸಾವರ್ಕರ್ ಕುರಿತ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಟೀಕಿಸುವ ಭರದಲ್ಲಿ ಬಿಜೆಪಿ, ಸಚಿವರ ಪತ್ನಿ ಟಬು ರಾವ್ ಅವರ ಹೆಸರನ್ನ ಪ್ರಸ್ತಾಪಿಸಿತ್ತು. ಬಿಜೆಪಿ ಟ್ವೀಟ್ ನಲ್ಲಿ ತಮ್ಮ ಹೆಸರನ್ನ ಎಳೆದು ತಂದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಈ ಬಗ್ಗೆ ಸಂಬಂಧಪಟ್ಟವರನ್ನ ಕರೆಸಿ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. 

ಇದನ್ನೂ ಓದಿ: ವಿಶ್ವದ 8 ಅತ್ಯಂತ ದುಬಾರಿ ಹೂವುಗಳು ಯಾವುವು ಗೊತ್ತೆ..? ಇವುಗಳ ಬೆಲೆ ಕೋಟಿ.. ಕೋಟಿ..

ರಾಜಕೀಯವಾಗಿ ಟೀಕೆ ಟಿಪ್ಪಣಿ ಮಾಡುವಾಗ ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯ ಶಾಸಕ ಯತ್ನಾಳ್ ಅವರು ಇದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿದಾಗ ಟಬು ರಾವ್ ಅವರು ಮಾನನಷ್ಟ ಪ್ರಕರಣ  ದಾಖಲಿಸಿದ್ದರು. ಪ್ರಕರಣಕ್ಕೆ ಸ್ಟೇ ಕೋರಿದ್ದ ಯತ್ನಾಳ್ ಅವರಿಗೆ ಹೈ ಕೋರ್ಟ್ ನ ಜಸ್ಟಿಸ್ ನಾಗಪ್ರಸನ್ನ ಅವರ ಪೀಠ ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ತಡೆಯಾಜ್ಞೆ ನೀಡಲು ನಿರಾಕರಿಸಿದ್ದರು. ಆದರೆ ಇದೀಗ ಬಿಜೆಪಿ ತನ್ನ ಟ್ವೀಟರ್ ನಲ್ಲಿ ಟಬು ರಾವ್ ಅವರ ಹೆಸರನ್ನ ಉಲ್ಲೇಖಿಸಿ ಟೀಕಿಸಿದೆ. ಬಿಜೆಪಿಯ ಈ ನಡೆ ಪುನಾರಾವರ್ತನೆ ಆಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News