ದಸರಾ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ ಬಸ್ ವ್ಯವಸ್ಥೆ..!

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಇರಲಿದೆ.

Written by - Manjunath N | Last Updated : Oct 6, 2024, 02:08 PM IST
  • ಕೆ.ಆರ್.ನಗರ, ಗುಂಡ್ಲುಪೇಟೆಗೂ ಸಾರಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.
  • www.ksrtc.karnataka.gov.in ವೆಬ್‌ಸೈಟ್ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್‌ ಕಾಯ್ದಿರಿಸಬಹುದು.
ದಸರಾ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ ಬಸ್ ವ್ಯವಸ್ಥೆ..! title=

ಬೆಂಗಳೂರು: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಅಕ್ಟೋಬರ್‌ 9 ರಿಂದ 12ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅ.13 ಮತ್ತು 14ರಂದು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳ ಸಂಚಾರ ಇರಲಿದೆ.

ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ಸಂಚಾರ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಕೊಲ್ಲೂರು, ಗೋಕರ್ಣ, ವಿವಿದ ಜಿಲ್ಲಾ ಕೇಂದ್ರಗಳು ಹಾಗೂ ನೆರೆ ರಾಜ್ಯಗಳ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್‌ಘಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ ಇರಲಿದೆ.

ಇದನ್ನೂ ಓದಿ: ದಿನಾ ಬೆಳಿಗ್ಗೆ ಈ ಒಣಹಣ್ಣಿನ ರಸ ಕುಡಿಯೋದಕ್ಕೆ ಇಷ್ಟೊಂದು ಫಿಟ್ ಆಗಿದ್ದಾರಂತೆ ವಿರಾಟ್ ಕೊಹ್ಲಿ! ಸಣ್ಣ ಆಗೋಕೆ ಪರದಾಡೋರಿಗೆ ಸ್ವತಃ ಅವರೇ ಹೇಳಿದ ಟಿಪ್ಸ್ ಇದು

660 ವಿಶೇಷ ಬಸ್‌:  ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಇರಲಿದೆ. ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್. ಅಣೆಕಟ್ಟು, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆಗೂ ಸಾರಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. www.ksrtc.karnataka.gov.in ವೆಬ್‌ಸೈಟ್ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್‌ ಕಾಯ್ದಿರಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News