ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಬೆಂಗಳೂರು ಕಾರಾಗೃಹಕ್ಕೆ ಸ್ಥಳಾಂತರ : ಹೈಕೋರ್ಟ್ ಸೂಚನೆ

Darshan case updates : ರೇಣುಕಾಸ್ವಾಮಿ ಕೊಲೆ  ಪ್ರಕರಣದ ಎರಡನೇ ಆರೋಪಿಯಾಗಿದ್ದು ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಇತರೆ ರೌಡಿ ಶೀಟರ್ ಆರೋಪಿಗಳೊಂದಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸಿಗರೇಟು ಮತ್ತು ಕಾಫಿ ಕುಡಿಯುತ್ತಿದ್ದ ಫೋಟೋ ವೈರಲ್ ಆಗಿತ್ತು.

Written by - Krishna N K | Last Updated : Oct 9, 2024, 07:37 PM IST
    • ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್
    • ಪ್ರದೋಶ್ ಎಸ್.ರಾವ್ ಅವರನ್ನು ಮತ್ತೆ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ
    • ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಬೆಂಗಳೂರು ಕಾರಾಗೃಹಕ್ಕೆ ಸ್ಥಳಾಂತರ : ಹೈಕೋರ್ಟ್ ಸೂಚನೆ title=

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್.ರಾವ್ ಅವರನ್ನು ಮತ್ತೆ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಪ್ರದೋಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ,  ಪ್ರಕರಣದಲ್ಲಿ ಅರ್ಜಿದಾರರು ದರ್ಶನ್ ಅವರಿಂದ ದೂರು ಇದ್ದಾರೆ. ವೈರಲ್ ಆದ ಫೋಟೋದಲ್ಲಿಯೂ ಕಾಣಿಸಿಕೊಂಡಿಲ್ಲ. ದರ್ಶನ್ ಮೇಲಿನ ಆರೋಪವನ್ನು ಅರ್ಜಿದಾರರ ಮೇಲೆ‌ ಹೊರಿಸಲಾಗಿದೆ‌ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಇಬ್ಬರು ಮಾಜಿ ಸಿಎಂಗಳ ಹನಿಟ್ರ್ಯಾಪ್‌..! ಭದ್ರತೆ ಕೊಟ್ರೆ ಹೆಸರು, ವಿಡಿಯೋ ರಿಲೀಸ್‌...

ಜತೆಗೆ, ವಿಚಾರಣಾಧೀನ ಕೈದಿ ಜೈಲನ್ನು ಆಯ್ಕೆ ಮಾಡಿಕೊಳ್ಳುವಂತಿಲ್ಲ.‌ಆದರೆ, ಅವರನ್ನು ಬೇರೊಂದು ಜೈಲಿಗೆ ಸ್ಥಳಾಂತರ ಮಾಡಲು ಸೂಕ್ತ ಕಾರಣಗಳಿರಬೇಕು.  ವಿವೇಚನೆ ಬಳಸಿ ಈ ರೀತಿಯ ಆದೇಶಗಳನ್ನು ಮಾಡಬೇಕಾಗುತ್ತದೆ ಎಂದು ಪೀಠ ತಿಳಿಸಿದೆ.

ಕೈದಿಗಳನ್ನು ಒಂದು ಜೈಲಿನಿಂದ ಮತ್ತೊಂದು ಜೈಲಿಗೆ ಸ್ಥಳಾಂತರ ಮಾಡುವುದು ಆಡಳಿತಾತ್ಮಕ ಕ್ರಮವಲ್ಲ. ಬದಲಾಗಿ ನ್ಯಾಯಾಂಗ ಮತ್ತು ಅರೆ ನ್ಯಾಯಾಂಗ ಕಾರ್ಯವಾಗಿದೆ. ಈ ಪ್ರಕ್ರಿಯೆಯಲ್ಲಿ ಕೈದಿಯ ವಾದವನ್ನು ಆಲಿಸಲು ಕಾಲಾವಲಾಶ ಕೊಡಬೇಕಾಗುತ್ತದೆ. ಇಲ್ಲವಾದಲ್ಲಿ ಕೈದಿಯ ವಿರುದ್ದ ಪೂರ್ವಾಗ್ರಹ ಉಂಟು ಮಾಡಲಿದೆ. ಹೀಗಾಗಿ ಕೈದಿಗಳನ್ನು ಸ್ಥಳಾಂತರ ಮಾಡುವ ಸಂದರ್ಭದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳು ವಿವೇಚನೆ ಬಳಸಬೇಕಾಗುತ್ತದೆ ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ  ಪ್ರಕರಣದ ಎರಡನೇ ಆರೋಪಿಯಾಗಿದ್ದು ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಇತರೆ ರೌಡಿ ಶೀಟರ್ ಆರೋಪಿಗಳೊಂದಿಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸಿಗರೇಟು ಮತ್ತು ಕಾಫಿ ಕುಡಿಯುತ್ತಿದ್ದ ಫೋಟೋ ವೈರಲ್ ಆಗಿತ್ತು.

ಇದನ್ನೂ ಓದಿ:ಮದ್ಯ ಪ್ರಿಯರಿಗೆ ಸರ್ಕಾರದಿಂದ ಬಿಗ್ ಶಾಕ್..!! ರಾಜ್ಯದ ಈ ಭಾಗದಲ್ಲಿ ಮದ್ಯ ಮಾರಾಟ ನಿಷೇಧ

ರೌಡಿ ಶೀಟರ್ ಗಳೊಂದಿಗೆ ದರ್ಶನ್ ಇದ್ದ ಫೋಟೋ ವೈರಲ್ ಆದ ಕಾರಣ ಪ್ರಕರಣದ ಸಾಕ್ಷಿಗಳ ನೈತಿಕ ಸ್ಥೈರ್ಯ ಕುಗ್ಗಿಸುತ್ತದೆ ಮತ್ತು ದರ್ಶನ್ ಅವರನ್ನು ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂಬುದಾಗಿ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಬರಲಿದೆ ಎಂದು ತಿಳಿಸಿದ್ದ ಜೈಲು ಅಧಿಕಾರಿಗಳು ಘಟನೆ ನಂತರ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಪಡೆದು ಎಲ್ಲ ಆರೋಪಿಗಳನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿತ್ತು. 

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸ್ಥಳಾಂತರಗೊಂಡ ಪ್ರದೋಶ್ ಅವರನ್ನು ಅಂಧೇರಿ ಸೆಲ್ ನಲ್ಲಿ 15 ಗಂಟೆಗಳ ಕಾಲ ಕತ್ತಲೆ ಕೊಣೆಯಲ್ಲಿ ಇರಿಸಲಾಗಿತ್ತು. ಎಂಟು ಗಂಟೆಗಳ ಕಾಲ ಕ್ಯಾಮೆರಾ ಮುಂದೆ ಕೂರಿಸಿದ್ದರು‌ ಎಂದು ವಾದಿಸಿದ್ದರು. ಈ ಸಂಬಂಧ ಅರ್ಜಿದಾರರ ಪತ್ನಿ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ತಿಳಿಸಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದ ಸರ್ಕಾರಿ ವಕೀಲರು, ಅಂಧೇರಿ ಎಂಬುದು ಸೆಲ್ ನ ಹೆಸರು ಮಾತ್ರ ಎಂದು‌ ತಿಳಿಸಿದ್ದರು. ಅಲ್ಲದೆ, ಸೆಲ್ ನ ಹೆಸರನ್ನು ಅಂಧೇರಿ ಎಂಬುದಾಗಿ ಇಡಲಾಗಿದೆ. ಈ ವೇಳೆ ಪೀಠ, ಅರ್ಜಿದಾರರ ಪತ್ನಿ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವ್ಯಕ್ತ ಪಡಿಸಿರುವ ಅನುಮಾನ ಸರಿಯಾಗಿದೆ. ಅಲ್ಲದೆ, ಪ್ರದೋಶ್ ಇನ್ನೂ ವಿಚಾರಣಾಧೀನ ಕೈದಿಯಾಗಿದ್ದಾರೆ. ಗಂಭೀರ ಆಯೋಪ ಇಲ್ಲದ ಹೊರತಾಗಿ ಅವರನ್ನು ಸ್ಥಳಾಂತರ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿತ್ತು.

ಇದನ್ನೂ ಓದಿ:ಹಾಲಿನಂತ ಬಣ್ಣ, ಒಂದು ಕಪ್ಪು ಚುಕ್ಕೆ ಇಲ್ಲದ ಮೈಸಿರಿ..! ಬ್ರಹ್ಮನ ಸೃಷ್ಟಿ ಅದ್ಭುತ.. ಯಾರ್‌ ಗೊತ್ತೆ ಈ ಗಂಧರ್ವ ಕನ್ಯೆ..?

ಅಲ್ಲದೆ, ವಾದ ಪ್ರತಿವಾದ ಆಲಿಸಿರೋ ನ್ಯಾಯಾಲಯ ಪವಿತ್ರ ಗೌಡ, ಎ8 ರವಿಶಂಕರ್, ಎ13 ದೀಪಕ್ ಕುಮಾರ್ ಜಾಮೀನು ಅರ್ಜಿ ತೀರ್ಪುನ್ನ 14ನೇ ತಾರೀಖಿನಂದು ಕಾಯ್ದಿರಿಸಿದೆ, ಹಾಗೆ ಎ11-12-ನಾಗರಾಜ್ ಲಕ್ಷ್ಮಣ್ ಜಾಮೀನು ಕಾಯ್ದಿರಿಸಿದ ಪೀಠ ದರ್ಶನ್ ಹಾಗೂ ಎ10 ಜಾಮೀನು ಅರ್ಜಿ ನಾಳೆ ವಿಚಾರಣೆ ಮುಂದೂಡಿಕೆ ಮಾಡಿದೆ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News