ಗಂಡು ಹಾವನ್ನು ಸಾಯಿಸಿದಕ್ಕೆ ಹೆಣ್ಣು ಹಾವಿನಿಂದ ಕಾಟ; 24 ಗಂಟೆಗಳಲ್ಲಿಯೇ ನಾಗಪ್ಪನ ದೇವಸ್ಥಾನ 

ತುಂಬಾ ದಿನಗಳಿಂದ ಓಡಾಡಿಕೊಂಡಿದ್ದ ಈ ಹಾವು ಕಂಡ ತಕ್ಷಣವೇ ಅದನ್ನು ಹೊಡೆದು ಕೊಲ್ಲಲಾಗಿತ್ತು. ಅದಾದ ಒಂದು ವಾರದಲ್ಲಿ ಈ ಮನೆಯ 11 ವರ್ಷದ ಪೂಜಾ ಎಂಬ ಬಾಲಕಿಗೆ ಇದೇ ಹಿತ್ತಲಿನಲ್ಲಿ ನಾಗರಹಾವು ಕಾಣೋಕೆ ಶುರುವಾಗಿತ್ತು. ಆಕೆಗೆ ಮಾತ್ರವಲ್ಲ, ಅಕ್ಕಪಕ್ಕದ ಮನೆಗಳ ಮಕ್ಕಳಿಗೆ ಆ ಹಾವು ಕಂಡಿತ್ತು.

Written by - Manjunath N | Last Updated : Oct 16, 2024, 06:50 PM IST
  • ತುಂಬಾ ದಿನಗಳಿಂದ ಓಡಾಡಿಕೊಂಡಿದ್ದ ಈ ಹಾವು ಕಂಡ ತಕ್ಷಣವೇ ಅದನ್ನು ಹೊಡೆದು ಕೊಲ್ಲಲಾಗಿತ್ತು
  • ಅದಾದ ಒಂದು ವಾರದಲ್ಲಿ ಈ ಮನೆಯ 11 ವರ್ಷದ ಪೂಜಾ ಎಂಬ ಬಾಲಕಿಗೆ ಇದೇ ಹಿತ್ತಲಿನಲ್ಲಿ ನಾಗರಹಾವು ಕಾಣೋಕೆ ಶುರುವಾಗಿತ್ತು
  • ಆಕೆಗೆ ಮಾತ್ರವಲ್ಲ, ಅಕ್ಕಪಕ್ಕದ ಮನೆಗಳ ಮಕ್ಕಳಿಗೆ ಆ ಹಾವು ಕಂಡಿತ್ತು
ಗಂಡು ಹಾವನ್ನು ಸಾಯಿಸಿದಕ್ಕೆ ಹೆಣ್ಣು ಹಾವಿನಿಂದ ಕಾಟ; 24 ಗಂಟೆಗಳಲ್ಲಿಯೇ ನಾಗಪ್ಪನ ದೇವಸ್ಥಾನ  title=

ಹುಬ್ಬಳ್ಳಿ; ಮನೆಯ ಹಿತ್ತಲಿನಲ್ಲಿ ಹಾವು ಕಾಣಿಸಿಕೊಂಡಿದ್ದು ಮನೆಯವರು ಅದನ್ನು ಹೊಡೆದು ಸಾಯಿಸಿದ್ದರು. ಈ ಘಟನೆ ಬಳಿಕ ಮತ್ತೊಂದು ಹಾವು ಮನೆಯ ಮಕ್ಕಳಿಗೆ, ಅಕ್ಕ-ಪಕ್ಕದ ಮಕ್ಕಳಿಗೆ ಕಾಣಿಸಿಕೊಂಡಿದೆ. ಇದರಿಂದ ಊರಲೆಲ್ಲ ಬಿಸಿ ಬಿಸಿ ಚರ್ಚೆಯಾಗಿದ್ದು ಗಂಡನನ್ನು ಸಾಯಿಸಿದಕ್ಕೆ ಹೆಣ್ಣು ಹಾವು ಈ ರೀತಿ ಬೆನ್ನುಬಿದ್ದಿದೆ ಎಂಬ ಮಾತು ಕೇಳಿ ಬಂದಿದೆ. ಹೀಗಾಗಿ ಹಾವನ್ನು ಸಾಯಿಸಲಾದ ಜಾಗದಲ್ಲೇ ನಾಗರ ಹಾವಿನ ದೇವಸ್ಥಾನ ಕಟ್ಟಿ ಪೂಜಿಸಲಾಗುತ್ತಿದೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದ ಹನುಮಂತ ಜಾಧವ ಎಂಬುವವರ ಹಿತ್ತಲಿನಲ್ಲಿ ಒಂದೇ ರಾತ್ರಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ನಾಗರ ಪಂಚಮಿಯ ಮುನ್ನಾದಿನ ಇವರ ಹಿತ್ತಲಿನ ಇದೇ ಸ್ಥಳದಲ್ಲಿ ದೊಡ್ಡ ನಾಗರಹಾವೊಂದು ಕಂಡಿತ್ತು. ತುಂಬಾ ದಿನಗಳಿಂದ ಓಡಾಡಿಕೊಂಡಿದ್ದ ಈ ಹಾವು ಕಂಡ ತಕ್ಷಣವೇ ಅದನ್ನು ಹೊಡೆದು ಕೊಲ್ಲಲಾಗಿತ್ತು.ಅದಾದ ಒಂದು ವಾರದಲ್ಲಿ ಈ ಮನೆಯ 11 ವರ್ಷದ ಪೂಜಾ ಎಂಬ ಬಾಲಕಿಗೆ ಇದೇ ಹಿತ್ತಲಿನಲ್ಲಿ ನಾಗರಹಾವು ಕಾಣೋಕೆ ಶುರುವಾಗಿತ್ತು. ಆಕೆಗೆ ಮಾತ್ರವಲ್ಲ, ಅಕ್ಕಪಕ್ಕದ ಮನೆಗಳ ಮಕ್ಕಳಿಗೆ ಆ ಹಾವು ಕಂಡಿತ್ತು.

ಇದನ್ನೂ ಓದಿ : Coffee For Weight Loss: ಕಾಫಿ ಕುಡಿದ್ರೆ ಸಾಕು ತೂಕ ಇಳಿಯೋದಷ್ಟೇ ಅಲ್ಲ ಬೆಲ್ಲಿ ಸ್ಲಿಮ್ ಆಗುತ್ತೆ...!

ಬಳಿಕ ಈ ಹಾವು ಹಿಂದೆ ಕೊಂದಿರೋ ನಾಗರ ಹಾವಿನ ಪತ್ನಿ.ಗಂಡನನ್ನು ಕೊಂದಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಬಂದಿದೆ.ನೀವು ದೇವಸ್ಥಾನ ಕಟ್ಟಿ ಎಂದು ಜನ ಹೇಳೋಕೆ ಶುರು ಮಾಡಿದ್ರು. ಅಲ್ಲದೆ ಮಕ್ಕಳು ಕೂಡ ಇದನ್ನೇ ಹೇಳುತ್ತಿದ್ದರು. ಹೀಗಾಗಿ ಮಕ್ಕಳ ಮೂಲಕವೇ ನಾಗದೇವತೆ ಈ ಮಾತನ್ನು ಹೇಳಿಸಿದ್ದಾಳೆಂದು ಒಂದೇ ರಾತ್ರಿಯಲ್ಲಿ ದೇವಸ್ಥಾನ ಕಟ್ಟಲಾಗಿದೆ.

ಸುಟ್ಟರೂ ಸುಡದ ಹಾವು: 

ಇನ್ನು ಇಲ್ಲಿ ಅಚ್ಚರಿ ಎಂದರೆ ಸತ್ತ ಹಾವನ್ನು ದಹನ ಮಾಡಿದರೆ ಅದು ಸುಡಲೇ ಇಲ್ಲವಂತೆ. ಆಗಲೇ ಜನರಿಗೆ ಆತಂಕ ಶುರುವಾಗಿದೆ.ಅಲ್ಲದೇ ಮಕ್ಕಳಿಗೆ ಕಂಡ ಹಾವು ನಾಗದೇವತೆ ಅಂತಾನೇ ಇಲ್ಲಿನ ಜನ ನಂಬಿದ್ದಾರೆ. ಅಷ್ಟೇ ಅಲ್ಲ, ಹಾವು ನೋಡಿದ ಮಕ್ಕಳೊಂದಿಗೆ ಎಲ್ಲರೂ ಕುಕ್ಕೆ ಸುಬ್ರಹ್ಮಣ್ಯಕ್ಕೂ ಹೋಗಿ ಬಂದಿದ್ದಾರೆ. ಅಲ್ಲಿಯೂ ದೋಷ ಪರಿಹಾರಕ್ಕೆ ದೇವಸ್ಥಾನ ನಿರ್ಮಾಣದ ಸೂತ್ರವನ್ನೇ ಅರ್ಚಕರು ಹೇಳಿದ್ದಾರೆ. ಅಲ್ಲಿಂದ ಬಂದ ದಿನ ರಾತ್ರಿಯೇ ಗ್ರಾಮಸ್ಥರೆಲ್ಲ ಸೇರಿ, ದೇವಸ್ಥಾನ ಕಟ್ಟಿ, ಜೋಡಿ ನಾಗರ ಕಲ್ಲಿನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ.ಇದು ದೇವರ ಸ್ವರೂಪ ಅಂತಾ ಹೇಳುತ್ತಿದ್ದು, ಸದ್ಯ ಜನ ತಂಡೋಪತಂಡವಾಗಿ ನೋಡೋಕೆ ಬರುತ್ತಿದ್ದಾರೆ.ಇನ್ನು ಮಕ್ಕಳಿಗೆ ಕಂಡ ಹಾವು ಇನ್ನೂವರೆಗೂ ದೊಡ್ಡವರಿಗೆ ಮಾತ್ರ ಕಂಡಿಲ್ಲವಂತೆ. ಹೀಗಾಗಿ ಇದು ದೇವರ ಪವಾಡ ಅಂತಾ ನಂಬಿರೋ ಸ್ಥಳೀಯರು ಈಗ ನಿರ್ಮಾಣವಾಗಿರೋ ದೇವಸ್ಥಾನಕ್ಕೆ ಕಳಸ ಸಹಿತ ಇನ್ನಿತರ ಅಭಿವೃದ್ಧಿ ಮಾಡೋಕೆ ಮುಂದಾಗಿದ್ದಾರೆ.

ಇದನ್ನೂ ಓದಿ : ತಿಂಗಳಾನುಗಟ್ಟಲೆ ಕಾಡುವ ಕೆಮ್ಮಿಗೆ ನಿಮಿಷಗಳಲ್ಲಿ ಪರಿಹಾರ ! ಎದೆಯಲ್ಲಿ ಸಂಗ್ರಹವಾಗಿರುವ ಕಫವನ್ನು ಹೊರ ಹಾಕುತ್ತದೆ ಈ ವಸ್ತು!

ನಮ್ಮಲ್ಲಿ ನಾಗರ ಹಾವಿನ ಬಗ್ಗೆ ಅನೇಕ ಕಥೆಗಳು, ನಂಬಿಕೆಗಳಿವೆ.ಅಲ್ಲದೇ ನಾಗರ ಹಾವಿನ ಕೋಪ ತುಂಬಾ ಕಠೋರ ಹಾಗೂ ಪವಾಡ ಅನ್ನೋ ನಂಬಿಕೆಯೂ ಇದೆ. ಅಂಥ ನಂಬಿಕೆಗಳ ಪಾಲಿಗೆ ಈ ದೇವಸ್ಥಾನವೊಂದು ಇದೀಗ ಹೊಸದಾಗಿ ಸೇರ್ಪಡೆಯಾಗಿದೆ. ಒಟ್ಟಿನಲ್ಲಿ ಜನರು ನಂಬಿಕೆಗಳನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ಅನ್ನೋದಕ್ಕೆ ಈ ದೇವಸ್ಥಾನವೇ ಸಾಕ್ಷಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News