ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ ಸರ್ಫರಾಜ್; ಕಳೆದ 10 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ

Sarfaraz Khan Century: ನ್ಯೂಜಿಲೆಂಡ್ ವಿರುದ್ಧದ 2ನೇ ಇನ್ನಿಂಗ್ಸ್‌ನಲ್ಲಿ ಸರ್ಫರಾಜ್ ಖಾನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು, ಶತಕ ಬಾರಿಸುವ ಮೂಲಕ ಭಾರತದ ಮಾಜಿ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

Written by - Puttaraj K Alur | Last Updated : Oct 19, 2024, 11:26 PM IST
  • ನ್ಯೂಜಿಲೆಂಡ್‌ ವಿರುದ್ಧ ಅದ್ಭುತ ಇನ್ನಿಂಗ್ಸ್‌ ಆಡಿದ ಸರ್ಫರಾಜ್‌ ಖಾನ್‌
  • ಟೆಸ್ಟ್‌ ವೃತ್ತಿಜೀವನದ ಮೊದಲ ಶತಕ ಗಳಿಸಿ ಮಿಂಚಿದ ಅದ್ಭುತ ಆಟಗಾರ
  • ಶತಕದ ಮೂಲಕ ಶಿಖರ್‌ ಧವನ್‌ ದಾಖಲೆ ಸರಿಗಟ್ಟಿದ ಸರ್ಫರಾಜ್‌
ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ ಸರ್ಫರಾಜ್; ಕಳೆದ 10 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ title=
ಸರ್ಫರಾಜ್ ಖಾನ್ ಶತಕ ಸಾಧನೆ

Sarfaraz Khan Century: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸರ್ಫರಾಜ್ ಖಾನ್ ಭರ್ಜರಿ ಶತಕ ಸಿಡಿಸಿದ್ದಾರೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಾದ್ಯಂತ ಸ್ಟ್ರೋಕ್‌ಗಳನ್ನು ಹೊಡೆದರು. ರನ್ ಗಳಿಸುವಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ. ಸರ್ಫರಾಜ್‌ರ ಈ ಶತಕ ಸಾಧನೆಯಿಂದ ಟೀಂ ಇಂಡಿಯಾ 2ನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಮೊತ್ತವನ್ನು ಕಲೆ ಹಾಕಲು ನೆರವಾಯಿತು. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಅವರಿಗೆ ಒಂದೇ ಒಂದು ಟೆಸ್ಟ್ ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಕಿವೀಸ್‌ ವಿರುದ್ಧದ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಸದುಪಯೋಗಪಡಿಸಿಕೊಂಡರು. 

ಪಂತ್ & ಕೊಹ್ಲಿ ಜೊತೆಗೆ ಉತ್ತಮ ಜೊತೆಯಾಟ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕತ್ತಿನ ಸೆಳೆತದಿಂದ ಶುಭಮನ್ ಗಿಲ್ ಆಡಲಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಸರ್ಫರಾಜ್‌ಗೆ ಅವಕಾಶ ಸಿಕ್ಕಿತು. ಈ ಅವಕಾಶವನ್ನು ಸರಿಯಾಗಿ ಬಳಸಿಕೊಂಡ ಸರ್ಫರಾಜ್‌ ಭರ್ಜರಿ ಶತಕ ಸಿಡಿಸಿದರು. 195 ಎಸೆತಗಳಲ್ಲಿ 18 ಬೌಂಡರಿ ಮತ್ತು 3 ಸಿಕ್ಸರ್‌ ಇದ್ದ 150 ಗಳಿಸಿ ಮಿಂಚಿದರು. ಮೊದಲು ವಿರಾಟ್ ಕೊಹ್ಲಿ ಜೊತೆ 136 ರನ್‌ಗಳ ಜೊತೆಯಾಟವಾಡಿದ ಸರ್ಫರಾಜ್‌, ನಂತರ ರಿಷಭ್ ಪಂತ್ ಜೊತೆ 100+ ರನ್‌ಗಳ ಜೊತೆಯಾಟ ನಡೆಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಕೇವಲ 46 ರನ್‌ಗಳಿಗೆ ಸರ್ವಪತನ ಕಂಡಿತ್ತು. ನ್ಯೂಜಿಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 402 ರನ್‌ ಗಳಿಸಿ 356 ರನ್‌ಗಳ ಮುನ್ನಡೆ ಸಾಧಿಸಿತ್ತು. ಹೀಗಾಗಿ ಟೀಂ ಇಂಡಿಯಾ ಬಹುದೊಡ್ಡ ಸಂಕಷ್ಟಕ್ಕೆ ಸಿಲುಕಿತ್ತು. 

ಇದನ್ನೂ ಓದಿ: ಸುನಾಮಿಗೆ ಸಿಲುಕಿ ಕೊಚ್ಚಿಯೇ ಹೋಗುತ್ತಿದ್ದರು ಈ ದಿಗ್ಗಜ್ಜ ಕ್ರಿಕೆಟಿಗ !ಕೊನೆ ಘಳಿಗೆಯಲ್ಲಿ ಬಚಾವಾದ ರೀತಿ ಪವಾಡವೇ !

2ನೇ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದರೂ ಸಹ ನಂತರ ಚೇತರಿಸಿಕೊಂಡ ಟೀಂ ಇಂಡಿಯಾ ನ್ಯೂಜಿಲೆಂಡ್‌ ವಿರುದ್ಧ ಅದ್ಭುತ ಆಟವನ್ನು ಪ್ರದರ್ಶಿಸಿತು. ಯಶಸ್ವಿ ಜೈಸ್ವಾಲ್‌ (35), ನಾಯಕ ರೋಹಿತ್‌ ಶರ್ಮಾ (52) ವಿರಾಟ್‌ ಕೊಹ್ಲಿ (70) ಮತ್ತು ರಿಷಭ್‌ ಪಂತ್‌(99) ರನ್‌ ಗಳಿಸಿ ಔಟಾದರು.

ನ್ಯೂಜಿಲೆಂಡ್ ವಿರುದ್ಧ ಸರ್ಫರಾಜ್‌ ಅದ್ಭುತ ಆಟ!

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸರ್ಫರಾಜ್ ಸೊನ್ನೆ ಸುತ್ತಿದ್ದರು. 2ನೇ ಇನ್ನಿಂಗ್ಸ್‌ನಲ್ಲಿ ಅವರು ಅದ್ಭುತ ಪುನರಾಗಮನ ಮಾಡಿದರು. ಕಿವೀಸ್‌ ವಿರುದ್ಧ ಅದ್ಭುತ ಇನ್ನಿಂಗ್ಸ್‌ ಆಡಿದ ಅವರು ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕವನ್ನು ಗಳಿಸಿದರು. 110 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಭಾರತದ ಬ್ಯಾಟ್ಸ್‌ಮನ್‌ಯೊಬ್ಬರು ಒಂದೇ ಟೆಸ್ಟ್‌ನಲ್ಲಿ ಶೂನ್ಯ ಹಾಗೂ ಶತಕ ಸಿಡಿಸಿದ್ದು ಇದು 22ನೇ ಬಾರಿ. 

ಇದನ್ನೂ ಓದಿ: IND vs NZ, 1st Test: ರಿಷಭ್ ಪಂತ್‌ ಹೆಗಲೆರಿದ ಸಚಿನ್‌ ತೆಂಡೂಲ್ಕರ್‌ಗೆ ಕಾಡಿದ್ದ ʼನರ್ವಸ್‌ 90ʼ ಭೂತ..!

ಕಳೆದ 10 ವರ್ಷಗಳಲ್ಲಿ ನ್ಯೂಜಿಲೆಂಡ್ ವಿರುದ್ಧದ ಒಂದೇ ಟೆಸ್ಟ್‌ನಲ್ಲಿ ಭಾರತದ ಬ್ಯಾಟ್ಸ್‌ಮನ್ ಶೂನ್ಯ ಮತ್ತು ಶತಕ ಗಳಿಸಿದ್ದು ಇದೇ ಮೊದಲು. ಸರ್ಫರಾಜ್ ಅವರಿಗಿಂತ ಮೊದಲು 2014ರಲ್ಲಿ ಶಿಖರ್ ಧವನ್ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಶೂನ್ಯ ಮತ್ತು 115 ರನ್ ಗಳಿಸಿದ್ದರು. ಸರ್ಫರಾಜ್ ಇದೀಗ ಶಿಖರ್ ಧವನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. 

ಇಂಗ್ಲೆಂಡ್ ವಿರುದ್ಧ ಪದಾರ್ಪಣೆ  

ಸರ್ಫರಾಜ್ ಖಾನ್ 2024ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. ಇಲ್ಲಿಯವರೆಗೆ ಅವರು ಟೀಂ ಇಂಡಿಯಾ ಪರ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 325 ರನ್ ಗಳಿಸಿದ್ದಾರೆ, ಇದರಲ್ಲಿ ಒಂದು ಶತಕ ಮತ್ತು ಮೂರು ಅರ್ಧ ಶತಕಗಳು ಸೇರಿವೆ. ಈ ಅವಧಿಯಲ್ಲಿ ಅವರ ಸರಾಸರಿ 65.00 ಆಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News