Indian Premier League 2025: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಈಗಾಗಲೇ ಭರದ ಸಿದ್ಧತೆಗಳು ನಡೆಯುತ್ತಿವೆ. ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ರಣತಂತ್ರ ರೂಪಿಸುತ್ತಿವೆ. ಈ ಬಾರಿ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಯೊಂದಕ್ಕೆ ಗರಿಷ್ಠ 6 ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವು ಈ ಬಾರಿ ಅಳೆದು ತೂಗಿ ಕೆಲ ಆಟಗಾರರನ್ನು ರೀಟೈನ್ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿತ್ತು. ಇದೆಲ್ಲದರ ನಡುವೆ ಆರ್ಸಿಬಿ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಆರ್ಸಿಬಿ ತಂಡದ ದುಬಾರಿ ಆಟಗಾರನಾಗಿರೋ ಆಸ್ಟ್ರೇಲಿಯಾ ಮೂಲದ ಸ್ಟಾರ್ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಸೊಂಟ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಸರ್ಜರಿಗೆ ಒಳಗಾಗಿದ್ದಾರೆಂದು ವರದಿಯಾಗಿದೆ. ಹೀಗಾಗಿ ಮುಂದಿನ 6 ತಿಂಗಳು ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಆರ್ಸಿಬಿ ತಂಡಕ್ಕೆ ಗ್ರೀನ್ ಅವರನ್ನು ರೀಟೈನ್ ಮಾಡಿಕೊಳ್ಳಬೇಕೋ ಅಥವಾ ರಿಲೀಸ್ ಮಾಡಬೇಕೋ ಅನ್ನೋ ಗೊಂದಲ ಮೂಡಿದೆ.
ಇದನ್ನೂ ಓದಿ: IPL 2025: ಹಿಟ್ಮ್ಯಾನ್ RCB ತಂಡ ಸೇರುವುದು ಕನ್ಫರ್ಮ್..? ವಿಡಿಯೋ ಫ್ರೂಪ್ ಜೊತೆಗೆ ವಿಷಯ ಲೀಕ್..!
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಿಂದ ಗ್ರೀನ್ ಅವರನ್ನು 17.5 ಕೋಟಿ ರೂ.ಗೆ ಆರ್ಸಿಬಿ ಟ್ರೇಡ್ ಮಾಡಿತ್ತು. ಆದರೆ ಆರ್ಸಿಬಿ ಪರ ಗ್ರೀನ್ ಸಾಧಾರಣ ಪ್ರದರ್ಶನ ತೋರಿದ್ದರು. ಸೊಂಟನೋವು ಕಾಣಿಸಿಕೊಂಡ ಬೆನ್ನಲ್ಲೇ ಗ್ರೀನ್ ಸ್ಕ್ಯಾನ್ಗೆ ಒಳಗಾಗಿದ್ದರು. ಈ ಸ್ಕ್ಯಾನ್ ಪರಿಶೀಲಿಸಿದಾಗ ಅವರಿಗೆ ಅಪರೂಪದ ಸಮಸ್ಯೆ ಇರುವುದು ಕಂಡುಬಂದಿದೆ. ಹೀಗಾಗಿ ಗ್ರೀನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂದಿನ 6 ತಿಂಗಳು ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಅಂತಾ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹೀಗಾಗಿ ಗ್ರೀನ್ ಮುಂಬರುವ ಐಪಿಎಲ್ ಟೂರ್ನಿಯ ಆರಂಭಿಕ ಕೆಲ ಪಂದ್ಯಗಳಿಗೂ ಅಲಭ್ಯರಾಗುವ ಭೀತಿ ಎದುರಾಗಿದೆ.
ಟೆಸ್ಟ್ ಸರಣಿಯಿಂದಲೂ ಗ್ರೀನ್ ಔಟ್!
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನವೆಂಬರ್ 22ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಉಭಯ ತಂಡಗಳ ಪಾಲಿಗೆ ಈ ಸರಣಿ ಸಾಕಷ್ಟು ಮಹತ್ವದ್ದಾಗಿದೆ. ಆಸೀಸ್ ಪರ ಟೆಸ್ಟ್ ಸರಣಿಯಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಕಣಕ್ಕಿಳಿಯುತ್ತಿದ್ದ ಗ್ರೀನ್, ಉಪಯುಕ್ತ ಬೌಲರ್ ಆಗಿಯೂ ಸೈ ಎನಿಸಿಕೊಂಡಿದ್ದರು. ಇದೀಗ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿಯೂ ಗ್ರೀನ್ ಅನುಪಸ್ಥಿತಿ ಕಾಂಗರೂ ಪಡೆಯನ್ನು ಕಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.