ಈ ವಾರ ತೆರೆಗೆ "ಯಲಾಕುನ್ನಿ" ; ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್

Komal New Movie: ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌. 

Written by - YASHODHA POOJARI | Edited by - Chetana Devarmani | Last Updated : Oct 22, 2024, 12:42 PM IST
  • ಕೋಮಲ್ ಕುಮಾರ್ ಹೊಸ ಸಿನಿಮಾ
  • ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿದ ಕೋಮಲ್‌
  • ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್
ಈ ವಾರ ತೆರೆಗೆ "ಯಲಾಕುನ್ನಿ" ; ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್  title=

Komal in Vajramuni Look: ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಹಾಗೂ ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ "ಯಲಾಕುನ್ನಿ" ಚಿತ್ರ ಈ ವಾರ ಅಕ್ಟೋಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Chaitra Kundapura Marriage: ತಮ್ಮ ಮದುವೆ ಬಗ್ಗೆ ಶಾಕಿಂಗ್‌ ವಿಚಾರ ಬಿಚ್ಚಿಟ್ಟ ಚೈತ್ರಾ ಕುಂದಾಪುರ !

ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌.  ಕೋಮಲ್ ಅವರು ಕನ್ನಡದ ಹೆಸರಾಂತ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.  ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ. ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್,  ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.

ವಿಶೇಷವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.  ಸಂಪೂರ್ಣ ಹಳ್ಳಿ ಸೊಗಡಿನಲ್ಲಿ  ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. "ಯಲಾಕುನ್ನಿ" ಚಿತ್ರಕ್ಕೆ 'ಮೇರಾ ನಾಮ್ ವಜ್ರಮುನಿ' ಎಂಬ ಅಡಿಬರಹವಿದೆ

ಇದನ್ನೂ ಓದಿ: ಸಲ್ಮಾನ್ ಖಾನ್ ಸಿನಿಮಾವನ್ನೇ ರಿಜೆಕ್ಟ್ ಮಾಡಿದ್ದ ಬ್ಯೂಟಿ, ಸದ್ಯ ಅತಿಹೆಚ್ಚು ಫಾಲೋವರ್ಸ್ ಹೊಂದಿರುವ ಸ್ಟಾರ್ ನಟಿ, ಈಕೆ ಯಾರ್ ಗೊತ್ತಾ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News