ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರ.ರೂಗೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ

ಖಾತೆಯಿಂದ ಹಣವನ್ನು ವರ್ಗಾಹಿಸಲು ತಾವು ಯಾವುದೇ ತೆರನಾದ ಪ್ರಕ್ರಿಯೆಗಳನ್ನು ಪಾಲಿಸದೇ ಅವರ ಗಮನಕ್ಕೆ ಬಾರದಂತೆ ವರ್ಗಾವಣೆಗೊಂಡಿದ್ದರ ಮೊತ್ತದ ಬಗ್ಗೆ ಬ್ಯಾಂಕಿಂಗ್ ಓಂಬಡ್ಸ್‍ಮನ್‍ಗೆ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಪರಿಹಾರ, ನ್ಯಾಯ ಸಿಕ್ಕಿರಲಿಲ್ಲ.

Written by - Manjunath N | Last Updated : Oct 24, 2024, 03:11 PM IST
  • ನಾಗರಾಜ ಆಚಾರ್ ಅವರು ನಗರದ ಎ.ವಿ.ಕೆ. ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‍ನಲ್ಲಿ ಖಾತೆ ಹೊಂದಿದ್ದು.
  • ಇದೇ 2023 ರ ಸೆಪ್ಟೆಂಬರ್ 26 ರಂದು ಖಾತೆಯ ಯು.ಪಿ.ಐ. ಮೂಲಕ ರೂ. 99,000 ಮೊತ್ತ ವರ್ಗಾವಣೆಯಾಗಿರುತ್ತದೆ
ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರ.ರೂಗೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ title=

ದಾವಣಗೆರೆ:  ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ ನೀಡಲಾಗಿದೆ.

ಇದನ್ನೂ ಓದಿ: ಚನ್ನಪಟ್ಟಣ ಅಭ್ಯರ್ಥಿ ಘೋಷಣೆ NDA ನಿರ್ಧಾರ : ನಿಖಿಲ್ ಕುಮಾರಸ್ವಾಮಿ

ದಾವಣಗೆರೆ ನಿವೃತ್ತ ಸರ್ಕಾರಿ ಅಭಿಯೋಜಕರಾದ ನಾಗರಾಜ ಆಚಾರ್ ಅವರು ನಗರದ ಎ.ವಿ.ಕೆ. ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‍ನಲ್ಲಿ ಖಾತೆ ಹೊಂದಿದ್ದು. 2023 ರ ಸೆಪ್ಟೆಂಬರ್ 28 ರಂದು ಖಾತೆಯ ವಿವರವನ್ನು ಪರಿಶೀಲಿಸಿದಾಗ ಇದೇ 2023 ರ ಸೆಪ್ಟೆಂಬರ್ 26 ರಂದು ಖಾತೆಯ ಯು.ಪಿ.ಐ. ಮೂಲಕ ರೂ. 99,000 ಮೊತ್ತ ವರ್ಗಾವಣೆಯಾಗಿರುತ್ತದೆ.ಖಾತೆಯಿಂದ ಹಣವನ್ನು ವರ್ಗಾಹಿಸಲು ತಾವು ಯಾವುದೇ ತೆರನಾದ ಪ್ರಕ್ರಿಯೆಗಳನ್ನು ಪಾಲಿಸದೇ ಅವರ ಗಮನಕ್ಕೆ ಬಾರದಂತೆ ವರ್ಗಾವಣೆಗೊಂಡಿದ್ದರ ಮೊತ್ತದ ಬಗ್ಗೆ ಬ್ಯಾಂಕಿಂಗ್ ಓಂಬಡ್ಸ್‍ಮನ್‍ಗೆ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಪರಿಹಾರ, ನ್ಯಾಯ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ

ಈ ಬಗ್ಗೆ ಹಣ ಕಳೆದುಕೊಂಡ ನಾಗರಾಜ ಆಚಾರ್ ಅವರು ದಾವಣಗೆರೆ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದು, ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಅವರ ಖಾತೆಯಿಂದ ವರ್ಗಾಹಿಸಲ್ಪಟ್ಟ ರೂ. 99,000 ಗಳನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಸಂಪೂರ್ಣ ಹಣವನ್ನು ಹಿಂತಿರುಗಿಸುವಂತೆ ಮತ್ತು ದೂರುದಾರರಿಗೆ ಉಂಟಾದ ಮಾನಸಿಕ ಪರಿಹಾರ ಮೊತ್ತವಾಗಿ 10,000 ರೂ. ಹಾಗೂ 5000 ರೂ. ದೂರು ದಾಖಲಿಸಲು ಆಗಿರುವ ವೆಚ್ಚ ಕೊಡಬೇಕು ಎಂದು ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಗಿ, ಸದಸ್ಯರಾದ ತ್ಯಾಗರಾಜನ್ ಆದೇಶಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News