ನವದೆಹಲಿ: ಕರೋನಾವೈರಸ್ (Coronavirus) ವಿರುದ್ಧದ ಹೋರಾಟದಲ್ಲಿ ದೇಶದ ಹಲವು ಚಲನಚಿತ್ರ ತಾರೆಯರು ದೇಣಿಗೆ ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ಅಂತರಾಷ್ಟ್ರೀಯ ತಾರೆ ಪ್ರಿಯಾಂಕಾ ಚೋಪ್ರಾ ಸಹ ಪಿಎಂ ಕೇರ್ ಫಂಡ್ಗೆ ದೇಣಿಗೆ ನೀಡಿದ್ದಾರೆ. ಪಿಎಂ ಕೇರ್ಸ್ ಫಂಡ್ಗೆ ದೇಣಿಗೆ ನೀಡಿದ ನಂತರ ಪ್ರಿಯಾಂಕಾ ಚೋಪ್ರಾ (Priyanka Chopra) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವಿಟರ್ನಲ್ಲಿ ಸಂವಾದ ನಡೆಸಿದ್ದಾರೆ.
ವಾಸ್ತವವಾಗಿ ಪ್ರಿಯಾಂಕಾ ಚೋಪ್ರಾ ಪಿಎಂ ಕೇರ್ಸ್ ಫಂಡ್ಗೆ ದೇಣಿಗೆ ನೀಡಿದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ, 'ಅದು ವ್ಯಕ್ತಿಗಳು ಅಥವಾ ಸಂಸ್ಥೆಗಳು, ಪರಿಶ್ರಮಿ ವೃತ್ತಿಪರರು ಅಥವಾ ಪ್ರಖ್ಯಾತ ವ್ಯಕ್ತಿಗಳೇ ಆಗಿರಲಿ, ಭಾರತದ ಆರೋಗ್ಯಕರ ಭವಿಷ್ಯಕ್ಕಾಗಿ ಎಲ್ಲರೂ ಒಗ್ಗೂಡುತ್ತಿದ್ದಾರೆ. PM-CARES ಗೆ ಕೊಡುಗೆ ನೀಡಿದ್ದಕ್ಕಾಗಿ' ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
Thank you shri @narendramodi. We are strongest together. Thank you to everyone who also contributed and helped impact this important cause. https://t.co/uUxfSkreiD
— PRIYANKA (@priyankachopra) April 5, 2020
ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, @narendramodi ನಾವು ಒಗ್ಗಟ್ಟಿನಿಂದ ಇರುವುದರಿಂದ ಪ್ರಬಲರಾಗಿದ್ದೇವೆ. ಈ ಸಂದರ್ಭದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದಿದ್ದಾರೆ.
ಗಮನಾರ್ಹವಾಗಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಭಾಗಿಯಾಗಿದ್ದು, ಬಾಲಿವುಡ್ ತಾರೆಯರಾದ ಪ್ರಿಯಾಂಕಾ ಚೋಪ್ರಾ, ಅಕ್ಷಯ್ ಕುಮಾರ್, ವರುಣ್ ಧವನ್, ಅನುಷ್ಕಾ ಶರ್ಮಾ, ಸಲ್ಮಾನ್ ಖಾನ್ ಸೇರಿದಂತೆ ಹಲವರು ಪಿಎಂ ಕೇರ್ಸ್ ಫಂಡ್ಗೆ ದೇಣಿಗೆ ನೀಡಿದ್ದಾರೆ.