ದೀಪಾವಳಿ ಹಬ್ಬಕ್ಕೆ ಸಿಎಂ ಕಠಿಣ ರೂಲ್ಸ್ ...! ಇಷ್ಟೇ ಗಂಟೆ.. ಇಂತಹ ಪಟಾಕಿ ಹಚ್ಚಲು ಮಾತ್ರ ಅವಕಾಶ

CM Siddaramaiah on Diwali: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್​ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.  

Written by - Bhavishya Shetty | Last Updated : Oct 26, 2024, 09:43 PM IST
    • ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು
    • ಈ ಸಂದರ್ಭದಲ್ಲಿ, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು
    • ದೀಪಾವಳಿ ಹಬ್ಬಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ದೀಪಾವಳಿ ಹಬ್ಬಕ್ಕೆ ಸಿಎಂ ಕಠಿಣ ರೂಲ್ಸ್ ...! ಇಷ್ಟೇ ಗಂಟೆ.. ಇಂತಹ  ಪಟಾಕಿ ಹಚ್ಚಲು ಮಾತ್ರ ಅವಕಾಶ title=
File Photo

CM Siddaramaiah Statement on Deepavali: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಪಟಾಕಿ‌ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್​ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.

ಇದನ್ನೂ ಓದಿ: ಕೀವೀಸ್‌ ವಿರುದ್ಧ ಸೋಲುಂಡ ಬಳಿಕ ಪಬ್ಲಿಕ್‌ನಲ್ಲೇ ಅಸಮಾಧಾನ ಹೊರಹಾಕಿದ ಕ್ಯಾಪ್ಟನ್ ರೋಹಿತ್‌ ಶರ್ಮಾ

ಈ ಸಂದರ್ಭದಲ್ಲಿ, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಆ ನಂತರ ಮಾತನಾಡಿದ ಅವರು, "ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪಟಾಕಿ‌ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಅಧಿಕಾರಿಗಳು ಪಟಾಕಿ ದಾಸ್ತಾನುಗಳ ಪರಿಶೀಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ‌ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು" ಎಂದು ಕಠಿಣ ಸೂಚನೆ ನೀಡಿದ್ದಾರೆ.

ಕಳೆದ ವರ್ಷ ಹಾವೇರಿಯ ಆಲದಟ್ಟಿ ಮತ್ತು ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿದ ಬಳಿಕ ಕರ್ನಾಟಕ ಸರ್ಕಾರ ಪಟಾಕಿ ಮಾರಾಟ ಮತ್ತು ಸಿಡಿಸುವ ವಿಚಾರದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿತ್ತು. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್​ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್​​ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ತೀರ್ಪಿನಂತೆ ಈ ನಿಯಮ ರಾಜ್ಯದಲ್ಲೂ ಅನ್ವಯವಾಗುತ್ತದೆ. ಇನ್ನು ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ರಾತ್ರಿ 8 ರಿಂದ 10ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.

ಇದನ್ನೂ ಓದಿ: ನ್ಯೂಜಿಲೆಂಡ್‌ ವಿರುದ್ಧ ಸೋಲುಂಡ ಭಾರತ WTC ಪಾಯಿಂಟ್ ಟೇಬಲ್‌ನಲ್ಲಿ ಈಗ ಎಷ್ಟನೇ ಸ್ಥಾನದಲ್ಲಿದೆ?

ಹಸಿರು ಪಟಾಕಿ ಅಂದ್ರೆ ಏನು?

ಹಸಿರು ಪಟಾಕಿಗಳನ್ನು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ ಅಭಿವೃದ್ದಿಪಡಿಸಿದೆ. ಈ ಪಟಾಕಿಯಲ್ಲಿ ಲೀಥಿಯಂ, ಅರ್ಸೆನಿಕ್, ಬೇರಿಯಂ ಹಾಗೂ ಸತು ಸೇರಿದಂತೆ ಹಲವು ರೀತಿಯ ಅಪಾಯಕಾರಿ ರಾಸಾಯನಿಕಗಳು ಇರುವುದಿಲ್ಲ. ಇವು ಸಾಮಾನ್ಯ ಪಟಾಕಿಗಿಂತ ಶೇ30ರಷ್ಟು ಕಡಿಮೆ ವಾಯು ಮಾಲಿನ್ಯ ಮಾಡುತ್ತವೆ. ಅಷ್ಟೇ ಅಲ್ಲದೆ ಹೆಚ್ಚು ಶಬ್ಧ ಮಾಡುವುದಿಲ್ಲ. ಹೊಗೆಯ ಬದಲು ನೀರಿನ ಆವಿ ಬಿಡುಗಡೆ ಮಾಡುತ್ತೆ. ಇದನ್ನು ಬಳಕೆ ಮಾಡುವುದರಿಂದ ಶಬ್ಧ ಮಾಲಿನ್ಯ ಹಾಗೂ ವಾಯು ಮಾಲಿನ್ಯ ಎರಡೂ ಕಡಿಮೆ ಆಗುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News