ನವದೆಹಲಿ: ಮಾರಕ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ ಒಟ್ಟು 21 ದಿನಗಳ ಕಾಲ ದೇಶವನ್ನು ಲಾಕ್ಡೌನ್ ಮಾಡಲಾಗಿತ್ತು. ಆದರೆ ಲಾಕ್ಡೌನ್ ನಡುವೆಯೂ ಕೊರೊನಾವೈರಸ್ (Coronavirus) ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ. ಬದಲಿಗೆ ದಿನದಿಂದ ದಿನಕ್ಕೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಆದುದರಿಂದ ಲಾಕ್ಡೌನ್ (Lockdown) ಅನ್ನು ಮುಂದುವರೆಸಬೇಕೋ ಅಥವಾ ತೆರವುಗೊಳಿಸಬೇಕೋ ಎಂದು ನಿರ್ಧರಿಸಲು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಮಾಲೋಚನೆ ನಡೆಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ ವಿಸ್ತರಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ತೀರ್ಮಾನದ ಬಳಿಕ ಇವತ್ತು ಅಥವಾ ನಾಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
Covid-19 ಸಂತ್ರಸ್ತರಿಗೆ ನೆರವಿನ ಹಸ್ತ, 'ಎನ್ಸಿಸಿ ಯೋಗದಾನ'ಕ್ಕೆ ಚಾಲನೆ
ಮುಖ್ಯಮಂತ್ರಿಗಳ ಸಭೆಗೆ ಎರಡು ದಿನ ಬಾಕಿ ಇರುವಂತೆಯೇ ಒರಿಸ್ಸಾ ಸರ್ಕಾರ ಲಾಕ್ಡೌನ್ ಅನ್ನು ಏಪ್ರಿಲ್ 30ರವರೆಗೆ ವಿಸ್ತರಣೆ ಮಾಡಿತ್ತು. ಆ ಮೂಲಕ ಲಾಕ್ಡೌನ್ ಮುಂದುವರೆಸಿದ ಮೊದಲ ರಾಜ್ಯವಾಗಿತ್ತು. ನಿನ್ನೆ ಪಂಜಾಬ್ ಕೂಡ ಏಪ್ರಿಲ್ 30ರವರೆಗೆ ವಿಸ್ತರಣೆ ಮಾಡಿದೆ. ತೆಲಂಗಾಣದ ಕೆ.ಚಂದ್ರಶೇಖರ್ ರಾವ್, ಛತ್ತೀಸ್ಘಡ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಮತ್ತಿತರರು ಕೂಡ ಲಾಕ್ಡೌನ್ ಮುಂದುವರೆಸುವಂತೆ ಬಲವಾಗಿ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆಸುವ ಸಾಧ್ಯತೆಯೇ ಹೆಚ್ಚಾಗಿದೆ.
ಎಪ್ರಿಲ್ 15ರಿಂದ ರೈಲು ಸಂಚಾರದ ಬಗ್ಗೆ ಭಾರತೀಯ ರೈಲ್ವೆಯ ಮಹತ್ವದ ಹೇಳಿಕೆ
ದೇಶದ ಆರ್ಥಿಕತೆಗೆ ಪೆಟ್ಟು ಬೀಳಲಿದೆ ಎಂದು ಆರ್ಥಿಕ ತಜ್ಞರು ಸಲಹೆ ನೀಡಿದ್ದಾರೆ. ಲಾಕ್ಡೌನ್ನಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಭಾರೀ ನಷ್ಟ ಉಂಟಾಗಿದೆ. ಆದರೆ ಜನರ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಒಂದು ವೇಳೆ ಲಾಕ್ಡೌನ್ ಮುಂದುವರೆಸಿದರೂ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಕೆಲವು ವಲಯಗಳನ್ನು ನಿರ್ಬಂಧಮುಕ್ತಗೊಳಿಸಬೇಕು. ಅಗತ್ಯ ವಸ್ತುಗಳ ಸರಬರಾಜು ಹೊರತುಪಡಿಸಿ, ಉಳಿದ ಎಲ್ಲ ಅಂತರರಾಜ್ಯ ಸಂಪರ್ಕ ಸೇವೆ ನಿರ್ಬಂಧ ಮುಂದುವರೆಸಬೇಕು ಎಂಬ ಸಲಹೆಗಳು ಕೇಳಿಬರುತ್ತಿವೆ. ಎಲ್ಲವನ್ನೂ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.
COVID-19: 13 ಲಕ್ಷ ಉದ್ಯೋಗಿಗಳನ್ನು ರಕ್ಷಿಸಲು ಪ್ರೋಟೋಕಾಲ್ ಸಿದ್ಧಪಡಿಸಿದ ಭಾರತೀಯ ರೈಲ್ವೆ
ಇತ್ತೀಚೆಗೆ ನಡೆದ ಸಂಸತ್ತಿನ ಸಭಾನಾಯಕರ ಸಭೆಯಲ್ಲೂ ದೇಶಾದ್ಯಂತ ಜಾರಿಗೊಳಿಸಲಾರುವ ಲಾಕ್ಡೌನ್ಅನ್ನು ಒಂದೇ ಬಾರಿಗೆ ತೆಗೆದುಹಾಕುವುದು ಸೂಕ್ತವಲ್ಲ ಹಂತಹಂತವಾಗಿ ನಿರ್ಬಂಧ ಸಡಿಲಿಸುವಂತೆ ವಿರೋಧ ಪಕ್ಷಗಳ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.