Car Accident: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೊಂಡಕ್ಕೆ ಉರುಳಿದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಬಲರಾಮ್ಪುರದಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಲಾರಿಮಾದಿಂದ ಸೂರಜ್‌ಪುರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿಯೂ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಸಂಡೂರಿಗೆ BJP ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ
बलरामपुर
बीती रात बड़ा सड़क हादसा
हाई स्पीड स्कॉर्पियो सड़क किनारे खदान में गिरी
8 लोगों की मौत, मृतकों में 1 महिला 1 बच्ची भी शामिल।
राजपुर-कुसमी रोड में बूढ़ा बगीचा के पास की घटना
स्कॉर्पियो में सवार सभी लोग सूरजपुर हा रहे थे #Balrampur #Accident #Chhattisgarh pic.twitter.com/HQlACaedE6
— Anshuman Sharma (@anshuman_sunona) November 3, 2024
ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಉರುಳಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ನಸುಕಿನ ಜಾವ ಚಾಲಕ ನಿದ್ರೆ ಮಂಪರಿನಲ್ಲಿದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ ಅಂತಾ ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ₹2,100; ವರ್ಷಕ್ಕೆ 2 ಉಚಿತ LPG ಸಿಲಿಂಡರ್..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ