India Test Captain: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಳಪೆ ಸೋಲಿನ ನಂತರ ಟೀಂ ಇಂಡಿಯಾ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿದೆ. ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಲವು ಆಟಗಾರರ ಮೇಲೆ ನಿರಂತರವಾಗಿ ಪ್ರಶ್ನೆಗಳು ಏಳುತ್ತಿವೆ. ರೋಹಿತ್ ಆದಷ್ಟು ಬೇಗ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗಬೇಕು ಎಂದು ಕೂಡ ಹೇಳಲಾಗುತ್ತಿದೆ.
ಇನ್ನೊಂದೆಡೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಅವರ ವೃತ್ತಿಜೀವನದ ಕೊನೆಯ ಟೆಸ್ಟ್ ಸರಣಿ ಎಂದೇ ಹೇಳಲಾಗುತ್ತಿದೆ. ಇದಾದ ನಂತರ ಟೀಂ ಇಂಡಿಯಾ ಟೆಸ್ಟ್ನಲ್ಲಿ ಹೊಸ ನಾಯಕನನ್ನು ಪಡೆಯಲಿದೆಯಂತೆ.
ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಮೊದಲು ನಟಿಸಿದ್ದು ತೆಲುಗಿನಲ್ಲಿ ಅಲ್ಲ... ಕನ್ನಡದ ಈ ಪ್ರಖ್ಯಾತ ಧಾರಾವಾಹಿಯಲ್ಲಿ!
ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಆಯ್ಕೆಯಾಗಿರುವ ತಂಡದಲ್ಲಿ ರೋಹಿತ್ ಶರ್ಮಾ ನಾಯಕ ಮತ್ತು ಜಸ್ಪ್ರೀತ್ ಬುಮ್ರಾ ಉಪನಾಯಕರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ನಾಯಕತ್ವ ತೊರೆದರೆ ಸಹಜವಾಗಿಯೇ ಬುಮ್ರಾ ನಾಯಕತ್ವಕ್ಕೆ ಸ್ಪರ್ಧಿಯಾಗಲಿದ್ದಾರೆ. ಈ ಮಧ್ಯೆ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹಿಟ್ಮ್ಯಾನ್ ನಂತರ, ಭಾರತೀಯ ಟೆಸ್ಟ್ ತಂಡದ ನಾಯಕತ್ವವನ್ನು ರಿಷಬ್ ಪಂತ್ಗೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
37ರ ಹರೆಯದ ರೋಹಿತ್ ಶರ್ಮಾ ತಮ್ಮ ವೃತ್ತಿ ಜೀವನದ ಅಂತಿಮ ಹಂತದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಭಾರತವು 0-3 ಅಂತರದ ಸೋಲಿನ ನಂತರ, ರೋಹಿತ್ ಅವರ ನಾಯಕತ್ವ ಮತ್ತು ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ. ಇದರ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ್ದ ಸಂದರ್ಭದಲ್ಲೂ ನಿರಾಸಾದಾಯಕ ಪ್ರತಿಕ್ರಿಯೆಯನ್ನು ರೋಹಿತ್ ನೀಡಿದ್ದರು.
ಮೊಹಮ್ಮದ್ ಕೈಫ್ ಹೇಳಿದ್ದೇನು?
ಕೈಫ್ ತಮ್ಮ ಇನ್ಸ್ಟಾಗ್ರಾಂ ಲೈವ್ನಲ್ಲಿ, "ಪ್ರಸ್ತುತ ತಂಡದಲ್ಲಿ, ರಿಷಬ್ ಪಂತ್ ಮಾತ್ರ ಟೆಸ್ಟ್ ನಾಯಕನಾಗಲು ಸ್ಪರ್ಧಿಯಾಗಿದ್ದಾರೆ. ಅವರು ಆ ಸ್ಥಾನಕ್ಕೆ ಅರ್ಹರು, ಅವರು ಆಡಿದಾಗಲೆಲ್ಲಾ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಅವರು ಎಲ್ಲಾ ಪರಿಸ್ಥಿತಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ" ಎಂದು ಹೇಳಿದ್ದಾರೆ.
"ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ರಿಷಬ್ ಪಂತ್ ಅರ್ಧಶತಕಗಳನ್ನು ಗಳಿಸಿದ್ದರು. ಇತರ ಭಾರತೀಯ ಬ್ಯಾಟ್ಸ್ಮನ್ಗಳು ಸ್ಪಿನ್ ಸ್ನೇಹಿ ಪಿಚ್ನಲ್ಲಿ ಹೆಣಗಾಡುತ್ತಿರುವಾಗ, ಪಂತ್ ಭಾರತದ ಭರವಸೆಯನ್ನು ಜೀವಂತವಾಗಿರಿಸಿದ್ದರು. ಪಂತ್ ಲೆಜೆಂಡ್ ಆಗಿ ನಿವೃತ್ತಿ ಹೊಂದಲಿದ್ದಾರೆ" ಎಂದು ಕೈಫ್ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ