Darshan health updates : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಅವರ ವಕೀಲರು ಬುಧವಾರ ಕರ್ನಾಟಕ ಹೈಕೋರ್ಟ್ಗೆ ಸಲ್ಲಿಸಿದ್ದಾರೆ.
ದರ್ಶನ್ಗೆ ಇತ್ತೀಚೆಗಷ್ಟೇ ಆರು ವಾರಗಳ ವೈದ್ಯಕೀಯ ಜಾಮೀನು ನೀಡಿದ್ದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠವು.. ಯಾವಾಗ ಶಸ್ತ್ರಚಿಕಿತ್ಸೆ, ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ, ತದನಂತರ ಚಿಕಿತ್ಸೆ ಏನಾದರೂ ಇರಲಿದೆಯೇ..? ಎಂಬ ವಿವರಗಳನ್ನು ಜೈಲಿನಿಂದ ಬಿಡುಗಡೆಯಾದ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು.. ಎಂಬ ಷರತ್ತು ವಿಧಿಸಿತ್ತು.
ಇದನ್ನೂ ಓದಿ:ಅಶ್ಲೀಲ ಖಾಸಗಿ ವಿಡಿಯೋ ವೈರಲ್ ಬೆನ್ನಲ್ಲೆ ʼಕಿರಾತಕʼ ನಟಿಯ ಹೊಸ ಅವತಾರ..! ನೋಡಿದವರೆಲ್ಲ ಶಾಕ್...
ಈ ಆದೇಶದ ಅಡಿಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ದರ್ಶನ್, ಸದ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ವರದಿಯ ಮುಖ್ಯಾಂಶಗಳ ಬಗ್ಗೆ ವಿವರಿಸಿರುವ ಮೂಲಗಳು, ‘ದರ್ಶನ್ ಆಪರೇಷನ್ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಸದ್ಯ ಅವರಿಗೆ ಫಿಸಿಯೋಥೆರಪಿ ನೀಡಲಾಗುತ್ತಿದೆ. ಆದರೆ, ಫಿಸಿಯೋಥೆರಪಿಯೇ ಅಂತಿಮ ಅಲ್ಲ ಎನಿಸುತ್ತಿದೆ. ಆದಾಗ್ಯೂ, ಸದ್ಯದ ನೋವಿನಿಂದ ಅವರು ಚೇತರಿಕೆ ಕಾಣದೇ ಇದ್ದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಯಲ್ಲಿ ವಿವರಿಸಲಾಗಿದೆʼ ಎಂದು ಹೇಳಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ