ಪೋಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಬೆಂಗಳೂರಿನಲ್ಲೀಗ ಪೊಲೀಸರಿಗೆ ರಕ್ಷಣೆ ಇಲ್ಲ.

Last Updated : Jan 17, 2018, 11:34 AM IST
ಪೋಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು title=

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲೀಗ ಪೊಲೀಸರಿಗೆ ರಕ್ಷಣೆ ಇಲ್ಲವೇ ಎಂಬ ಅನುಮಾನ ಮೂಡುತ್ತಿದೆ. ಹೌದು ಅಂತಹ ಒಂದು ಘಟನೆ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗಾಂಜಾ ಸೇವಿಸಿ ಕೀಟಲೆ ಮಾಡುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹೊಯ್ಸಳ ಪೇದೆ ರಾಜೇಂದ್ರ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. 

ಜೆ.ಜೆ. ನಗರದ  ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪಾದರಾಯನಪುರದ 11ನೇ ಕ್ರಾಸ್ ನಲ್ಲಿ ಗಾಂಜಾ ಸೇವಿಸಿ ಕೀಟಲೆ ಮಾಡುತ್ತಿದ್ದ ಅಸಾಮಿಗಳ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಹೊಯ್ಸಳ ಪೇದೆ ರಾಜೇಂದ್ರ ಎಂಬುವರ ಮೇಲೆ ದುಷ್ಕರ್ಮಿಗಳು ಮಚ್ಚು, ಲಾಂಗ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ರಾಜೇಂದ್ರ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗಾಂಜಾ ಮತ್ತಲ್ಲಿ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Trending News