ಮಡಿಕೇರಿ: ಪ್ರಸಕ್ತ (2024-25) ಸಾಲಿನ ಕೇಂದ್ರ ಬಜೆಟ್ನಲ್ಲಿ ಘೋಷಿಸಿದಂತೆ ಪ್ರಧಾನಮಂತ್ರಿ ಇಂಟರ್ಶಿಪ್ ಯೋಜನೆಯಡಿ ದೇಶದ ಯುವ ಜನತೆಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಅವಕಾಶಗಳನ್ನು ಒದಗಿಸಲು ಪ್ರಾರಂಭಿಸಲಾಗಿದೆ.
ಈ ಯೋಜನೆಯಡಿ ದೇಶದ 500 ಪ್ರತಿಷ್ಠಿತ ಕಂಪೆನಿಗಳಲ್ಲಿ 21 ರಿಂದ 24 ವಯಸ್ಸಿನ ಯುವಜನತೆಗೆ 12 ತಿಂಗಳ ಅವಧಿಯವರೆಗೆ ಇಂಟರ್ಶಿಪ್ ಯೋಜನೆಗೆ ಅವಕಾಶ ಕಲ್ಪಿಸಲಾಗುತ್ತದೆ ಹಾಗೂ ಪ್ರಧಾನಮಂತ್ರಿ ಇಂಟರ್ಶಿಪ್ ಯೋಜನೆಯು ವೃತ್ತಿ ಜೀವನವನ್ನು ಪ್ರಾರಂಭಿಸಲು ಪರಿಪೂರ್ಣ ಅವಕಾಶ ಒದಗಿಸುತ್ತದೆ.
ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಂದು ಶಾಕ್..! ಸದ್ಯದಲ್ಲೇ ಏರಿಕೆ ಆಗಲಿದೆ ಬಸ್ ಟಿಕೆಟ್ ದರ
ಹೈಸ್ಕೂಲ್ ಅಥವಾ ಹೈಯರ್ ಸೆಕಂಡರಿ, ಐಟಿಐ, ಡಿಪ್ಲೋಮಾ, ಪದವಿ(ಬಿ.ಎ, ಬಿ.ಕಾಂ, ಬಿ.ಸಿ.ಎ, ಬಿ.ಬಿ.ಎ, ಬಿ.ಫಾರ್ಮ ಇತ್ಯಾದಿ) ಶಿಕ್ಷಣ ಪೂರ್ಣಗೊಳಿಸಿರುವ ಭಾರತೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತಿಯಿರುವ ಅಭ್ಯರ್ಥಿಗಳು ನ.15 ರ ಅವಧಿಯೊಳಗಾಗಿ ಅಧಿಕೃತ ವೆಬ್ಸೈಟ್ https://pminternship.mca.gov.in/login/ ಮೂಲಕ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ