ಸಂಜು ಸ್ಯಾಮ್ಸನ್‌ ಅಬ್ಬರಕ್ಕೆ ಸಾರ್ವಕಾಲಿಕ ದಾಖಲೆಗಳು ಉಡೀಸ್‌!! ಶತಕ ಭಾರಿಸಿ ಟೀಂ ಇಂಡಿಯಾದ ಸ್ಟಾರ್‌ ಆದ ಆಟಗಾರ

sanju samson: ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಇತಿಹಾಸ ಸೃಷ್ಟಿಸಿದ್ದಾರೆ. 
 

1 /12

sanju samson: ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಇತಿಹಾಸ ಸೃಷ್ಟಿಸಿದ್ದಾರೆ.   

2 /12

ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮೂರು ಶತಕಗಳನ್ನು ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ವಿಕೆಟ್‌ ಕೀಪರ್‌ ಎನಿಸಿಕೊಂಡಿದ್ದಾರೆ.   

3 /12

ನಾಲ್ಕು ಟಿ20ಐ ಸರಣಿಯ ಭಾಗವಾಗಿ ಶುಕ್ರವಾರ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಸಂಜು ಸ್ಯಾಮ್ಸನ್ ಈ ಸಾಧನೆ ಮಾಡಿದ್ದಾರೆ.   

4 /12

ಕಳೆದ ತಿಂಗಳು ಹೈದರಾಬಾದ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಟಿ20ಐನಲ್ಲಿ ಮೊದಲ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಮತ್ತೊಂದು ಶತಕ ಬಾರಿಸಿದರು ಮತ್ತು ಸತತ ಎರಡು ಶತಕಗಳನ್ನು ಗಳಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡರು.   

5 /12

ಇನ್ನೂ ಶುಕ್ರವಾರ ನಡೆದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ವಿಕೆಟ್ ಕೀಪರ್ ಎಂಬ ಸಾರ್ವಕಾಲಿಕ ದಾಖಲೆಯನ್ನು ಬರೆದಿದ್ದಾರೆ.   

6 /12

ಈ ಕ್ರಮದಲ್ಲಿ ಸಂಜು ಸ್ಯಾಮ್ಸನ್ ಇಂಗ್ಲೆಂಡ್ ವಿಕೆಟ್ ಕೀಪರ್ ಫಿಲ್ ಸಾಲ್ಟ್ ಅವರನ್ನು ಹಿಂದಿಕ್ಕಿದ್ದಾರೆ. ಫಿಲ್ ಸಾಲ್ಟ್ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ಶತಕ ಗಳಿಸಿದ್ದಾರೆ.   

7 /12

ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ಶತಕ ಗಳಿಸಿದ ಏಕೈಕ ವಿಕೆಟ್ ಕೀಪರ್ ಸಂಜು ಮತ್ತು ಸಾಲ್ಟ್.  

8 /12

ಸಂಜು ಸ್ಯಾಮ್ಸನ್ T20I ಗಳಲ್ಲಿ ಭಾರತದ ಪರ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಮೂರನೇ ಬ್ಯಾಟ್ಸ್‌ಮನ್ ಆಗಿದ್ದಾರೆ.   

9 /12

ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್‌ಗಿಂತ ಮುಂದಿದ್ದಾರೆ.   

10 /12

ಸಂಜು ಸ್ಯಾಮ್ಸನ್ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಮೂರು T20 ಶತಕಗಳನ್ನು ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ.  

11 /12

ಇದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ಅವರ ನಾಲ್ಕನೇ 50 ಪ್ಲಸ್ ಸ್ಕೋರ್ ಆಗಿದೆ.   

12 /12

ಸಂಜು ಅವರು T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ 50 ಪ್ಲಸ್ ಸ್ಕೋರ್ ಗಳಿಸಿದ ಮೊದಲ ಭಾರತೀಯ ವಿಕೆಟ್ ಕೀಪರ್ ಎಂಬ ಇತಿಹಾಸವನ್ನು ನಿರ್ಮಿಸಿದರು.