India vs south africa: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ವಿಧ್ವಂಸಕ ಶತಕಗಳನ್ನು ಬಾರಿಸಿ ದಕ್ಷಿಣ ಆಫ್ರಿಕಾವನ್ನು 135 ರನ್ಗಳ ಬೃಹತ್ ಅಂತರದಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ನಾಲ್ಕು ಟಿ20 ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 283 ರನ್ ಗಳಿಸಿತು. ಸಂಜು ಸ್ಯಾಮ್ಸನ್ (56 ಎಸೆತಗಳಲ್ಲಿ 6 ಬೌಂಡರಿ, 9 ಸಿಕ್ಸರ್ ಸಹಿತ 109), ತಿಲಕ್ ವರ್ಮಾ (47 ಎಸೆತಗಳಲ್ಲಿ 9 ಬೌಂಡರಿ, 10 ಸಿಕ್ಸರ್ ಸಹಿತ 120 ನಾಟೌಟ್) ಅಜೇಯ ಶತಕ ಸಿಡಿಸಿ ಮಿಂಚಿದರು. ಅಭಿಷೇಕ್ ಶರ್ಮಾ (18 ಎಸೆತಗಳಲ್ಲಿ 2 ಬೌಂಡರಿ, 36) 4 ಸಿಕ್ಸರ್ಗಳೊಂದಿಗೆ) ಆಕ್ರಮಣಕಾರಿ ಆಟವನ್ನಾಡಿದರು. ಕ್ಷಿಣ ಆಫ್ರಿಕಾ ಬೌಲರ್ಗಳ ಪೈಕಿ ಸಿಪಾಮ್ಲಾ (1/58) ಒಂದು ವಿಕೆಟ್ ಪಡೆದರು. ಸಫಾರಿ ಬೌಲರ್ಗಳು ಭಾರತದ ಬ್ಯಾಟ್ಸ್ಮನ್ಗಳಿಗೆ ಹೇರಳವಾಗಿ ರನ್ ನೀಡಿದರು.
283 ರನ್ಗಳ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ 18.2 ಓವರ್ಗಳಲ್ಲಿ ಕೇವಲ 148 ರನ್ ಕಲೆಹಾಕಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ಟ್ರಿಸ್ಟಾನ್ ಸ್ಟಬ್ಸ್ (29 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 43) ಮತ್ತು ಮಾರ್ಕೊ ಜಾನ್ಸೆನ್ (12 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ನೊಂದಿಗೆ ಔಟಾಗದೆ 29) ಗರಿಷ್ಠ ಸ್ಕೋರರ್ಗಳಾಗಿದ್ದರು. ಭಾರತದ ಬೌಲರ್ಗಳ ಪೈಕಿ ಅರ್ಷ್ದೀಪ್ ಸಿಂಗ್ ವರುಣ್ ಚಕ್ರವರ್ತಿ (2/42) ಮತ್ತು ಅಕ್ಷರ್ ಪಟೇಲ್ (2/6) ಎರಡು ವಿಕೆಟ್ ಪಡೆದರು. ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ ಮತ್ತು ರಮಣದೀಪ್ ಸಿಂಗ್ ವಿಕೆಟ್ ಪಡೆದರು.
ಈ ಮೂಲಕ ಭಾರತ ತಂಡ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡು ವಿಭಾಗಗಳಲ್ಲಿಯೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಆಖ್ರಮಣಕಾರಿ ಆಟವನ್ನಾಡಿದರು. ಈ ಮೂಲಕ ನ್ಯೂಜಿಲೆಂಡ್ ತಂಡದ ವಿರುದ್ಧ ಟೆಸ್ಟ್ ಸರನಿಯಲ್ಲಿ ತಮ್ಮ ಕಳಪೆ ಪ್ರದರ್ಶನದ ಮೂಲಕ ವೈಟ್ವಾಶ್ ಆಗಿದ್ದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆಲವು ಸಾಧಿಸಿದರು, ಅಷ್ಟೆ ಅಲ್ಲ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್ಗಳು ಹಲವಾರು ದಾಖಲೆಗಳನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.