ಉತ್ತರಪ್ರದೇಶದ ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ಎಸ್ಎನ್ಸಿಯುನಲ್ಲಿ ಶುಕ್ರವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಕ್ಕಳ ವಾರ್ಡ್ನ ಕಿಟಕಿ ಒಡೆದು ಮಕ್ಕಳ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಝಾನ್ಸಿ ಅಗ್ನಿ ದುರಂತದ ಬಗ್ಗೆ ಕ್ರಮ ಕೈಗೊಂಡಿದ್ದಾರೆ. 12 ಗಂಟೆಯೊಳಗೆ ಕಮಿಷನರ್ ಮತ್ತು ಡಿಐಜಿ ತನಿಖಾ ವರದಿ ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ನಡೆದಿದೆ. ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ನಲ್ಲಿ ಶುಕ್ರವಾರ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಲ್ಲಿ 11 ಶಿಶುಗಳು ಸಜೀವ ದಹನವಾಗಿವೆ. ಏಕಾಏಕಿ ಬೆಂಕಿ ವ್ಯಾಪಿಸಿದ ಪರಿಣಾಮ ಆಸ್ಪತ್ರೆಯ ರೋಗಿಗಳು ಹಾಗೂ ಸಿಬ್ಬಂದಿ ಗಾಬರಿಗೊಂಡರು. ಪ್ರಾಣ ಉಳಿಸಿಕೊಳ್ಳಲು ಅವರು ಓಡಿ ಬಂದಾಗ ಸಣ್ಣ ನೂಕುನುಗ್ಗಲು ಉಂಟಾಯಿತು. ಅಪಘಾತದ ಮಾಹಿತಿ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣ ರಕ್ಷಣಾ ಕ್ರಮ ಕೈಗೊಂಡರು. ವಾರ್ಡ್ ಬಾಗಿಲು ಮತ್ತು ಕಿಟಕಿಗಳನ್ನು ಒಡೆದು 37 ಮಕ್ಕಳನ್ನು ಹೊರ ತೆಗೆಯಲಾಗಿದೆ. ಘಟನೆಯ ವೇಳೆ ಆಸ್ಪತ್ರೆಯಲ್ಲಿ 47 ಮಕ್ಕಳಿದ್ದರು ಎಂದು ಹೇಳಲಾಗಿದೆ.
ಇದನ್ನೂ ಓದಿ: Viral Video: ಮೌನವಾಗಿ ಬಂದು ಶಿವಲಿಂಗವನ್ನು ತಬ್ಬಿಕೊಂಡ ಕೋತಿ.. ವಿಡಿಯೋ ಕಂಡು ಬೆರಗಾದ ನೆಟ್ಟಿಜನ್
ಪ್ರತ್ಯಕ್ಷದರ್ಶಿಗಳ ಪ್ರಕಾರ, ಶುಕ್ರವಾರ ರಾತ್ರಿ 10.30 ರ ಸುಮಾರಿಗೆ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಸಿಬ್ಬಂದಿಗೆ ಏನೂ ಅರ್ಥವಾಗಲಿಲ್ಲ. ಈ ನಡುವೆ ವಾರ್ಡಿನಲ್ಲಿ ಹೊಗೆ ಆವರಿಸಿದ್ದರಿಂದ ವೈದ್ಯಕೀಯ ಕಾಲೇಜಿನ ಅಗ್ನಿಶಾಮಕ ವ್ಯವಸ್ಥೆಗೆ ನೆರವು ನೀಡಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳದವರು ಬರುವಷ್ಟರಲ್ಲಿ ಹತ್ತು ಶಿಶುಗಳು ಸಜೀವ ದಹನವಾಗಿದ್ದವು. ಬಾಗಿಲು, ಕಿಟಕಿಗಳನ್ನು ಒಡೆದು 37 ಮಕ್ಕಳನ್ನು ಹೇಗೋ ಹೊರ ತೆಗೆಯಲಾಗಿದೆ. 16 ಮಕ್ಕಳ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂಲಗಳ ಪ್ರಕಾರ, ಬೆಂಕಿ ಮತ್ತು ಹೊಗೆಯನ್ನು ಉಸಿರಾಡುವುದರಿಂದ ಕೆಲವು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಘಟನೆಯ ನಂತರ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಇತರ ವೈದ್ಯರು ತಮ್ಮ ಫೋನ್ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ.
ಆಸ್ಪತ್ರೆಯ ವಾರ್ಡ್ನಲ್ಲಿ ಬೆಂಕಿ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯುತ್ ಓವರ್ಲೋಡ್ನಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಭಾವಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಡಿಎಂ ಮತ್ತು ಎಸ್ಪಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಿದರು. ವಾರ್ಡ್ನಲ್ಲಿ ಹೊಗೆ ಆವರಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಈ ಘಟನೆ ಬಗ್ಗೆ ಯುಸಿ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದಾರೆ. ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅಪಘಾತದಲ್ಲಿ ಮಕ್ಕಳ ಸಾವು ಅತ್ಯಂತ ದುಃಖಕರವಾಗಿದೆ. ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಇದನ್ನೂ ಓದಿ: ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿಯ ಮೇಲೆ ಅನುಮಾನ: ನನಗೆ ಡೈವೋರ್ಸ್ ಬೇಕೆಂದ ಗಂಡ..!!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.