IPL 2025: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಭಾಗವಹಿಸುವ ಆಟಗಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಈ ಸಂಬಂಧ ಬಿಸಿಸಿಐ ಕಾರ್ಯದರ್ಶಿ ಜೈಶಾ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೆಗಾ ಹರಾಜಿನಲ್ಲಿ ಭಾಗವಹಿಸಲು ಒಟ್ಟು 1574 ಮಂದಿ ನೋಂದಾಯಿಸಿಕೊಂಡಿದ್ದಾರೆ, ಈ ಪೈಕಿ ಬಿಸಿಸಿಐ 574 ಮಂದಿಯನ್ನು ಶಾರ್ಟ್‌ಲಿಸ್ಟ್ ಮಾಡಿದೆ.
ನವೆಂಬರ್ 24 ಮತ್ತು 25 ರಂದು (ಭಾನುವಾರ ಮತ್ತು ಸೋಮವಾರ) ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಮೆಗಾ ಹರಾಜು ನಡೆಯಲಿದೆ. 574 ಆಟಗಾರರು 10 ಫ್ರಾಂಚೈಸಿಗಳಲ್ಲಿ 204 ಸ್ಥಾನಗಳಿಗಾಗಿ ಪೈಪೋಟಿ ನಡೆಸಲಿದ್ದಾರೆ. ಇದರಲ್ಲಿ ಶಾರ್ಟ್‌ಲಿಸ್ಟ್ ಆಗಿರುವ ಆಟಗಾರರ ಪೈಕಿ 366 ಭಾರತೀಯ ಆಟಗಾರರಿದ್ದರೆ, 208 ವಿದೇಶಿ ಆಟಗಾರರು ಸ್ಥಾನ ಪಡೆದಿದ್ದಾರೆ.
ಭಾರತದಿಂದ 318 ಅನ್‌ಕ್ಯಾಪ್ಡ್ ಆಟಗಾರರು ಮತ್ತು 12 ಅನ್‌ಕ್ಯಾಪ್ಡ್ ವಿದೇಶಿ ಆಟಗಾರರಿದ್ದಾರೆ. 70 ಸಾಗರೋತ್ತರ ಸ್ಲಾಟ್‌ಗಳು ಲಭ್ಯವಿದೆ. ಎರಡು ದಿನಗಳ ಮೆಗಾ ಹರಾಜು ಮಧ್ಯಾಹ್ನ 1 ಗಂಟೆಯಿಂದ ಆರಂಭವಾಗಲಿದ್ದು, ಮೆಗಾ ಹರಾಜನ್ನು ಜಿಯೋ ಸಿನಿಮಾ ಹಾಗೂ ಸ್ಟಾರ್ ಸ್ಪೋರ್ಟ್ಸ್ ವಾಹಿನಿಗಳು ನೇರ ಪ್ರಸಾರ ಮಾಡಲಿದ್ದಾರೆ.
ಆದರೆ, ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಹಾಗೂ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಐಪಿಎಲ್ ಮೆಗಾ ಹರಾಜಿನಿಂದ ದೂರ ಉಳಿದಿದ್ದಾರೆ. ಈ ಇಬ್ಬರು ಸ್ಟಾರ್ ಆಟಗಾರರು ಐಪಿಎಲ್ 2025ರ ಮೆಗಾ ಹರಾಜಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿಲ್ಲ. ದೇಶಿ ಆಟಗಾರರ ವಿಚಾರದಲ್ಲಿ ಬಿಸಿಸಿಐ ತಂದಿರುವ ಕಟ್ಟುನಿಟ್ಟಿನ ನಿಯಮಗಳಿಂದ ಆರ್ಚರ್ ಮತ್ತು ಗ್ರೀನ್ ದೂರವಿದ್ದಾರಂತೆ. ಐಪಿಎಲ್ ಮೆಗಾ ಹರಾಜಿನಲ್ಲಿ ಹೆಸರು ನೋಂದಾಯಿಸಿಕೊಂಡು ಸರಿಯಾದ ಕಾರಣವಿಲ್ಲದೆ ಟೂರ್ನಿಯಿಂದ ಹಿಂದೆ ಸರಿದರೆ ಎರಡು ವರ್ಷಗಳ ಕಾಲ ಐಪಿಎಲ್ ಆಡದಂತೆ ನಿಷೇಧ ಹೇರುವ ಹೊಸ ನಿಯಮವನ್ನು ಬಿಸಿಸಿಐ ತಂದಿದೆ.
ಈ ಹಿಂದೆ ಕೆಲ ಆಟಗಾರರು ಹರಾಜಿನಲ್ಲಿ ನಿರೀಕ್ಷಿತ ಬೆಲೆ ಸಿಗದಿದ್ದರೆ ಟೂರ್ನಿಯಿಂದ ಹಿಂದೆ ಸರಿಯುತ್ತಿದ್ದರು. ಅಂಥವರಿಗಾಗಿ ಬಿಸಿಸಿಐ ಹೊಸ ನಿಯಮ ತಂದಿದೆ.
ಕಳೆದ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಡಿದ್ದ ಕ್ಯಾಮರೂನ್ ಗ್ರೀನ್ ಅಸಾಧಾರಣ ಪ್ರದರ್ಶನ ನೀಡಿದ್ದರು. ಅವರು 14 ಪಂದ್ಯಗಳಲ್ಲಿ 255 ರನ್‌ಗಳ ಜೊತೆಗೆ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಆರ್‌ಸಿಬಿಯ ಪ್ಲೇ-ಆಫ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಐಪಿಎಲ್ 2023 ರ ಮಿನಿ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಅವರನ್ನು ರೂ. 17.50 ಕೋಟಿ ಭಾರಿ ಬೆಲೆಗೆ ಖರೀದಿಸಲಾಗಿದೆ. ಆ ತಂಡದ ಪರ 16 ಪಂದ್ಯಗಳಲ್ಲಿ 452 ರನ್ ಜೊತೆಗೆ 6 ವಿಕೆಟ್ ಪಡೆದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.