ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ ಖರೀದಿಸಲು: ಸಿಎಂ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಖರೀದಿಸಲು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ.

Written by - Prashobh Devanahalli | Last Updated : Nov 17, 2024, 11:40 AM IST
  • ಕಾಂಗ್ರೆಸ್ ಒಬ್ಬ ಶಾಸಕರಾದರೂ ಹೇಳಿದ್ದಾರೆಯೇ?
  • ಹುಚ್ಚು ಹುಚ್ಚು ಆರೋಪಗಳನ್ನೆಲ್ಲ ಮಾಡಬೇಡಿ
  • ಸಿಎಂ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು
ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ ಖರೀದಿಸಲು: ಸಿಎಂ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು title=

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಖರೀದಿಸಲು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸಿಎಂ ತಮ್ಮ ಮತ್ತು ಸರ್ಕಾರದ ಮೇಲಿರುವ ಆರೋಪಗಳ ವಿಷಯಾಂತರಕ್ಕೆ ಹೀಗೆಲ್ಲ ಹೇಳುತ್ತಿದ್ದಾರೆ ಅಷ್ಟೇ ಎಂದು ಪ್ರತಿಕ್ರಿಯಿಸಿದರು.

ಶಾಸಕರ ಸಾರ್ವಜನಿಕ ಬದುಕನ್ನು ಹೀಗೆ ಕಲುಷಿತಗೊಳಿಸೋ ಕೆಲಸವನ್ನು ಮುಖ್ಯಮಂತ್ರಿ ಆದವರು ಮಾಡಬಾರದು ಸಿಎಂಗೆ ಕಿವಿಮಾತು ಸಹ ಹೇಳಿದರು. ಕಾಂಗ್ರೆಸ್ಸಿಗರು ಹೀಗೆ ಹುಚ್ಚು ಹುಚ್ಚು ರೀತಿ ಮಾತನಾಡುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದು ಸಚಿವ ಜೋಶಿ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಜೆಪಿಗೆ ಗ್ಯಾರಂಟಿ ಯೋಜನೆಗಳ ಮಹತ್ವ ಗೊತ್ತಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ನ ಒಬ್ಬ ಶಾಸಕರಾದರೂ ಹೇಳಿದ್ದಾರೆಯೇ?: ಬಿಜೆಪಿ 50 ಕೋಟಿ ಆಫರ್ ನೀಡಿದೆ ಎಂದು ಅಥವಾ ಮಧ್ಯವರ್ತಿಯನ್ನು ಹೆಸರಿಸಿ ಕಾಂಗ್ರೆಸ್ಸಿನ ಒಬ್ಬ MLA ಆದರೂ ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಆದವರು ಸ್ವಲ್ಪ ಜವಾಬ್ದಾರಿ ಅರಿತು ಮಾತನಾಡಬೇಕಾಗುತ್ತದೆ ಎಂದು ಸಿಎಂರನ್ನು ಕುಟುಕಿದರು.

ಸಿಎಂ, ಮತ್ತವರ ತಂಡದ ಆರೋಪ ನೋಡಿದರೆ ಕಾಂಗ್ರೆಸ್ ಶಾಸಕರನ್ನು ಇವರು ಮಾರುಕಟ್ಟೆಯಲ್ಲಿ ಇಟ್ಟಂತೆ ಕಾಣುತ್ತದೆ. ಮಾರುಕಟ್ಟೆಯಲ್ಲಿ ಸಿಗೋದು ಕುರಿ, ಕೋಣ, ಕತ್ತೆಗಳು ಶಾಸಕರಲ್ಲ ಎಂದು ಹರಿಹಾಯ್ದರು.

ಸಿಎಂಗೆ ಏನಾದ್ರೂ ಸೆನ್ಸ್ ಇದೆಯೇ? ಒಬ್ಬೊಬ್ಬ ಶಾಸಕರಿಗೆ 50 ಕೋಟಿ ಅಂದರೆ 2500 ಕೋಟಿ ರೂಪಾಯಿ ಆಗುತ್ತದೆ. ಸಿಎಂಗೆ ಸ್ವಲ್ಪವಾದರೂ ಸೆನ್ಸ್ ಇದೆಯೇ? ಎಂದು ಪ್ರಶ್ನಿಸಿದ ಪ್ರಲ್ಹಾದ ಜೋಶಿ, ಸಿಎಂ ರಾಜಕಾರಣ ಮಾಡಬೇಕೆಂಬ ಕಾರಣಕ್ಕೆ ಹೀಗೆ ಏನೆಲ್ಲ ಹೇಳುವುದು ಸರಿಯಲ್ಲ ಎಂದು ಖಂಡಿಸಿದರು.

ಇದನ್ನೂ ಓದಿ: ನಿರ್ಮಲಾನಂದ ಶ್ರೀಗಳಿಂದ ಜೇಡರಳ್ಳಿ ಕೃಷ್ಣಪ್ಪಗೆ ವಿಶ್ವಮಾನ್ಯ ಒಕ್ಕಲಿಗ ಪ್ರಶಸ್ತಿ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News