ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ವಿರುದ್ದ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿ ಇವರೇ ?

Delhi Assembly Election 2025: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ  ಎನ್ನುವುದೇ ಸದ್ಯದ ಕುತೂಹಲ. 

Written by - Ranjitha R K | Last Updated : Nov 18, 2024, 01:14 PM IST
  • ದೆಹಲಿ ವಿಧಾನಸಭಾ ಚುನಾವಣೆಯ ಚರ್ಚೆ ತೀವ್ರಗೊಂಡಿದೆ.
  • ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಭರವಸೆಯಲ್ಲಿ ಬಿಜೆಪಿ
  • ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಆಪ್
ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ವಿರುದ್ದ ಕಣಕ್ಕಿಳಿಯಲಿರುವ ಬಿಜೆಪಿ ಅಭ್ಯರ್ಥಿ ಇವರೇ ?   title=

Delhi Assembly Election 2025 : ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಗಳು ಅಂತಿಮ ಹಂತದಲ್ಲಿದ್ದು, ನವೆಂಬರ್ 20 ರಂದು ಮತದಾನ ನಡೆಯಲಿದೆ. ಇದರೊಂದಿಗೆ ದೆಹಲಿ ವಿಧಾನಸಭಾ ಚುನಾವಣೆಯ ಚರ್ಚೆ ತೀವ್ರಗೊಂಡಿದೆ. ಹಲವು ದಶಕಗಳಿಂದ ಅಧಿಕಾರದಿಂದ ಹೊರಗುಳಿದಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಬಾರಿ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಭರವಸೆಯಲ್ಲಿದೆ.ಇನ್ನೊಂದೆಡೆ, ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿಯಲ್ಲಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎನ್ನುವುದೇ ಕುತೂಹಲ. 

ಕೇಜ್ರಿವಾಲ್ ವಿರುದ್ದ ತೊಡೆ ತಟ್ಟುವವರು ಯಾರು ? :  
ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ದೆಹಲಿ ವಿಧಾನಸಭಾ ಚುನಾವಣೆ 2025 ರಲ್ಲಿ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಬಹುದು.ಈ ಕ್ಷೇತ್ರದಲ್ಲಿ ಕೇಜ್ರಿವಾಲ್ ಅವರನ್ನು ಶ ಕಣಕ್ಕಿಳಿಸಲಿದೆ  ಎನ್ನುವುದೇ ಸದ್ಯದ ಕುತೂಹಲ. 
ತಾಯಗತಾಯ ಸೋಲಿಸಲೇಬೇಕು ಎನ್ನುವ ತವಕದಲ್ಲಿದೆ ಭಾರತೀಯ ಜನತಾ ಪಕ್ಷ. ಇದಕ್ಕಾಗಿ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ನಡೆಸುತ್ತಿದೆ.ಕೇಜ್ರಿವಾಲ್ ವಿರುದ್ಧ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಕಣಕ್ಕಿಳಿಸಬೇಕು ಎನ್ನುವುದು ಪಕ್ಷದ ಕೆಲವರ ಮಾತು. 

ಇದನ್ನೂ ಓದಿ : ತರಗತಿಗಳ ಅವಧಿ ಹೆಚ್ಚಿಳ.. ಶಾಲಾ ಸಮಯದಲ್ಲಿ ಮಹತ್ವದ ಬದಲಾವಣೆ ಹೊರಡಿಸಿದ ಸರ್ಕಾರ!

2024 ರಲ್ಲಿ ನವದೆಹಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ  ಬಾನ್ಸುರಿ ಸ್ವರಾಜ್ ಕೂಡ ಬಿಜೆಪಿಯ ಒಂದು ಆಯ್ಕೆ. ಬಾನ್ಸುರಿ ಸ್ವರಾಜ್ ಯುವಕರು ಮತ್ತು ಮಹಿಳೆಯರ ಬೆಂಬಲವಿದೆ. ಅವರು ದೆಹಲಿಯ ವಿವಿಧ ವಿಷಯಗಳ ಬಗ್ಗೆ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಲ್ಲದೇ ಮೂರು ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಮನೋಜ್ ತಿವಾರಿ ಅವರನ್ನೂ ಬಿಜೆಪಿ ಕೇಜ್ರಿವಾಲ್ ವಿರುದ್ದ ಕಣಕ್ಕಿಳಿಸಬಹುದು. ಲೋಕಸಭೆ ಚುನಾವಣೆ ವೇಳೆ ಟಿಕೆಟ್ ರದ್ದುಗೊಂಡ ಸಂಸದರಿಗೆ 2025ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಹೇಳಲಾಗುತ್ತಿದೆ.

 ಹೊಸದಿಲ್ಲಿಯಿಂದ ಮೂರು ಬಾರಿ ಕೇಜ್ರಿವಾಲ್ ಜಯಭೇರಿ : 
ಅರವಿಂದ್ ಕೇಜ್ರಿವಾಲ್ ಹೊಸದಿಲ್ಲಿ ವಿಧಾನಸಭೆಯಿಂದ ಸತತವಾಗಿ ಗೆಲುವು ಸಾಧಿಸುತ್ತಿದ್ದಾರೆ. ಕೇಜ್ರಿವಾಲ್ ಅವರು 2013, 2015 ಮತ್ತು 2020 ರ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಗೆದ್ದಿದ್ದಾರೆ. 2014 ಮತ್ತು 2019ರಲ್ಲಿ ಹೊಸದಿಲ್ಲಿಯ ಲೋಕಸಭಾ ಕ್ಷೇತ್ರ ಬಿಜೆಪಿ ಖಾತೆಗೆ ಬಂದಿತ್ತು ಎಂಬುದು ಗಮನಿಸಬೇಕಾದ ಸಂಗತಿ. ಆದರೆ, ಈ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆ ನಡೆದಾಗ ಬಿಜೆಪಿ ಅಭ್ಯರ್ಥಿ ಕೇಜ್ರಿವಾಲ್ ಅವರನ್ನು ಸೋಲಿಸುವುದು ಬಿಜೆಪಿಗೆ ಸಾಧ್ಯವಾಗಲಿಲ್ಲ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕೇಜ್ರಿವಾಲ್ ಮತ್ತೊಮ್ಮೆ ತಮ್ಮ ಮೀಸಲು ಕ್ಷೇತ್ರವಾದ ನವದೆಹಲಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾದರೆ ಇದು ನಾಲ್ಕನೇ ಬಾರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. 

ಬಿಜೆಪಿ ಸಿಎಂ ಅಭ್ಯರ್ಥಿ ಯಾರು ? :
ದೆಹಲಿ ವಿಧಾನಸಭಾ ಚುನಾವಣೆ 2025: ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ. ಆದರೆ, ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಮುಖ್ಯಮಂತ್ರಿ ಯಾರೆಂದು ಇನ್ನೂ ನಿರ್ಧರಿಸಲಾಗಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News