IND Vs AUS: ಮೊದಲ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾ ತಂಡಕ್ಕೆ ಬಿಗ್‌ ಶಾಕ್‌..!

IND Vs AUS: ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿರುವ ಭಾರತ ತಂಡ ಆಟಗಾರರಿಗೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ರೋಹಿತ್ ಶರ್ಮಾ ಈಗಾಗಲೇ ಈ ಸರಣಿಯಿಂದ ದೂರ ಉಳಿಯಲಿದ್ದು, ಬೆರಳಿನ ಗಾಯದಿಂದಾಗಿ ಶುಭಮನ್ ಗಿಲ್ ಕೂಡ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. 
 

1 /9

IND Vs AUS: ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿರುವ ಭಾರತ ತಂಡ ಆಟಗಾರರಿಗೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ರೋಹಿತ್ ಶರ್ಮಾ ಈಗಾಗಲೇ ಈ ಸರಣಿಯಿಂದ ದೂರ ಉಳಿಯಲಿದ್ದು, ಬೆರಳಿನ ಗಾಯದಿಂದಾಗಿ ಶುಭಮನ್ ಗಿಲ್ ಕೂಡ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.   

2 /9

ಗಾಯದ ತೀವ್ರತೆ ಎಷ್ಟಿದೆ ಎಂಬುದು ಗೊತ್ತಾಗಿಲ್ಲ ಆದರೆ ಫೋಟೋ ನೋಡಿದರೆ ಕುತ್ತಿಗೆ ನೋವಿನಿಂದ ನರಳುತ್ತಿರುವಂತೆ ಕಾಣುತ್ತಿದೆ. ಇದರಿಂದಾಗಿ ನವೆಂಬರ್ 22 ರಿಂದ ಪರ್ತ್‌ನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಅವರು ಭಾಗವಹಿಸುವುದು ಅನುಮಾನವಾಗಿದೆ.  

3 /9

ಆರಂಭಿಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಮಗಳ ಜನನದಿಂದಾಗಿ ಆಟದಿಂದ ದೂರ ಉಳಿದಿದ್ದಾರೆ. ಶುಭಮನ್ ಗಿಲ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ.   

4 /9

ಇದೀಗ ಜೈಸ್ವಾಲ್ ಕೂಡ ಗಾಯದ ಸಮಸ್ಯೆಯಿಂದ ಟೆಸ್ಟ್ ಪಂದ್ಯದಿಂದ ದೂರ ಉಳಿದರೆ ಓಪನರ್ ಗಳಾಗಿ ಯಾರು ಬರುತ್ತಾರೆ ಎಂಬುದು ಅನುಮಾನ ಶುರುವಾಗಿದೆ.  

5 /9

ಜೈಸ್ವಾಲ್ ಫಿಟ್ ಆಗಿದ್ದರೆ ಮಾತ್ರ ಅವರನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಈಗ ಗೈರುಹಾಜರಾಗಿರುವುದರಿಂದ ಅವರ ಸ್ಥಾನಕ್ಕೆ ರಾಹುಲ್ ಮತ್ತು ಪಡಿಕ್ಕಲ್ ಬರಲಿದ್ದಾರೆ.  

6 /9

ಒಂದು ವೇಳೆ ಜೈಸ್ವಾಲ್ ಫಿಟ್ ಆಗಿದ್ದರೆ ಅವರು ಹಾಗೂ ರಾಹುಲ್ ಓಪನರ್ ಆಗುವ ಸಾಧ್ಯತೆ ಇದೆ. ಹಾಗಾಗದೇ ಇದ್ದರೆ ಟೀಮ್ ಮ್ಯಾನೇಜ್ ಮೆಂಟ್ ಏನು ಮಾಡುತ್ತೋ ನೋಡೋಣ.   

7 /9

ಟೀಂ ಇಂಡಿಯಾದ ಮೊದಲ ಪಂದ್ಯದಲ್ಲಿ ಹಿರಿಯ ಬೌಲರ್ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ. ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ತಂಡವನ್ನು ಸೇರಿಕೊಳ್ಳಲಿದ್ದಾರೆ.  

8 /9

ಜೈಸ್ವಾಲ್ ಪರ್ತ್ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವಷ್ಟು ಫಿಟ್ ಆಗುತ್ತಾರೆ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಸದ್ಯ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ರಿಷಬ್ ಪಂತ್ ಮೇಲೆ ನಿರೀಕ್ಷೆ ಇಟ್ಟುಕೊಂಡಿದೆ.   

9 /9

ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಧ್ರುವ ಜುರೆಲ್, ನಿತೀಶ್ ರೆಡ್ಡಿ, ಅಶ್ವಿನ್, ಬುಮ್ರಾ, ಸಿರಾಜ್ ಮತ್ತು ಆಕಾಶ್ ದೀಪ್ ಅಂತಿಮ ಭಾರತೀಯ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.