CBSE Class 10 and 12 Board Exam: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್- ಸಿಬಿಎಸ್ಇ 2024-25ನೇ ಸಾಲಿನ 10ನೇ ತರಗತಿ ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ದಿನಾಂಕ ಪ್ರಕಟಿಸಿದೆ. ಸಿಬಿಎಸ್ಇ ಅಧಿಕೃತ ವೆಬ್ಸೈಟ್ cbse.gov.in ನಲ್ಲಿ ನವೆಂಬರ್ 20ರಂದು ಅಧಿಸೂಚನೆ ಹೊರಡಿಸಲಾಗಿದ್ದು,10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಡೇಟ್ಶೀಟ್ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ- CBSE 10 ಮತ್ತು 12ನೇ ತರಗತಿ ಸಿಲೆಬಸ್ ಗೆ ಕತ್ತರಿ ವಿಚಾರದ ಬಗ್ಗೆ ಬೋರ್ಡ್ ಹೇಳಿದ್ದೇನು?
ಸಿಬಿಎಸ್ಇ ಅಧಿಕೃತ ವೆಬ್ಸೈಟ್ ಪ್ರಕಾರ, 2024-2025ನೇ ಸಾಲಿನ ಸಿಬಿಎಸ್ಇ 10ನೇ ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳು 15 ಫೆಬ್ರವರಿ 2025ರಿಂದ ಆರಂಭವಾಗಲಿವೆ. 10 ನೇ ತರಗತಿ ಬೋರ್ಡ್ ಪರೀಕ್ಷೆಯು ಮಾರ್ಚ್ 18, 2025 ರಂದು ಕೊನೆಗೊಳ್ಳುತ್ತದೆ ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಯು ಏಪ್ರಿಲ್ 4, 2025 ರಂದು ಕೊನೆಗೊಳ್ಳುತ್ತದೆ.
ಇದನ್ನೂ ಓದಿ- ತೋಟಗಾರಿಕಾ ಬಿ.ಎಸ್.ಸಿ ಪದವಿಯಲ್ಲಿ 16 ಚಿನ್ನದ ಪದಕ ಬಾಚಿದ ವಿದ್ಯಾರ್ಥಿನಿ
ಗಮನಾರ್ಹವಾಗಿ, ಇದೇ ಮೊದಲ ಬಾರಿಗೆ ಸಿಬಿಎಸ್ಇ ಪರೀಕ್ಷಾ ಮಂಡಳಿಯು ಪರೀಕ್ಷೆ ಆರಂಭವಾಗುವ ಕನಿಷ್ಠ 86ದಿನಗಳ ಮೊದಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ತಯಾರಿ ನಡೆಸಲು ಹೆಚ್ಚಿನ ಸಮಯಾವಕಾಶ ದೊರೆತಂತಾಗಿದೆ.
2025 ರ ಬೋರ್ಡ್ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುವ ವಿದ್ಯಾರ್ಥಿಗಳು CBSE, cbse.gov.in ಮತ್ತು cbse.nic.in ನ ಅಧಿಕೃತ ವೆಬ್ಸೈಟ್ಗಳಲ್ಲಿ ಡೇಟ್ಶೀಟ್ ಪರಿಶೀಲಿಸಬಹುದು.
CBSE 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಡೇಟ್ಶೀಟ್ 2025 ಅನ್ನು ಡೌನ್ಲೋಡ್ ಮಾಡಲು ನೇರ ಲಿಂಕ್
ಈ ವರ್ಷ, ದೇಶಾದ್ಯಂತ ಮತ್ತು 26 ದೇಶಗಳ 8,000 ಶಾಲೆಗಳ 44 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಬಿಎಸ್ಇ 10 ಮತ್ತು 12 ನೇ ಪರೀಕ್ಷೆಯಲ್ಲಿ ಹಾಜರಾಗಲಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ