ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪ ಚುನಾವಣೆ ಸರ್ಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ. ಕಾಂಗ್ರೆಸ್ ನವರು ಇದು ಸರ್ಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅವಗತ್ಯವಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಆಗಿಲ್ಲ ಅಂತ ಭ್ರಮ ನಿರಸನಗೊಂಡಿದ್ದಾರೆ. ಈ ಚುನವಣೆ ಫಲಿತಾಂಶ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಿದರು.
ಇದನ್ನೂ ಓದಿ:17ನೇ ವಯಸ್ಸಿನಲ್ಲಿಯೇ ಸ್ಟಾರ್ ನಟಿ.. 23ರ ಹರೆಯದಲ್ಲಿ S*X ಸ್ಕ್ಯಾಂಡಲ್, ಹೋಟೆಲ್ನಲ್ಲಿ ಸಿಕ್ಕಿ ಬಿದ್ದ ಚೆಲುವೆ..!
ಇನ್ನು ಗ್ಯಾರೆಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ತಮ್ಮ ಪಕ್ಷದ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ಸಿದ್ದತೆ ಮಾಡಿಕೊಳ್ಳದೇ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಲಕ್ಷ ಕೋಟಿಗಿಂತಲೂ ಹೆಚ್ಚು ಸಾಲ ಮಾಡಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದೆ. ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸುಮಾರು ಎರಡು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿದೆ. ಅಂಗನವಾಡಿ ಕಾರ್ಯಕರ್ತೆಯರು, ಗುತ್ತಿಗೆ ನೌಕರರಿಗೆ ಸಂಬಳ ಆಗುತ್ತಿಲ್ಲ. ಹಣ ಬಿಡುಗಡೆಯಾಗುತ್ತಿಲ್ಲ ಎನ್ನುವ ಕಾರಣಕ್ಕೆ ಟೆಂಡರ್ ಕರೆದರೂ ಕೆಲಸ ಮಾಡಲು ಕಾಂಟ್ರ್ಯಾಕ್ಟರ್ ಬರುತ್ತಿಲ್ಲ ಎಂದು ಹೇಳಿದರು.
ಬಿಜೆಪಿಯಲ್ಲಿ ಬಿನ್ನಮತ ಹೆಚ್ಚಾಗಿದಿಯಾ ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಎಲ್ಲರೂ ಬಿಜೆಪಿ ಪರವಿದ್ದಾರೆ. ಕೆಲವು ವಿಚಾರಗಳಲ್ಲಿ ಭಿನ್ನ ಅಭಿಪ್ರಾಯಗಳಿವೆ. ಒಂದು ತಿಂಗಳಲ್ಲಿ ಎಲ್ಲವೂ ಸರಿಯಾಗುವ ವಿಶ್ವಾಸವಿದೆ. ಬಿಜೆಪಿಯ ಒಂದು ತಂಡ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅಕ್ರಮವಾಗಿ ಗನ್ ಮಾರಾಟ ಮಾಡುತ್ತಿರುವ ಜಾಲದ ಕುರಿತು ಕೇಳಿದ ಪ್ರಶ್ನೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪೊಲಿಸ್ ಸ್ಟೇಷನ್ ಗಳು, ಕಲೆಕ್ಷನ್ ಸೆಂಟರ್ ಆಗಿವೆ. ಭಯೊತ್ಪಾದನೆಗೆ ಬೆಂಬಲಕೊಡುವವರನ್ನು ರಕ್ಷಿಸುತ್ತಾರೆ. ಬಂಗ್ಲಾ ನಿರಾಶ್ರಿತರು ನುಸುಳುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪರಿಸ್ಥಿತಿ ಕಷ್ಟವಾಗಲಿದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.