ಸರ್ಕಾರದ ಜನಪ್ರಿಯ ಯೋಜನೆ: ಒಮ್ಮೆ ಹಣ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ₹ 9,250 ಗಳಿಸುವ ಅವಕಾಶ!

Post Office Monthly Income Scheme: ಜನರು ಸುರಕ್ಷಿತ ಹೂಡಿಕೆ ದೃಷ್ಟಿಯಿಂದ ಸರ್ಕಾರಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ಇಚ್ಚಿಸುತ್ತಾರೆ. ನೀವೂ ಕೂಡ ನಿಯಮಿತ ಮಾಸಿಕ ಆದಾಯಕ್ಕಾಗಿ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಅಂಚೆ ಕಚೇರಿಯ ಮಾಸಿಕ ಆದಾಯ ಯೋಜನೆ ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. 

Written by - Yashaswini V | Last Updated : Nov 27, 2024, 12:28 PM IST
  • ಪೋಸ್ಟ್ ಆಫೀಸ್ ಯೋಜನೆಗಳ ಬಡ್ಡಿದರವನ್ನು ಪ್ರತಿ ತ್ರೈಮಾಸಿಕದಲ್ಲಿ ಪರಿಶೀಲಿಸಲಾಗುತ್ತದೆ.
  • ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) ಅಂಚೆ ಕಚೇರಿಯ ಮಾಸಿಕ ಆದಾಯ್ ಆಯೋಜನೆಯಲ್ಲಿ 7.4% ಬಡ್ಡಿ ನೀಡಲಾಗುತ್ತಿದೆ.
ಸರ್ಕಾರದ ಜನಪ್ರಿಯ ಯೋಜನೆ: ಒಮ್ಮೆ ಹಣ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು  ₹ 9,250 ಗಳಿಸುವ ಅವಕಾಶ!  title=

Post Office Monthly Income Scheme: ಸಾರ್ವಜನಿಕರಿಗೆ ಉತ್ತಮ ಆದಾಯ ಗಳಿಸಲು ಭಾರತೀಯ ಅಂಚೆ ಇಲಾಖೆ ಹಲವು ರೀತಿಯ ಸಣ್ಣ ಉಳಿತಾಯ ಯೋಜನೆಗಳನ್ನು ನಿರ್ವಹಿಸುತ್ತದೆ. ಅದರಲ್ಲಿ ಒಂದು ಆಕರ್ಷಕ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿ ಪ್ರತಿ ತಿಂಗಳು ಸುಮಾರು 10,000 ರೂ.ವರೆಗೆ ಆದಾಯವನ್ನು ಗಳಿಸಬಹುದು. ಅದುವೇ ಅಂಚೆ ಕಚೇರಿಯ ಮಾಸಿಕ ಆದಾಯ ಯೋಜನೆ(POMIS). 

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿ ಪ್ರತಿ ತಿಂಗಳು ನಿಯಮಿತ ಆದಾಯವನ್ನು ಗಳಿಸಬಹುದು. ಈ ಯೋಜನೆಯಲ್ಲಿ ಮಿನಿಮಂ 5 ವರ್ಷಗಳವರೆಗೆ ಹೂಡಿಕೆ ಮಾಡಬೇಕಾಗುತ್ತದೆ. ಅಂಚೆ ಕಚೇರಿ ಯೋಜನೆಗಳ ಬಡ್ಡಿದರವನ್ನು ಪ್ರತಿ ತ್ರೈಮಾಸಿಕದಲ್ಲಿ ಪರಿಷ್ಕರಿಸಲಾಗುತ್ತದೆ. ಪ್ರಸ್ತುತ, ಪೋಸ್ಟ್ ಆಫೀಸ್ ಯೋಜನೆಗಳಲ್ಲಿ 7.4% ಬಡ್ಡಿಯನ್ನು ನೀಡಲಾಗುತ್ತಿದೆ. 

ಇದನ್ನೂ ಓದಿ- ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಈಗ ಟ್ರೈನ್ ಟಿಕೆಟ್'ಗಾಗಿ ಸರತಿಯಲ್ಲಿ ನಿಲ್ಲುವ ಅಗತ್ಯವಿಲ್ಲ!

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯಲ್ಲಿ ಒಂದು ಖಾತೆಯಲ್ಲಿ ಗರಿಷ್ಠ 9 ಲಕ್ಷ ರೂ. ಠೇವಣಿ ಮಾಡಬಹುದು. ನೀವು ಜಂಟಿ ಖಾತೆಯಲ್ಲಿ ಹೂಡಿಕೆ ಮಾಡಲು ಬಯಸಿದರೆ ಈ ಸಂದರ್ಭದಲ್ಲಿ 15 ಲಕ್ಷ ರೂ.ಗಳನ್ನು ಹೂಡಿ,ಎ ಮಾಡಬಹುದು. 

ಇದನ್ನೂ ಓದಿ- ಈ ಸರ್ಕಾರಿ ಯೋಜನೆಯಲ್ಲಿ ಕೇವಲ 7 ರೂ. ಉಳಿಸಿ, ತಿಂಗಳಿಗೆ 5000 ರೂ. ಪಡೆಯಿರಿ...!

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯ ಬಡ್ಡಿ ಲೆಕ್ಕಾಚಾರ: 
ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯಲ್ಲಿ ಜಂಟಿ ಖಾತೆಯಲ್ಲಿ 15 ಲಕ್ಷ ರೂ.ಗಳನ್ನು ಒಮ್ಮೆ ಠೇವಣಿ ಇಟ್ಟರೆ ಇದರಲ್ಲಿ ಪ್ರತಿ ತಿಂಗಳು ₹ 9,250 ಹಣವನ್ನು ಬಡ್ಡಿಯಾಗಿ ಸ್ವೀಕರಿಸಬಹುದು. ಈ ಯೋಜನೆಯಲ್ಲಿ 5 ವರ್ಷಗಳವರೆಗೆ ಸ್ಥಿರ ಆದಾಯ ಲಭ್ಯವಿರುತ್ತದೆ. 

ಗಮನಾರ್ಹವಾಗಿ, ಅಂಚೆ ಕಚೇರಿ ಯೋಜನೆಗಳು ಸರ್ಕಾರಿ ಯೋಜನೆಗಳಾಗಿರುವುದರಿಂದ ಇದರಲ್ಲಿ ಹೂಡಿಕೆಯ ಮೇಲೆ ಖಚಿತ ಆದಾಯದ ಜೊತೆಗೆ ಹಣ ಮುಳುಗುವ ಅಪಾಯವೂ ಇರುವುದಿಲ್ಲ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News