ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ‌

Leader of Opposition R Ashok: ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ.

Written by - Prashobh Devanahalli | Last Updated : Nov 29, 2024, 06:12 PM IST
    • ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ
    • ಇವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ
    • ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ
ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ‌ title=
R Ashok

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Video :ತಲೆ ತುಂಬಾ ಎಣ್ಣೆ ಸಿಂಪಲ್ ಚೂಡಿದಾರ ಹಾಕಿ ಫಿಲಂ ಫೇರ್ ಅವಾರ್ಡ್ ತೆಗೆದುಕೊಳ್ಳಲು ಬಂದ ನಟಿ !ಇಂಡಸ್ಟ್ರಿಯನ್ನೇ ಆಳುತ್ತಿರುವ ಈ ನಟಿಯ ಅವತಾರಕ್ಕೆ ಬಾಲಿವುಡ್ ಫುಲ್ ಶಾಕ್  

ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದರು.

ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರಪ್ರದೇಶದಲ್ಲಿ ಮೌಲ್ವಿ ಸರ್ಕಾರಕ್ಕೆ ಬೆದರಿಕೆ ಹಾಕುತ್ತಾನೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡಲ್ಲ ಎಂದು ಕೆಲವರು ಹೇಳುತ್ತಾರೆ. ದೇವೇಗೌಡರನ್ನೇ ಖರೀದಿ ಮಾಡುತ್ತೇನೆಂದು ಸಚಿವ ಜಮೀರ್ ಹೇಳಿದ್ದರು. ಆದರೆ ಸರ್ಕಾರ ಅದರ ವಿರುದ್ಧ ಕ್ರಮ ವಹಿಸಿಲ್ಲ. ಒಕ್ಕಲಿಗರ ವಿರುದ್ಧ ಕಾಂಗ್ರೆಸ್ ದ್ವೇಷ ಸಾಧಿಸುವುದು ಹೇಯ. ಸರ್ಕಾರ ಸ್ವಾಮೀಜಿಯವರನ್ನು ಮುಟ್ಟುವ ಕೆಲಸ ಮಾಡಿದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಎಚ್ಚರಿಕೆ ನೀಡಿದರು.

ಪಾಕಿಸ್ತಾನ ಪರ ಘೋಷಣೆ ಹಾಕಿದವರ ವಿರುದ್ಧ ಸರ್ಕಾರ ಕ್ರಮ ವಹಿಸಿಲ್ಲ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಒಮ್ಮೆ ಒಕ್ಕಲಿಗರ ಪರ ಮಾತಾಡಿದರೆ, ಮತ್ತೆ ಭಯೋತ್ಪಾದಕರನ್ನು ಬ್ರದರ್ ಎನ್ನುತ್ತಾರೆ. ಆದರೆ ಬಿಜೆಪಿ ಎಂದಿಗೂ ಹಿಂದೂಗಳ ಪರ ನಿಲ್ಲಲಿದೆ ಎಂದರು.

ಇದನ್ನೂ ಓದಿ: ವರ್ಷದಲ್ಲಿ ಕೇವಲ 90 ದಿನವಷ್ಟೇ ಸಿಗುವ ಹಣ್ಣು: ಒಮ್ಮೆ ತಿಂದರೆ ಸೊಂಟದ ಕೊಬ್ಬು ನಿಮಿಷಗಳಲ್ಲಿ ಕರಗುತ್ತದೆ! ಮಧುಮೇಹಿಗಳಿಗೂ ಇದು ಸಂಜೀವಿನಿ

ಸ್ವಾಮೀಜಿಯವರಿಗೆ ತಿಳಿ ಹೇಳುವ ಬದಲು ಪೊಲೀಸರು ನೋಟಿಸ್ ನೀಡಿದ್ದಾರೆ. ಈಗ ಒಕ್ಕಲಿಗ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಸಮುದಾಯದ ವಿರುದ್ಧ ಸರ್ಕಾರ ಈ ರೀತಿ ದ್ವೇಷ ಕಾರುತ್ತಿರುವುದನ್ನು ಸಮುದಾಯದ ಜನರು ಗಮನಿಸಬೇಕಿದೆ. ಸ್ವಾಮೀಜಿಗೆ ಕಿರುಕುಳ ನೀಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News