ಚಂದ್ರಶೇಖರನಾಥ ಸ್ವಾಮೀಜಿ ಹೇಳಿದಂತೆ ಬಿಜೆಪಿಗರು ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು

ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಗೆ ಬಿಜೆಪಿ ಬೆಂಬಲ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು,  ಈ ದೇಶದಲ್ಲಿ ಸಂವಿಧಾನ ಇದೆಯಲ್ಲಾ? ಸಂವಿಧಾನ ದಿನದ ಬಗ್ಗೆ ನಾವು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದೇವಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯಿಸಬೇಕಲ್ಲವೇ ಎಂದು ಪ್ರಶ್ನಿಸಿದರು.

Written by - Bhavishya Shetty | Last Updated : Nov 30, 2024, 06:31 PM IST
    • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು
    • ಸಂವಿಧಾನ ದಿನದ ಬಗ್ಗೆ ನಾವು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದೇವಲ್ಲವೇ?
    • ಚಂದ್ರಶೇಖರನಾಥ ಸ್ವಾಮೀಜಿಗೆ ಬಿಜೆಪಿ ಬೆಂಬಲ ನೀಡಿರುವ ಕುರಿತು ಪ್ರತಿಕ್ರಿಯೆ
ಚಂದ್ರಶೇಖರನಾಥ ಸ್ವಾಮೀಜಿ ಹೇಳಿದಂತೆ ಬಿಜೆಪಿಗರು ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು title=
Lakshmi Hebbalkar

ಉಡುಪಿ: ಮುಸ್ಲಿಂರಿಂದ ಮತದಾನದ ಹಕ್ಕನ್ನು ವಾಪಸ್ ಪಡೆಯಬೇಕು ಎಂದು ಚಂದ್ರಶೇಖರನಾಥ ಸ್ವಾಮೀಜಿ ಅವರು ನೀಡಿರುವ ಹೇಳಿಕೆ ಮಾದರಿಯಲ್ಲೇ ಬಿಜೆಪಿಯವರು ನೀಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ಸವಾಲು ಹಾಕಿದರು.

ಇದನ್ನೂ ಓದಿ: ಮದ್ಯ ಪ್ರಿಯರೇ ವಿಸ್ಕಿ ಕುಡಿಯೋ ವಿಧಾನ ನಿಮಗೆ ನಿಜಕ್ಕೂ ಗೊತ್ತಿಲ್ಲ... ಅದ್ಕೆ ಈ ಟ್ರಿಕ್ ಫಾಲೋ ಮಾಡಿ ಕಿಕ್ ಮಾತ್ರ ಬೇರೆ ಲೆವೆಲ್..! 

ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಗೆ ಬಿಜೆಪಿ ಬೆಂಬಲ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು,  ಈ ದೇಶದಲ್ಲಿ ಸಂವಿಧಾನ ಇದೆಯಲ್ಲಾ? ಸಂವಿಧಾನ ದಿನದ ಬಗ್ಗೆ ನಾವು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದೇವಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯಿಸಬೇಕಲ್ಲವೇ ಎಂದು ಪ್ರಶ್ನಿಸಿದರು.

ಒಂದುಕಡೆ ಪ್ರಧಾನಿ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ. ಸ್ವಾಮೀಜಿಗಳು ಹೇಳಿದಂತೆ ಬಿಜೆಪಿಯವರು ಹೇಳಿ ಬಿಡಲಿ ನೋಡೋಣ. ಸ್ವಾಮೀಜಿಗಳು ಇರುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡೋದಕ್ಕೆ, ಹಾಳು ಮಾಡೋದಿಕ್ಕೆ ಅಲ್ಲ ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಪಕ್ಕದಲ್ಲಿರುವ ಲೇಡಿ ಕಮಾಂಡೋ ನಿಜಕ್ಕೂ ಯಾರು ಗೊತ್ತೇ? ಅಸಲಿ ವಿಚಾರ ಗೊತ್ತಾದರೇ ಶಾಕ್‌ ಆಗುತ್ತೀರಾ!!

ಸಮಾಜದ ಸ್ವಾಸ್ಥ್ಯ ಕೆಡಿಸುವುದು ಸ್ವಾಮೀಜಿಗಳ ಕೆಲಸ ಅಲ್ಲ. ಸ್ವಾಮೀಜಿಗಳ ಬಗ್ಗೆ ಮಾತನಾಡುವಷ್ಟು ದೊಡ್ಡವಳು ನಾನಲ್ಲ. ಸ್ವಾಮೀಜಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು. ನಾವೆಲ್ಲಾ‌ ಭಾರತದಲ್ಲಿದ್ದೇವೆ ಅಂಬೇಡ್ಕರ್ ಅವರ ಸಂವಿಧಾನ ಇದೆ. ಈ ದೇಶದಲ್ಲಿ ರಾಷ್ಟ್ರಪತಿಯಿಂದ ಹಿಡಿದು ಜನಸಾಮಾನ್ಯರಿಗೂ ಒಂದೇ ಕಾನೂನು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುನರುಚ್ಚಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News