ಬೆಂಗಳೂರು : ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಇದರ ನಡುವೆ ರಾಜ್ಯ ಸರಕಾರವು ಸ್ವಾಮೀಜಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ ಎಂದು ಆಕ್ಷೇಪಿಸಿದರು.
ಇದನ್ನೂ ಓದಿ : ಫೆಂಗಲ್ ಅಬ್ಬರಕ್ಕೆ ಮಾದಪ್ಪನ ಬೆಟ್ಟದ ರಸ್ತೆಯಲ್ಲಿ 4 ತಾಸು ಟ್ರಾಫಿಕ್ ಜಾಮ್, ಗಡಿಜಿಲ್ಲೆಯಲ್ಲಿ ಅತ್ಯಧಿಕ ಮಳೆ
ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು. ಆದರೂ ಕೂಡಾ ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು. ರಾಜ್ಯ ಸರಕಾರವು ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ, ಮಠಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ. ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ ಎಂದು ಟೀಕಿಸಿದರು. ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ ಎಂದು ವಿವರಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಕೆಲವು ಮುಖಂಡರು ದೊಡ್ಡ ಸಭೆ ಮಾಡಿ ನಾವು ಸುಪ್ರೀಂ ಕೋರ್ಟಿನ ಮುಂದೆ ಹೋಗಿ ಭಿಕ್ಷೆ ಬೇಡುವುದಿಲ್ಲ, ನಿಮಗೆ ಸಂಸತ್ ಇದ್ದರೆ ನಮಗೆ ರಸ್ತೆಗಳಿವೆ. ನಾವೂ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ ನಿದರ್ಶನವಿದೆ. ಇದಕ್ಕೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಕೇಳಿದರು.
ನಿಮ್ಮ ಪಕ್ಕದಲ್ಲೇ ನಿಂತು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ರಕ್ಷಿಸುತ್ತೀರಿ. ಮಾಡಿದ ತಪ್ಪಿಗೆ ಆಕ್ರೋಶ ವ್ಯಕ್ತವಾದಾಗ, ಕ್ಷಮೆ ಕೇಳಿದ ಮೇಲೂ ಕ್ರಮ ಜರುಗಿಸುವುದಾದರೆ ದ್ವಿಮುಖ ನೀತಿ ನಿಮ್ಮದಲ್ಲವೇ? ಓಲೈಕೆ ನೀತಿ ಮೂಲಕ ಹಿಂದೂಗಳು, ರೈತರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸಿದರು. ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ. ಸರಕಾರದ ಅನ್ಯಾಯಗಳ ವಿಷಯವನ್ನು ಜನರಿಗೆ ಎತ್ತಿ ತೋರಿಸುವ ಕೆಲಸವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ. ದೇಶವಿರೋಧಿ, ಗಲಭೆ ಎಬ್ಬಿಸುವ ಹಾಗೂ ಸೌಹಾರ್ದತೆ ಹಾಳು ಮಾಡುವ ರೀತಿಯಲ್ಲಿ ಹೇಳಿಕೆ ಕೊಟ್ಟ ಇತರರ ಬಗ್ಗೆ ಸರಕಾರ ಯಾಕೆ ಕೇಸು ಹಾಕಿಲ್ಲ? ಅವರ ಮೇಲೂ ಪ್ರಕರಣ ದಾಖಲಿಸಬೇಕಿತ್ತಲ್ಲವೇ? ಕಾನೂನು ಬೇರೆ ಬೇರೆ ಇದೆಯೇ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.