384 KAS ಹುದ್ದೆಗೆ ಡಿಸೆಂಬರ್‌ 29ಕ್ಕೆ ಪೂರ್ವಭಾವಿ ಮರುಪರೀಕ್ಷೆ: ಇಲ್ಲಿದೆ ಮಹತ್ವದ ಪ್ರಕಟಣೆ

KAS Gazetted Probationary Prelims Re Exam: ಕೆಪಿಎಸ್‌ಸಿ 384 ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ದಿನಾಂಕವನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದು, ಅಭ್ಯರ್ಥಿಗಳು ಇಲ್ಲಿ ಚೆಕ್‌ ಮಾಡಿಕೊಳ್ಳಬಹುದು. ಈಗಾಗಲೇ ಅಡ್ಮಿಟ್‌ ಕಾರ್ಡ್‌ ಡೌನ್‌ಲೋಡ್‌ ಮಾಡಿಕೊಂಡಿದ್ದರೆ ತಪ್ಪದೇ ಈ ಮಾಹಿತಿಯನ್ನು ತಿಳಿದುಕೊಳ್ಳಿರಿ...  

Written by - Puttaraj K Alur | Last Updated : Dec 3, 2024, 09:11 PM IST
  • ಕೆಪಿಎಸ್‌ಸಿ 384 ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ದಿನಾಂಕವನ್ನು ಬಿಡುಗಡೆ ಮಾಡಿದೆ
  • ಈಗಾಗಲೇ ಅಡ್ಮಿಟ್‌ ಕಾರ್ಡ್‌ ಡೌನ್‌ಲೋಡ್‌ ಮಾಡಿಕೊಂಡಿರುವವರಿಗೆ ಮಹತ್ವದ ಸೂಚನೆ
  • ಒಟ್ಟು 384 ಹುದ್ದೆಗಳ ನೇಮಕಾತಿಗೆ ದಿನಾಂಕ 2024 ಫೆಬ್ರವರಿ 26ರಲ್ಲಿ ಅಧಿಸೂಚನೆ ಹೊರಡಿಸಿತ್ತು
384 KAS ಹುದ್ದೆಗೆ ಡಿಸೆಂಬರ್‌ 29ಕ್ಕೆ ಪೂರ್ವಭಾವಿ ಮರುಪರೀಕ್ಷೆ: ಇಲ್ಲಿದೆ ಮಹತ್ವದ ಪ್ರಕಟಣೆ title=
ಡಿಸೆಂಬರ್ 29ರಂದು ಪರೀಕ್ಷೆ

KAS Gazetted Probationary Prelims Re Exam: ಕರ್ನಾಟಕ ಲೋಕಸೇವಾ ಆಯೋಗ(KAS)ವು ಡಿಸೆಂಬರ್ 29ರಂದು ನಡೆಸಲು ಉದ್ದೇಶಿಸಿರುವ KAS-ಗೆಜೆಟೆಡ್‌ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆ ಸಂಬಂಧ ಮಹತ್ವದ ಪ್ರಕಟಣೆ ಹೊರಡಿಸಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ʼAʼ ಮತ್ತು 'B' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ದಿನಾಂಕ 2024 ಫೆಬ್ರವರಿ 26ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಸದರಿ KAS ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆಯನ್ನ ಇದೀಗ ಇದೇ ಡಿಸೆಂಬರ್‌ 29ರಂದು ನಡೆಸಲು ನಿಗದಿಪಡಿಸಿದೆ. ಈ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಲಾಗಿನ್‌ನಿಂದ ನವೆಂಬರ್‌ 26ರಂದು ತಂತ್ರಾಂಶದಲ್ಲಿನ ದೋಷದಿಂದ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಹೀಗಾಗಿ ಎಲ್ಲಾ ಅಭ್ಯರ್ಥಿಗಳಿಗೆ ಇದೀಗ ಪ್ರಮುಖ ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಗಳ ಜಾಮೀನು ಅರ್ಜಿ

ಆಯೋಗವು ಡಿಸೆಂಬರ್‌ 29ರ ಪೂರ್ವಭಾವಿ ಮರುಪರೀಕ್ಷೆಯ ಸಂಬಂಧ ಯಾವುದೇ ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿರುವುದಿಲ್ಲ. ಆದ್ದರಿಂದ ತಾಂತ್ರಿಕ ದೋಷದಿಂದ ಪ್ರಸ್ತುತ ಡೌನ್‌ಲೋಡ್‌ ಮಾಡಿಕೊಂಡಿರುವ ಪ್ರವೇಶ ಪತ್ರಗಳನ್ನು ಅಸಿಂಧುಗೊಳಿಸಿದ್ದು, ಸದರಿ ಪ್ರವೇಶ ಪತ್ರವು ಮುಂದೆ ನಡೆಯುವ ಪರೀಕ್ಷೆಗೆ ಮಾನ್ಯವಾಗಿರುವುದಿಲ್ಲ. ಆದ್ದರಿಂದ ಎಲ್ಲಾ ಅಭ್ಯರ್ಥಿಗಳಿಗೆ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳುವ ಕುರಿತು ಮುಂದಿನ ದಿನಗಳಲ್ಲಿ ಪ್ರಕಟಣೆ ಜೊತೆಗೆ ಅಧಿಕೃತ ಲಿಂಕ್‌ಅನ್ನು ಲಭ್ಯಗೊಳಿಸಲಾಗುತ್ತದೆ ಎಂದು ತಿಳಿಸಿದೆ.

KPSC ಮತ್ತೆ ಅಡ್ಮಿಟ್‌ ಕಾರ್ಡ್‌ ಬಿಡುಗಡೆ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ಲಾಗಿನ್‌ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಆಗಸ್ಟ್‌ 27ರಂದು ಈ ಹಿಂದೆ KPSC KAS ಪೂರ್ವಭಾವಿ ಪರೀಕ್ಷೆಯನ್ನು ನಡೆಸಿದ್ದು, ಅಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಹಲವು ಲೋಪದೋಷಗಳಿಂದ ಕೂಡಿದ್ದ ಕಾರಣ, ಹಲವು ಅಭ್ಯರ್ಥಿಗಳು ಸಿಎಂ ಸಿದ್ದರಾಮಯ್ಯರಿಗೆ ಮರುಪರೀಕ್ಷೆಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ಸಿಎಂ ಅವರು ಮರುಪರೀಕ್ಷೆಗೆ ಆದೇಶಿಸಿದ್ದರು.  

ಇದನ್ನೂ ಓದಿ: ಯತ್ನಾಳ್‌ ಉಚ್ಛಾಟನೆಗೆ ಬಿಜೆಪಿ ನಾಯಕರ ಒತ್ತಡ

ಈ ಹಿಂದೆ ನಡೆದ KAS ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಹಲವು ದೋಷಗಳ ಕಾರಣ, ಇದೀಗ ಡಿಸೆಂಬರ್ 29ಕ್ಕೆ ಮರುಪರೀಕ್ಷೆಯನ್ನು KPSC ನಿಗದಿ ಮಾಡಿದೆ. ಈ ಮಧ್ಯೆ ಮರುಪರೀಕ್ಷೆ ಪ್ರಶ್ನಿಸಿ ಕೆಲವರು ಹೈಕೋರ್ಟ್‌ನ ಬೇರೆ ಬೇರೆ ನ್ಯಾಯಪೀಠಗಳಲ್ಲಿ ಸಲ್ಲಿಸಿರುವ ಅರ್ಜಿಗಳು, ಮರುಪರೀಕ್ಷೆಯ ತಡೆಯಾಜ್ಞೆ ಆದೇಶ- ಇವೆಲ್ಲವನ್ನು ತೆರೆವುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲು KPSC ಸಿದ್ಧತೆ ಮಾಡಿಕೊಂಡಿದೆ. ಡಿಸೆಂಬರ್ 9ರಂದು ಇದು ವಿಚಾರಣೆಗೆ ಬರಲಿದ್ದು, ಅಂದೇ ಈ ಕುರಿತು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.

KAS ಪರೀಕ್ಷೆಯಲ್ಲಿ ಪ್ರಮುಖವಾಗಿ 3 ಹಂತದ ಪರೀಕ್ಷೆಗಳಿರುತ್ತವೆ  

ಹಂತ I - ಪೂರ್ವಭಾವಿ ಪರೀಕ್ಷೆ : 2 ಪತ್ರಿಕೆಗಳಿದ್ದು, 400 ಅಂಕಗಳಿಗೆ ಪರೀಕ್ಷೆ ನಡೆಯಲಿದೆ
ಹಂತ II - ಮುಖ್ಯ ಪರೀಕ್ಷೆ: ಕಡ್ಡಾಯ ಪತ್ರಿಕೆಗಳು 2, ಐಚ್ಛಿಕ ಪತ್ರಿಕೆಗಳು 5.
ಹಂತ III - ವ್ಯಕ್ತಿತ್ವ ಪರೀಕ್ಷೆ : 50 ಅಂಕಗಳಿಗೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News