ಬೆಳಗಾವಿ : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಪ್ರಶ್ನೆಪತ್ರಿಕೆ ಅರ್ಧಗಂಟೆ ತಡವಾಗಿ ವಿತರಿಸಿರುವ ಕುರಿತು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಇದೀಗ ಘಟನೆಯ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ವಿಚಿತ್ರ ಆದ್ರೂ ಸತ್ಯ... ಮಗನನ್ನು ಶಾಲೆಗೆ ಕಳುಹಿಸಲು ಪೊಲೀಸರಿಗೆ ಕಾಲ್ ಮಾಡಿದ ಅಪ್ಪ..!
ವಿಧಾನ ಪರಿಷತ್ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ ಎಂದು ಸಿಎನ್ ಹೇಳಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದೆ. ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.