ಕೌನ್ಸಿಲಿಂಗ್ ಮೂಲಕ ಉಪ ನೋಂದಣಾಧಿಕಾರಿಗಳ ವರ್ಗಾವಣೆ: ರಾಜ್ಯ ಇತಿಹಾಸದಲ್ಲೇ ಮೊದಲ ಪ್ರಯತ್ನ

ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡ, ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್‌  ಮೂಲಕ ನಡೆಸುವುದಾಗಿ ಭರವಸೆ ನೀಡಿದ್ದರು.

Written by - Prashobh Devanahalli | Last Updated : Dec 12, 2024, 04:46 PM IST
  • ವರ್ಗಾವಣೆಯಲ್ಲಿ ಭ್ರಷ್ಟಾಚಾರ ತಡೆಗೆ ನಿರ್ಣಾಯಕ ಹೆಜ್ಜೆ
  • ವರ್ಗಾವಣೆ ಇತಿಹಾಸದಲ್ಲೇ ಇದು ಮೊದಲ ಪ್ರಯತ್ನ
  • ಒಂದು ರೂಪಾಯಿ ಭ್ರಷ್ಟಾಚಾರದ ಆರೋಪವಿಲ್ಲದೆ ವರ್ಗಾವಣೆ
ಕೌನ್ಸಿಲಿಂಗ್ ಮೂಲಕ ಉಪ ನೋಂದಣಾಧಿಕಾರಿಗಳ ವರ್ಗಾವಣೆ: ರಾಜ್ಯ ಇತಿಹಾಸದಲ್ಲೇ ಮೊದಲ ಪ್ರಯತ್ನ  title=

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ ಬಗ್ಗೆ ಈ ಹಿಂದೆ ಹಲವು ಬಾರಿ ದೂರುಗಳು ಕೇಳಿಬಂದಿದ್ದವು. ವರ್ಗಾವಣೆ ದಂಧೆಯ ಬಗ್ಗೆ ಹಲವು ನಾಯಕರು ಸದನದಲ್ಲೇ ಧ್ವನಿ ಎತ್ತಿದ್ದರು. ಹೀಗಾಗಿ ಈ ಎಲ್ಲಾ ಅವ್ಯವಹಾರಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡ, ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್‌  ಮೂಲಕ ನಡೆಸುವುದಾಗಿ ಭರವಸೆ ನೀಡಿದ್ದರು.

ಇದನ್ನೂ ಓದಿ : ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಅದರಂತೆ ಇಂದು ರಾಜ್ಯದ 31 ಜಿಲ್ಲೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪ ನೋಂದಣಿ ಕಚೇರಿಗಳಲ್ಲಿ ನೋಂದಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ 90ಜನ ಕೇಂದ್ರಸ್ಥಾನ ಸಹಾಯಕರು/ ಹಿರಿಯ ಉಪನೋಂದಣಾಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಈ ವರ್ಗಾವಣೆ ಅವಧಿಯಲ್ಲಿ ಒಂದು ರೂಪಾಯಿ ಸಹ ಹಣ ವಹಿವಾಟು ನಡೆದಿರುವ ಬಗ್ಗೆ ದೂರುಗಳು ಬಂದಿಲ್ಲ ಎಂಬುದು ಉಲ್ಲೇಖಾರ್ಹ.

ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ. ಮಹೇಶ್‌ ಅವರ ನೇತೃತ್ವದಲ್ಲಿ ನವೆಂಬರ್‌ 04ರಿಂದಲೇ ಕೌನ್ಸಿಲಿಂಗ್‌ ನಡೆಸಲಾಗಿತ್ತು. ಈ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿ ಸ್ವ-ಇಚ್ಚೆಯಿಂದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರ ಆಯ್ಕೆಯನ್ನು ಆಧರಿಸಿ ವರ್ಗಾಯಿಸಿ ಆದೇಶಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News