Upendra meets allu arjun : ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಶನಿವಾರ (ಡಿಸೆಂಬರ್ 14) ಮುಂಜಾನೆ ಚಂಚಲಗುಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಹಲವು ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಅವರ ಮನೆಗೆ ತೆರಳಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಅವರ ಯೋಗ ಆರೋಗ್ಯ ವಿಚಾರಿಸುತ್ತಿದ್ದಾರೆ. ಈ ವೇಳೆ ನಟ ಉಪೇಂದ್ರ ಹಾಗೂ ಲಹರಿ ಮ್ಯೂಸಿಕ್ ಸಂಸ್ಥೆಯ ಮಾಲೀಕ ಲಹರಿ ವೇಲು ಕೂಡ ಅಲ್ಲು ಅರ್ಜುನ್ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ.
ಉಪ್ಪಿ-ಅಲ್ಲು ಅರ್ಜುನ್ ( Allu Arjun ) ಭೇಟಿಯ ಫೋಟೋಗಳು ಮತ್ತು ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಉಪೇಂದ್ರ ಅವರು ತಮ್ಮ 'ಯುಐ' ಸಿನಿಮಾದ ಪ್ರಚಾರಕ್ಕಾಗಿ ಹೈದರಾಬಾದ್‌ನಲ್ಲಿದ್ದಾರೆ. ಇದೇ ವೇಳೆ ಅಲ್ಲು ಅರ್ಜುನ್ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
ಉಪೇಂದ್ರ ಮತ್ತು ಅಲ್ಲು ಅರ್ಜುನ್ ಈ ಹಿಂದೆ ‘ಸನ್ ಆಫ್ ಸತ್ಯಮೂರ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಮತ್ತೊಂದೆಡೆ, ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಅವರ ಗೀತಾ ಪ್ರೊಡಕ್ಷನ್ಸ್ ಆಂಧ್ರ ಮತ್ತು ತೆಲಂಗಾಣದಲ್ಲಿ ಉಪೇಂದ್ರ ನಾಯಕ ಮತ್ತು ನಿರ್ದೇಶಕರಾಗಿ 'ಯುಐ' ಅನ್ನು ವಿತರಿಸುತ್ತಿದೆ.
UI meets AA
Real Star Upendra and Lahari Music’s #Velu share a memorable moment with Telugu Star Allu Arjun in Hyderabad during the Promotions of #UITheMovie. #Upendra #AlluArjun#Cineloka pic.twitter.com/9qmGRzIx7s
— Cineloka.co.in (@cineloka) December 14, 2024
ಹೀಗಾಗಲೇ ಉಪ್ಪಿ ನಿರ್ದೇಶನ ಮತ್ತು ಅಭಿನಯದ 'ಯುಐ' ( UI movie ) ಚಿತ್ರದ ಹಾಡುಗಳು ಮತ್ತು ಟ್ರೇಲರ್ ಎಲ್ಲರನ್ನೂ ಆಕರ್ಷಿಸಿವೆ. ಚಿತ್ರವು ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಮತ್ತು ಇತರ ಭಾಷೆಗಳಲ್ಲಿ ಡಿಸೆಂಬರ್ 20 ರಂದು ಬಿಡುಗಡೆಯಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.