ನವದೆಹಲಿ: ಪ್ರಸಿದ್ಧ ತಬಲಾ ಮಾಂತ್ರಿಕ ಮತ್ತು ಸಂಯೋಜಕ ಜಾಕಿರ್ ಹುಸೇನ್ ಅವರು ಭಾನುವಾರದಂದು 73 ನೇ ವಯಸ್ಸಿನಲ್ಲಿ ನಿಧನರಾದರು.
ಅವರು ಭಾನುವಾರ ಮುಂಜಾನೆ ಹುಸೇನ್ ಹೃದಯ ಸಂಬಂಧಿ ಸಮಸ್ಯೆಗಳಿಂದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದರು ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ- ಪ್ರಪಂಚದ ಶ್ರೀಮಂತರ ಪೈಕಿ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಆಸ್ತಿಯ ಮೌಲ್ಯ ಒಟ್ಟು ಎಷ್ಟು ಗೊತ್ತಾ ?
ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾ ಅವರ ಹಿರಿಯ ಪುತ್ರರಾಗಿದ್ದ ಜಾಕಿರ್ ಹುಸೇನ್ ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಮೂಲಕ ವಿಶ್ವವಿಖ್ಯಾತಿಯನ್ನು ಪಡೆದಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಅವರು ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬೆಳಗಿದ್ದರು.
Tabla maestro Zakir Hussain, whose music united generations, has passed away at the age of 73. He had constantly spoken of the several Hindu traditions that he actively was taught and practiced throughout his stellar career. Om Shanti🙏 pic.twitter.com/tkR948f0TM
— Brijesh Kalappa (@brijeshkalappa) December 15, 2024
ಆರು ದಶಕಗಳ ಕಾಲದ ವೃತ್ತಿಜೀವನದಲ್ಲಿ, ಜಾಕಿರ್ ಹುಸೇನ್ ಹಲವಾರು ಭಾರತೀಯ ಮತ್ತು ಅಂತರರಾಷ್ಟ್ರೀಯ ಕಲಾವಿದರೊಂದಿಗೆ ಅವರು ತಬಲಾವನ್ನು ನುಡಿಸಿದ್ದಾರೆ.ಅದರಲ್ಲಿ ಪ್ರಮುಖವಾಗಿ ಇಂಗ್ಲಿಷ್ ಗಿಟಾರ್ ವಾದಕ ಜಾನ್ ಮೆಕ್ಲಾಫ್ಲಿನ್, ಪಿಟೀಲು ವಾದಕ ಎಲ್ ಶಂಕರ್ ಮತ್ತು ತಾಳವಾದ್ಯ ವಾದಕ ಟಿಎಚ್ 'ವಿಕ್ಕು' ವಿನಾಯಕ್ರಾಮ್ ಅವರೊಂದಿಗೆ ಅವರ ಜೊತೆಗಿನ 1973 ರ ಪ್ರಾಜೆಕ್ಟ್ ಇಂದಿಗೂ ಸ್ಮರಣೀಯವಾಗಿದೆ.
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಹುಸೇನ್ ಅವರಿಗೆ 1988 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪುರಸ್ಕಾರಗಳು ಲಭಿಸಿದ್ದವು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.